ಕಾಂಗ್ರೆಸ್‌ನಲ್ಲಿ ಯಾರನ್ನೂ ಕಡೆಗಣಿಸಿಲ್ಲ: ಜಿ.ಪರಮೇಶ್ವರ

ನಮ್ಮಲ್ಲಿ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸದಾಶಿವ ಆಯೋಗ ವರದಿ ಜಾರಿ ಕುರಿತು ಹಿಂದೆ ಆಗಿರುವುದನ್ನು ಬಿಟ್ಟು ಬಿಡೋಣ. ಮುಂದಿನ ದಿನಗಳಲ್ಲಿ ಅವರಿಗೆ ನ್ಯಾಯ ಒದಗಿಸುವುದರಲ್ಲಿ ಯಾವುದೇ ಅನುಮಾನವಿಲ್ಲ: ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ 

No one is neglected in Congress Says G Parameshwar grg

ಬೆಳಗಾವಿ(ಡಿ.24): ಕಾಂಗ್ರೆಸ್‌ ಪಕ್ಷದಲ್ಲಿ ಯಾರನ್ನೂ ಕಡೆಗಣಿಸಲಾಗಿಲ್ಲ. ಒಬ್ಬೊಬ್ಬರಿಗೆ ಒಂದೊಂದು ರೀತಿಯ ನಾಯಕತ್ವ ಇದೆ. ಎಲ್ಲ ನಾಯಕರು ಜೊತೆಯಾಗಿ ಜಿಲ್ಲೆಗಳ ಪ್ರವಾಸ ಮಾಡುತ್ತೇವೆ. ಒಟ್ಟಿಗೆ ಹೋಗುವ ನಿರ್ಧಾರ ಮಾಡಿದ್ದೇವೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸದಾಶಿವ ಆಯೋಗ ವರದಿ ಜಾರಿ ಕುರಿತು ಹಿಂದೆ ಆಗಿರುವುದನ್ನು ಬಿಟ್ಟು ಬಿಡೋಣ. ಮುಂದಿನ ದಿನಗಳಲ್ಲಿ ಅವರಿಗೆ ನ್ಯಾಯ ಒದಗಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಈ ಹಿಂದೆ ಒಳಮೀಸಲಾತಿ ಕೊಟ್ಟಿಲ್ಲ. ನಾವು ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ, ಮೂರು ವರ್ಷವಾದರೂ ಕೊಟ್ಟಿಲ್ಲ. ಡಬಲ್‌ ಇಂಜಿನ್‌ ಸರ್ಕಾರ ಏನೂ ಮಾಡಿಲ್ಲ. ಈಗ ಕಮಿಟಿ ಮಾಡಿ ಡ್ರಾಮಾ ಮಾಡುತ್ತಿದ್ದಾರೆ. ಇದು ಚುನಾವಣೆ ಗಿಮಿಕ್‌ ಅಷ್ಟೇ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರದ ಕೊರೋನಾ ಎಲ್ಲಿ? ಹುಡುಕಿದರೂ ಕಾಣಿಸುತ್ತಿಲ್ಲ, ಸಚಿವರ ಪತ್ರಕ್ಕೆ ಕಾಂಗ್ರೆಸ್ ನಾಯಕನ ವ್ಯಂಗ್ಯ!

ಅವಧಿ ಪೂರ್ಣ ಚುನಾವಣೆ ರಾಜ್ಯದಲ್ಲಿ ಬರುತ್ತದೆ ಎನಿಸುವುದಿಲ್ಲ. ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಬರುತ್ತದೆ. ಹಲವು ಇಲಾಖೆಗಳು ಚುನಾವಣೆಗೆ ತಯಾರಾಗಬೇಕು. ಮತದಾರರ ಪಟ್ಟಿಯಲ್ಲಿ ಹಲವು ಗೊಂದಲಗಳು ಕಾಣಿಸಿಕೊಂಡಿವೆ. ಹಾಗಾಗಿ ಅವಧಿ ಮುಂಚೆಯೇ ಚುನಾವಣೆ ಬರುತ್ತದೆ ಎಂದು ಎನಿಸುವುದಿಲ್ಲ ಎಂದರು.

ಕೋವಿಡ್‌ ಸೋಂಕು ರಾಷ್ಟ್ರದ ಸಮಸ್ಯೆ. ಈಗಾಗಲೇ ಕೇಂದ್ರ ಸರ್ಕಾರ ನಿಯಮಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಕೂಡ ನಿಯಮಗಳನ್ನು ಜಾರಿಗೆ ತಂದಿದೆ. ಯಾರೂ ಭಯಪಡುವ ಅಗತ್ಯಇಲ್ಲ. ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು ಅಂತ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios