Asianet Suvarna News Asianet Suvarna News

ಕಾಂಗ್ರೆಸ್ ಸೇರುವಂತೆ ಸುಮಲತಾರನ್ನು ಯಾರೂ ಸಂಪರ್ಕಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಶೀಘ್ರ ಕಾಂಗ್ರೆಸ್ ಅಭ್ಯರ್ಥಿಯನ್ನು ರಾಷ್ಟ್ರ ಮತ್ತು ರಾಜ್ಯ ನಾಯಕರು ಘೋಷಣೆ ಮಾಡುತ್ತಾರೆ. ಬಹುಶಃ ಫೆಬ್ರವರಿ ಎರಡನೇ ವಾರದೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ 

No one approached Sumalatha Ambareesh to join the Congress Says N Chaluvarayaswamy grg
Author
First Published Jan 27, 2024, 5:21 AM IST

ಮಂಡ್ಯ(ಜ.27):  ಸಂಸದೆ ಸುಮಲತಾ ಬಿಜೆಪಿಯಿಂದಲೇ ಸಂಸದರಾಗಲು ಇಚ್ಛಿಸಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಸೇರುವಂತೆ ಪಕ್ಷದ ಯಾವುದೇ ನಾಯಕರಾಗಲಿ, ಶಾಸಕರಾಗಲಿ ಅವರನ್ನು ಸಂಪರ್ಕಿಸಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕಾಂಗ್ರೆಸ್‌ಗೆ ಹೋಗಲ್ಲ. ಬಿಜೆಪಿಯಿಂದಲೇ ಟಿಕೆಟ್ ಬಯಸುತ್ತೇನೆಂದು ತಿಳಿಸಿದ್ದಾರೆ. ಹೀಗಾಗಿ ನಮ್ಮನ್ನು ಏಕೆ ಸಂಪರ್ಕಿಸುತ್ತಾರೆ ಎಂದು ಪ್ರಶ್ನಿಸಿದರು. ಅವರಿಗೂ ನಮಗೂ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಂಬರೀಶ್ ಮತ್ತು ನಾನು ಒಳ್ಳೆಯ ಸ್ನೇಹಿತರು, ಅವರ ಕಾಲಾನಂತರ ಸುಮಲತಾ ರಾಜಕಾರಣಕ್ಕೆ ಬಂದಿದ್ದಾರೆ. ಅವರನ್ನು ನಾನಾಗಲಿ, ನಮ್ಮ ಶಾಸಕರು ಮತ್ತು ನಮ್ಮ ನಾಯಕರಾಗಲಿ ಯಾರೂ ಸಂಪರ್ಕ ಮಾಡಿಲ್ಲ. ಒಂದು ವೇಳೆ ಸಂಪರ್ಕ ಮಾಡಿದ್ದರೆ ಯಾರು ಎಂಬುದನ್ನು ಸಂಸದರೇ ಬಹಿರಂಗಪಡಿಸಲಿ ಎಂದರು.

ನೀವು ಮಾತ್ರ ರಾಮಭಕ್ತರಾ? ಮುಖ್ಯಮಂತ್ರಿಗಳು ಜೈ ಶ್ರೀರಾಮ್ ಎಂದಿಲ್ಲವೇ? ಬಿಜೆಪಿ ವಿರುದ್ಧ ಸಚಿವ

ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಶೀಘ್ರ ಕಾಂಗ್ರೆಸ್ ಅಭ್ಯರ್ಥಿಯನ್ನು ರಾಷ್ಟ್ರ ಮತ್ತು ರಾಜ್ಯ ನಾಯಕರು ಘೋಷಣೆ ಮಾಡುತ್ತಾರೆ. ಬಹುಶಃ ಫೆಬ್ರವರಿ ಎರಡನೇ ವಾರದೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದರು.

Follow Us:
Download App:
  • android
  • ios