Asianet Suvarna News Asianet Suvarna News

ಬಿಜೆಪಿಯಲ್ಲಿ ಯಡಿಯೂರಪ್ಪಗೆ ಇದ್ದಷ್ಟು ಆಕರ್ಷಣೆ ಯಾರಿಗೂ ಇಲ್ಲ: ಸತೀಶ ಜಾರಕಿಹೊಳಿ

ಯಡಿಯೂರಪ್ಪ ಮಗ ಎಂದಾಕ್ಷಣ ಎಲ್ಲರೂ ಅವರ ಹಿಂದೆ ಬರುವುದಿಲ್ಲ. ಅಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ ಸಚಿವ ಸತೀಶ ಜಾರಕಿಹೊಳಿ 
 

No One in BJP has as Much Attraction as BS Yediyurappa Says Satish Jarkiholi grg
Author
First Published Nov 12, 2023, 7:35 AM IST

ಬೆಳಗಾವಿ(ನ.11): ಕುಟುಂಬ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲವೆಂದು ಬಿಜೆಪಿ ವರಿಷ್ಠರು ನಿಯಮ ಮಾಡಿದ್ದಾರಾದರೂ ಈಗ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್‌ ಟೀಕೆ ಮಾಡುತ್ತಿದ್ದರು. ಈಗ ಅವರ ಪಕ್ಷದಲ್ಲಿಯೂ ವರಿಷ್ಠರ ಮಕ್ಕಳು ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಿದ್ದಾರೆ ಎಂದ ಅವರು, ಯಡಿಯೂರಪ್ಪ ಮಗ ಎಂದಾಕ್ಷಣ ಎಲ್ಲರೂ ಅವರ ಹಿಂದೆ ಬರುವುದಿಲ್ಲ. ಅಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. 

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ: ನಳಿನ್‌ ಕಟೀಲ್‌

ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗಿದ್ದ ಆಕರ್ಷಣೆ ಯಾರಿಗೂ ಬರಲಾರದು. ಅದೇ ರೀತಿ ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಇನ್ನು ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ. ಪಕ್ಷವೂ ಅವರನ್ನು ಸಾಕಷ್ಟು ಬಳಸಿಕೊಳ್ಳಬೇಕಿದೆ ಎಂದರಲ್ಲದೆ ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಖಚಿತವಾಗಿ ನುಡಿದರು.

Follow Us:
Download App:
  • android
  • ios