ಜೆಡಿ​ಎಸ್‌ ಅಧಿ​ಕಾ​ರಕ್ಕೆ ಬರು​ವು​ದನ್ನು ತಪ್ಪಿ​ಸಲು ಯಾರಿಗೂ ಸಾಧ್ಯ​ವಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ

ಮುಂಬರುವ ವಿಧಾ​ನ​ಸಭಾ ಚುನಾವಣೆಯಲ್ಲಿ ಜೆಡಿಎಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಇದನ್ನು ತಪ್ಪಿ​ಸಲು ಯಾರಿಂದಲೂ ಸಾಧ್ಯ​ವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. 

No one can avoid JDS coming to power says hd kumaraswamy gvd

ಕನಕಪುರ (ಅ.17): ಮುಂಬರುವ ವಿಧಾ​ನ​ಸಭಾ ಚುನಾವಣೆಯಲ್ಲಿ ಜೆಡಿಎಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಇದನ್ನು ತಪ್ಪಿ​ಸಲು ಯಾರಿಂದಲೂ ಸಾಧ್ಯ​ವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಗೇರಹಳ್ಳಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನವಂಬರ್‌ 1ರಿಂದ ರಾಜ್ಯದ 120 ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ಯೋಜನೆ ಹಾಕಿಕೊಂಡಿದ್ದು, ಕನಕಪುರ ಮೂಲಕ ಈ ರಥಯಾತ್ರೆ ಹಾದು ಹೋಗಲಿದೆ. 

ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದಿಂದ ನಮ್ಮ ತಂದೆ ದೇವೇಗೌಡರನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ ಋುಣ ನಮ್ಮ ಮೇಲಿದೆ. ಅಂದು ಕ್ಷೇತ್ರದ ಎಲ್ಲಾ ಮುಖಂಡರು, ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಅವರ ಗೆಲುವಿಗೆ ದುಡಿದಿದ್ದೀರಿ, ಇದನ್ನು ನಾವು ಎಂದೂ ಮರೆಯಲು ಸಾಧ್ಯವಿಲ್ಲ. ಶಕ್ತಿ ದೇವತೆಗಳಾದ ಕಬ್ಬಾಳಮ್ಮ ಹಾಗೂ ಚಾಮುಂಡೇಶ್ವರಿ ಆಶೀರ್ವಾದದಿಂದ ಜೆಡಿಎಸ್‌ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದ​ರು.

ಭಾಷಾ ನಾಶಕ್ಕೆ ಅಮಿತ್‌ ಶಾ ಯತ್ನ: ಕುಮಾರಸ್ವಾಮಿ ಕಿಡಿ

ಮೀಸಲಾತಿ ಹೆಚ್ಚಳ ಬಗ್ಗೆ ಬಿಜೆಪಿ ಗಿಮಿಕ್‌: ಚುನಾವಣೆ ಹತ್ತಿರದಲ್ಲಿರುವುದರಿಂದ ಸರ್ಕಾರ ಪರಿಶಿಷ್ಟಜಾತಿ/ಪರಿಶಿಷ್ಟಪಂಗಡಗಳಿಗೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಗಿಮಿಕ್‌ ಮಾಡಿಕೊಂಡು ಹೋಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಾವು ನ್ಯಾ.ನಾಗಮೋಹನ್‌ ದಾಸ್‌ ಸಮಿತಿ ರಚನೆ ಮಾಡಿದೆವು ಎಂದು ಕಾಂಗ್ರೆಸ್ಸಿಗರು ಹೇಳುತ್ತಾರೆ. ಬಿಜೆಪಿಯವರು ನಾವು ವರದಿಯನ್ನು ಜಾರಿ ಮಾಡಿದ್ದೇವೆ ಎನ್ನುತ್ತಿದ್ದಾರೆ. ಸಾರಿಗೆ ಸಚಿವ ಶ್ರೀರಾಮುಲು ಎದೆ ಬಡಿದುಕೊಂಡು ಮಾತನಾಡುತ್ತಿದ್ದಾರೆ. ಒಬ್ಬ ಶಾಸಕರಂತೂ ನಾವು ಬದುಕಿರುವವರೆಗೂ ಬಿಜೆಪಿಗೆ ಗುಲಾಮರಾಗಿ ಇರುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. 

ಆ ಸಮಾಜವನ್ನು ಇನ್ನೂ ಗುಲಾಮಗಿರಿಯಲ್ಲಿಯೇ ಇಡುವ ಅವರ ಮನಃಸ್ಥಿತಿಯನ್ನು ಇದು ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಒಂದೂವರೆ ವರ್ಷ ಯಾಕೆ ವರದಿಯನ್ನು ಜಾರಿ ಮಾಡದೆ ಸ್ಟೋರೇಜ್‌ನಲ್ಲಿ ಇಟ್ಟಿದ್ದರು. ಆಗಲೇ ವರದಿ ಕೊಡಬಹುದಿತ್ತಲ್ಲವೇ? ಈಗ ಚುನಾವಣೆ ಹತ್ತಿರದಲ್ಲಿದೆ. ಈಗ ಚುನಾವಣೆಗೆ ಗಿಮಿಕ್‌ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನ್ಯಾ. ನಾಗಮೋಹನ್‌ ದಾಸ್‌ ವರದಿಯನ್ನು ಯಾವ ವರ್ಷದಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಯಿತು? ಸಲ್ಲಿಕೆ ಮಾಡಿದ್ದಾಗಿನಿಂದ ಆ ವರದಿಯನ್ನು ಏನು ಮಾಡಿದರು? ಒಂದೂವರೆ ವರ್ಷ ಯಾಕೆ ವರದಿಯನ್ನು ಜಾರಿ ಮಾಡದೆ ಸ್ಟೋರೇಜ್‌ನಲ್ಲಿ ಇಟ್ಟಿದ್ದರು. ಆಗಲೇ ವರದಿ ಕೊಡಬಹುದಿತ್ತಲ್ಲವೇ? ಈಗ ಚುನಾವಣೆ ಹತ್ತಿರದಲ್ಲಿದೆ. ಈಗ ಚುನಾವಣೆಗೆ ಗಿಮಿಕ್‌ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಅಡಿಕೆ ಬೆಳೆಗಾರರಿಗೆ ನೆರವಾಗಿ: ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ

ಪಂಚತಂತ್ರ ಕಾರ್ಯಕ್ರಮ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನ ಪಂಚರತ್ನ ಕಾರ್ಯಕ್ರಮಕ್ಕೆ ಸಿದ್ಧತೆ ಅಂತಿಮವಾಗಿದೆ. ಐದು ವರ್ಷ ಅಧಿಕಾರ ಕೊಟ್ಟರೆ ಐದು ಕಾರ್ಯಕ್ರಮಗಳನ್ನು ಹೇಗೆ ಕೊಡಬೇಕು ಎಂಬುದರ ಬಗ್ಗೆ ತಯಾರಿ ಮಾಡುತ್ತಿದ್ದೇವೆ. ನ.1ರಂದು ಯಾತ್ರೆಗೆ ಚಾಲನೆ ಕೊಡಲಾಗುವುದು. ಇದೇ ತಿಂಗಳ 18 ಮತ್ತು 19ರಂದು ಶಾಸಕರು ಮತ್ತು ಸದಸ್ಯರ ಸಭೆ ಕರೆಯಲಾಗಿದೆ ಎಂದು ಹೇಳಿದರು. ನ.1ರಂದು ವಿಶೇಷ ಕನ್ನಡ ಬಾವುಟವನ್ನು ಮನೆ ಮನೆಗಳಲ್ಲಿ ಹಾರಿಸುವ ವಿಚಾರದ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯಲಾಗಿದೆ ಎಂದು ಹೇಳಿದ ಅವರ, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ನನ್ನ ಜತೆ ಚರ್ಚೆ ಮಾಡಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ನಾನು ಅವರ ಜತೆ ಚರ್ಚೆ ಮಾಡಿಲ್ಲ. ಇದೆಲ್ಲ ಕೇವಲ ಊಹಾಪೋಹ ಅಷ್ಟೇ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios