ತುಮಕೂರಲ್ಲಿ ಸೋಮಣ್ಣ ಸ್ಫರ್ಧೆಗೆ ವರಿಷ್ಠರು ಸೂಚಿಸಿದ್ರೆ ಅಭ್ಯಂತರವಿಲ್ಲ: ವಿಜಯೇಂದ್ರ
ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡಲು ಕೇಂದ್ರದ ವರಿಷ್ಠರು ಎಂದು ಸೂಚಿಸಿದರೆ ನಮ್ಮದೇನು ಅಭ್ಯಂತರವಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ತುಮಕೂರು (ಫೆ.03): ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡಲು ಕೇಂದ್ರದ ವರಿಷ್ಠರು ಎಂದು ಸೂಚಿಸಿದರೆ ನಮ್ಮದೇನು ಅಭ್ಯಂತರವಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣನವರು ಹಿರಿಯರಿದ್ದಾರೆ. ಪಕ್ಷಕ್ಕಾಗಿ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಅನುಭವ ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ನೆರವಾಗಲಿದೆ. ಅವರ ಸ್ಪರ್ಧೆ ಬಗ್ಗೆ ಪಕ್ಷ ಒಟ್ಟಾಗಿ ಕೂತು ಚರ್ಚೆ ಮಾಡಲಿದೆ.
ರಾಜ್ಯದ 28 ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿಯೇ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ತುಮಕೂರು ಜಿಲ್ಲೆಗೆ ಸೋಮಣ್ಣ ಸ್ಪರ್ಧಿಸುವ ವಿಚಾರವೂ ಸಹ ಕಾರ್ಯ ಕರ್ತರ ಅಭಿಪ್ರಾಯ ಸಂಗ್ರಹಿಸಿ ನಂತರ ತೀರ್ಮಾನಮಾಡಲಾಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ಜೆಡಿಎಸ್ ಜೊತೆಗಿನ ಸೀಟು ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, 'ಮೈತ್ರಿ ಸೀಟು ಹಂಚಿಕೆ ವಿಚಾರ ಸದ್ಯದಲ್ಲೇ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಯಾಗಲಿದೆ. ಆ ಬಳಿಕವಷ್ಟೇ ಎಲ್ಲಾ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ವಿವರಿಸಿದರು.
ದ್ರಾಕ್ಷಿ ಬೆಳೆಗಾರರ ಸಮಸ್ಯೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇನೆ: ಶಾಸಕ ಲಕ್ಷ್ಮಣ ಸವದಿ
ರಾಷ್ಟ್ರ ಇಬ್ಭಾಗದ ಹೇಳಿಕೆ ಖಂಡನೀಯ: ಭಾರತದ ಅಖಂಡತೆ ಕಾಪಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿ ರಾಷ್ಟ್ರವನ್ನು ಇಬ್ಭಾಗ ಮಾಡುವ ಮಾತುಗಳನ್ನಾಡುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ ಹೇಳಿಕೆಗೆ ತಿರುಗೇಟು ನೀಡಿದರು.
ಸಂವಿಧಾನದ 75ನೇ ವರ್ಷದ ರಥಯಾತ್ರೆ ಆಚರಣೆ ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಒಬ್ಬ ಜನಪ್ರತಿನಿಧಿಯಾಗಿ ಈ ರೀತಿ ಮಾತನಾಡುವುದು ಖಂಡನೀಯ ಎಂದು ಕಿಡಿಕಾರಿದರು. ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ ಕೇವಲ ₹81 ಕೋಟಿ ತೆರಿಗೆ ಹಣ ಬಂದಿದೆ. ಆದರೆ ಪ್ರಧಾನ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ಬಳಿಕ ರಾಜ್ಯಕ್ಕೆ ₹ 2 ಲಕ್ಷ ಕೋಟಿ ಬಂದಿದೆ. ಹೀಗಿದ್ದಾಗ್ಯೂ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ ಎಂದರು.
ರಾಜಕಾರಣಿಗಳು ಪರಿಜ್ಞಾನ ಇಟ್ಟು ಮಾತನಾಡಬೇಕು: ವಿನಯ್ ಗುರೂಜಿ
ಸರ್ಕಾರ ಪರದಾಟ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಹಣ ಕ್ರೋಢಿಕರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರದಾಡುತ್ತಿದ್ದಾರೆ. ರಾಜ್ಯದ ಜನತೆಗೆ ನೀಡಿದ ಗ್ಯಾರಂಟಿ ಯೋಜನೆ ಈಡೇರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕರ ಮೂಲಕ ಗ್ಯಾರಂಟಿ ರದ್ದುಗೊಳಿಸುವ ಹೇಳಿಕೆ ಕೊಡಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳಿಕೆ ಇದಕ್ಕೆ ಪುಷ್ಠಿ ನೀಡುತ್ತಿವೆ ಎಂದರು. ಆಪರೇಶನ್ ಕಮಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಕಮಲವನ್ನು ಎಲ್ಲರಿಗೂ ಹೇಳಿ ಮಾಡಬೇಕಾ? ಇನ್ನು ಕಾಂಗ್ರೆಸ್‌ನಿಂದ ಬಹಳ ಜನ ಬಿಜೆಪಿಗೆ ಬರುವವರಿದ್ದಾರೆ. ಲೋಕಸಭೆಯಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.