‘ಜಾತಿ ಗಣತಿ ವೇಳೆ ತಮ್ಮ ಬಳಿ ಯಾರೂ ಬಂದು ಮಾಹಿತಿ ಪಡೆದಿರಲಿಲ್ಲ ಎಂಬ ಸಿದ್ಧಗಂಗಾ ಸ್ವಾಮೀಜಿಗಳ ಹೇಳಿಕೆ ಸತ್ಯ. ಸಮೀಕ್ಷೆ ನಡೆಯುವಾಗ ನಾನು ಸಚಿವನಾಗಿದ್ದೆ. ನನ್ನ ಬಳಿಯಾಗಲಿ, ನನ್ನ ಮನೆ ಬಳಿಗಾಗಲಿ ಯಾರೂ ಬಂದು ಮಾಹಿತಿ ಪಡೆದಿಲ್ಲ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. 

ಬೆಂಗಳೂರು (ಮಾ.20): ‘ಜಾತಿ ಗಣತಿ ವೇಳೆ ತಮ್ಮ ಬಳಿ ಯಾರೂ ಬಂದು ಮಾಹಿತಿ ಪಡೆದಿರಲಿಲ್ಲ ಎಂಬ ಸಿದ್ಧಗಂಗಾ ಸ್ವಾಮೀಜಿಗಳ ಹೇಳಿಕೆ ಸತ್ಯ. ಸಮೀಕ್ಷೆ ನಡೆಯುವಾಗ ನಾನು ಸಚಿವನಾಗಿದ್ದೆ. ನನ್ನ ಬಳಿಯಾಗಲಿ, ನನ್ನ ಮನೆ ಬಳಿಗಾಗಲಿ ಯಾರೂ ಬಂದು ಮಾಹಿತಿ ಪಡೆದಿಲ್ಲ’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿಗಣತಿ ವರದಿ ಸ್ವೀಕಾರ ಮಾತ್ರ ಆಗಿದೆ. ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಬೇಕಾಗಿದೆ. ಸಾಧಕ-ಬಾಧಕಗಳ ಬಗ್ಗೆ ಚರ್ಚೆಯಾಗಲಿ. 

ವರದಿ ವೈಜ್ಞಾನಿಕವೋ ಅಥವಾ ಇಲ್ಲವೋ ಎಂಬುದು ನಿರ್ಧಾರವಾದ ಬಳಿಕ ಮರು ಸಮೀಕ್ಷೆ ನಡೆಸಬೇಕೋ ಬೇಡವೋ ಎಂಬುದು ಚರ್ಚೆಗೆ ಬರಲಿದೆ ಎಂದರು. ಬೀದರ್‌ ನನ್ನ ಮಗ ಸಾಗರ್‌ ಖಂಡ್ರೆ ಆಕಾಂಕ್ಷಿಯಾಗಿದ್ದಾರೆ. ರಾಜಶೇಖರ್‌ ಪಾಟೀಲ್‌ ನಿಲ್ಲಲ್ಲ ಎಂದಿದ್ದರು. ಅವರೊಂದಿಗೂ ಮಾತನಾಡುತ್ತೇನೆ. ಹೈಕಮಾಂಡ್‌ ಯಾರಿಗೇ ಟಿಕೆಟ್‌ ನೀಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಬೀದರ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲಿದ್ದಾರೆ. ಹತ್ತು ವರ್ಷ ಹೈಕಮಾಂಡ್‌ಗೆ ಬಕೆಟ್‌ ಹಿಡಿದಿದ್ದು ಬಿಟ್ಟರೆ ಅಭಿವೃದ್ಧಿ ಶೂನ್ಯ. ಕಾಂಗ್ರೆಸ್‌ನಿಂದ ಯಾರಿಗೇ ಟಿಕೆಟ್‌ ನೀಡಿದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಇದೇ ವೇಳೆ ಈಶ್ವರ್‌ ಖಂಡ್ರೆ ತಿಳಿಸಿದರು.

ಲೋಕಸಭೆಯಲ್ಲಿ 20 ಕ್ಷೇತ್ರ ಗೆಲ್ಲದಿದ್ದರೆ ಸರ್ಕಾರ ನಡೆಸಲು ನೈತಿಕತೆ ಇರಲ್ಲ: ಸಚಿವ ರಾಜಣ್ಣ

ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ: ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬಂಡೀಪುರದ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ಸ್ವಾಗತ ಕೇಂದ್ರದ ಬಳಿ ನಿರ್ಮಿಸಲಾಗಿದ್ದ ಸಭಾಂಗಣದಲ್ಲಿ ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಅವರೊಂದಿಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಮನ್ವಯ ಸಭೆಯಲ್ಲಿ ಮಾತನಾಡಿ, ಇದು ಕೇಂದ್ರ ಸರ್ಕಾರದ ಆದೇಶದ ಮೇಲೆ ನಡೆಯುತ್ತಿರುವ ಸಭೆಯಲ್ಲ ಬದಲಾಗಿ, ದಕ್ಷಿಣದ ಮೂರು ರಾಜ್ಯಗಳ ಕಳಕಳಿ ಮತ್ತು ಸ್ವಯಂ ಪ್ರಯತ್ನದ ಫಲವಾದ ಸಭೆಯಾಗಿದೆ ಎಂದು ತಿಳಿಸಿದರು.

ವನ್ಯ ಜೀವಿಗಳು ಸ್ವಚ್ಛಂದವಾಗಿ ಒಂದು ಕಾಡಿನಿಂದ ಮತ್ತೊಂದಕ್ಕೆ ಸಂಚರಿಸುತ್ತವೆ. ಹಲವಾರು ಶತಮಾನಗಳಿಂದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ನಡುವೆ ಆನೆಗಳು ಮುಕ್ತವಾಗಿ ಓಡಾಡುತ್ತಿದ್ದು, ಯಾವುದೇ ವನ್ಯ ಜೀವಿಗೆ ರಾಜ್ಯದ ಗಡಿಯ ಮಿತಿ ಇರುವುದಿಲ್ಲ. ಆನೆ ಕಾರಿಡಾರ್ ಇದೆ. ಹುಲಿಗಳು ಕೂಡ ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಈ ವನ್ಯಜೀವಿಗಳಿಂದ ಯಾವುದೇ ರಾಜ್ಯದಲ್ಲಿ ಅಮೂಲ್ಯ ಜೀವ ಅಥವಾ ಬೆಳೆ ಹಾನಿ ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಇದಕ್ಕೆ ಒಂದು ಮೂರ್ತ ರೂಪ ನೀಡಲಾಗುವುದು ಎಂದರು.

ಡಿ.ವಿ.ಸದಾನಂದಗೌಡ ಮನವೊಲಿಕೆಗೆ ವಿಜಯೇಂದ್ರ ಯತ್ನ

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣದ ಈ ಮೂರೂ ರಾಜ್ಯಗಳಲ್ಲಿರುವ ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಕೃತಿ ಪರಿಸರ ಉಳಿಸಲು ಪರಸ್ಪರ ಸಹಯೋಗ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು. ವನ್ಯಜೀವಿಗಳ, ಜನಸಂಖ್ಯೆಯ ಹೆಚ್ಚಳದಿಂದ ವಸತಿ ಪ್ರದೇಶಗಳು ಅರಣ್ಯದಂಚಿಗೆ ಬರುತ್ತಿರುವ ಕಾರಣ ವನ್ಯಜೀವಿ-ಮಾನವ ಸಂಘರ್ಷ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ನಿಟ್ಟಿನಲ್ಲಿ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಹೀಗಾಗಿ ಕಾಡಿನಂಚಿನ ವಸತಿ ಪ್ರದೇಶಗಳ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅಗತ್ಯ ಎಂದು ಪ್ರತಿಪಾದಿಸಿದರು.