*  ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು*  ಎಲ್ಲ ಆಯಾಮದಲ್ಲೂ ತನಿಖೆ ನಡೆದಿದೆ*  ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿದೆ 

ಬೆಂಗಳೂರು(ಫೆ.24): ಕಾಂಗ್ರೆಸ್‌ನವರು(Congress) ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರ ನೀತಿ ಪಾಠ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ್ದಾರೆ.

ಬುಧವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ(Shivamogga) ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ(Harsha Murder) ನಂತರ ಪೊಲೀಸರು(Police) ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು, ವಿವಿಧ ತುಕಡಿಗಳು ಈಗಲೂ ಸ್ಥಳದಲ್ಲಿಯೇ ಬೀಡುಬಿಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್‌ ಹಾಕಲಾಗಿದೆ. ಸದ್ಯಕ್ಕೆ ದಿನ ಕಳೆದಂತೆ ಪರಿಸ್ಥಿತಿ ಸುಧಾರಿಸುತ್ತಿದೆ. ಯಾವುದೇ ರೀತಿಯ ಅಹಿತರ ಘಟನೆಗಳು ಮರುಕಳಿಸಿಲ್ಲ ಎಂದು ಹೇಳಿದರು.

ಹಿಂದೂ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳುವ ಶಕ್ತಿ ಬೊಮ್ಮಾಯಿ ಸರ್ಕಾರಕ್ಕೆ ಇಲ್ಲವೇ?: ಸ್ವಾಮೀಜಿ ಪ್ರಶ್ನೆ

ಜಿಲ್ಲೆಯಲ್ಲಿ ಮೊದಲು ಪರಿಸ್ಥಿತಿಯನ್ನು ಸುಧಾರಿಸಿ ಶಾಂತಿಯ(Peace) ವಾತಾವರಣ ನಿರ್ಮಿಸಬೇಕು. ಇದಕ್ಕಾಗಿ ಜನಪ್ರತಿನಿಧಿಗಳು ಸತತ ಪ್ರಯತ್ನ ಮಾಡುತ್ತಿದ್ದಾರೆ. ಈ ಘಟನೆಯಿಂದಾಗಿ ಜನರು ಕೊಂಚ ಆತಂಕಕ್ಕೀಡಾಗಿರುವುದು ಸುಳ್ಳಲ್ಲ. ಸರ್ಕಾರ ಪರಿಸ್ಥಿತಿ ನಿಭಾಯಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಘಟನೆ ಕುರಿತು ಪೊಲೀಸರು ತೀವ್ರವಾಗಿ ನಡೆಯುತ್ತಿದ್ದಾರೆ. ಘಟನೆ ನಡೆದ ಎರಡು ದಿನದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖಾ ವರದಿಯಲ್ಲಿ ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಅವರ ತನಿಖಾ ವರದಿಯಲ್ಲಿ ಏನು ಬರುತ್ತದೆಯೋ ಎಂಬುದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕು ಎನ್ನುವುದು ತೀರ್ಮಾನಿಸಲಾಗುತ್ತದೆ ಎಂದರು.

ಸದ್ಯಕ್ಕೆ ನಾನು ದೆಹಲಿಗೆ ಹೋಗುವ ಉದ್ದೇಶ ಇಲ್ಲ. ಅಂತಹ ಸಂದರ್ಭ ಬಂದಾಗ ಖಂಡಿತವಾಗಿಯೂ ಮಾಧ್ಯಮಗಳಿಗೆ ಹೇಳಿಯೇ ಹೋಗುತ್ತೇನೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ: ಸಿಎಂ ಬೊಮ್ಮಾಯಿ

ರಾಜಕಾರಣದ ಮುಸುಕು ಕಾಂಗ್ರೆಸ್‌ ಮುಖಂಡರು ಮತ್ತವರ ಪಕ್ಷದ ಮೇಲೆ ಬಿದ್ದಿದ್ದು, ಅವರಿಗೆ ಭವಿಷ್ಯ ಇಲ್ಲ. ಕನಿಷ್ಠ ಪ್ರತಿಪಕ್ಷವಾಗಿಯಾದರೂ ಕೆಲಸ ಮಾಡುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದ್ದರು. 

Karnataka Politics: 'ಸಿಎಂ ಬೊಮ್ಮಾಯಿ ಜಾತಿವಾದಿಗಳ ಶಿಷ್ಯ'

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತ ಪಕ್ಷವಾಗಿ ಕೆಲಸ ಮಾಡಲು ಯೋಗ್ಯರಲ್ಲ ಎಂದು ಕಾಂಗ್ರೆಸ್‌(Congress) ಅನ್ನು 2018ರಲ್ಲಿ ಜನರು ತೀರ್ಮಾನಿಸಿ ತಿರಸ್ಕರಿಸಿದರು. ಕನಿಷ್ಠ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿತ್ತು. ಆದರೆ, ಪ್ರತಿಪಕ್ಷವಾಗಿಯೂ ವಿಫಲವಾಗಿದೆ. ರಾಜಕಾರಣದ(Politics) ಮುಸುಕು ಅವರ ಮತ್ತು ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನು ರಾಜಕೀಯವಾಗಿ ಮತ್ತು ದ್ವೇಷದಿಂದ ನೋಡುವುದರಿಂದ ಮುಖಂಡರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದರು. 

ಸದನವು ಶುಕ್ರವಾರದವರೆಗೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ನಡೆಯಿಂದಾಗಿ ಸದನವನ್ನು ಮಂಗಳವಾರವೇ ಮೊಟಕುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು ಬೇಸರದ ಸಂಗತಿ. ಪ್ರತಿಪಕ್ಷದವರು ಸದನ ಕರೆಯಿಂದ ಚರ್ಚೆ ಮಾಡಬೇಕು ಎನ್ನುತ್ತಾರೆ. ಅಧಿವೇಶನ(Session) ನಡೆಯುವಾಗ ಚರ್ಚೆ ಮಾಡಲು ಸಿದ್ಧರಿಲ್ಲ. ಯಾವುದೇ ವಿಚಾರವೇ ಆಗಲಿ ಚರ್ಚೆ ಮತ್ತು ವಾದ ಮಾಡಬಹುದು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಸರ್ಕಾರದ ಸಾಧನೆಯನ್ನು ಹೇಳಿಕೊಂಡಾಗ ಅದರ ನ್ಯೂನತೆಗಳನ್ನು ಹೇಳಬಹುದಿತ್ತು. ಆ ಕರ್ತವ್ಯವನ್ನೂ ಮಾಡಲಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವರ ಹೇಳಿಕೆ ಮೇಲೆ ಚರ್ಚೆ ನಡೆಸಬಹುದಿತ್ತು. ಎಲ್ಲಾ ವಿಚಾರದಲ್ಲಿಯೂ ಉತ್ತರ ನೀಡಲು ಸರ್ಕಾರ ಮುಕ್ತವಾಗಿತ್ತು. ಕಾಂಗ್ರೆಸ್‌ಗೂ ಗೊತ್ತಿದೆ, ಸಚಿವರ ಹೇಳಿಕೆಯಲ್ಲಿ ಏನೂ ಇಲ್ಲ ಎಂಬುದು. ಧರಣಿ ಮೂಲಕ ಸದನದ ಮತ್ತು ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದ್ದರು.