ನಿತೀಶ್ ಕುಮಾರ್ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕರು ಎಂದಿಗೂ ವೈಯಕ್ತಿಕ ಟೀಕೆ ಮಾಡಿಲ್ಲ. ಭ್ರಷ್ಟಾಚಾರ ಮತ್ತು ಪರಿವಾರವಾದಿ ವಿರುದ್ಧ ಮಾತ್ರ ಹೇಳಿಕೆ ನೀಡಲಾಗಿತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿ (ಜ.29): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕರು ಎಂದಿಗೂ ವೈಯಕ್ತಿಕ ಟೀಕೆ ಮಾಡಿಲ್ಲ. ಭ್ರಷ್ಟಾಚಾರ ಮತ್ತು ಪರಿವಾರವಾದಿ ವಿರುದ್ಧ ಮಾತ್ರ ಹೇಳಿಕೆ ನೀಡಲಾಗಿತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟ ಪರಿವಾರವಾದಿ ಜತೆ ಇವರಿಗೆ (ನಿತೀಶ್ ಕುಮಾರ್) ಹೊಂದಾಣಿಕೆಯಾಗಲ್ಲ ಎಂಬುದು ಗೊತ್ತಿತ್ತು. ನಿತೀಶಕುಮಾರ ಬಗ್ಗೆ ನಾವು ಟೀಕೆ-ಟಿಪ್ಪಣಿ ಮಾಡಿದ್ದೇವೆ. ಆದರೆ, ಎಂದಿಗೂ ವೈಯಕ್ತಿಕವಾಗಿ ಟೀಕಿಸಿಲ್ಲ.
ಬಿಹಾರದಲ್ಲಿ ಅಪವಿತ್ರ ಮೈತ್ರಿ ಇತ್ತು. ಅದು ಈಗ ಅಂತ್ಯವಾಗಿದ್ದು, ಜೆಡಿಯು ಎನ್‌ಡಿಎ ಮಿತ್ರಪಕ್ಷ ಭಾಗವಾಗಿ ಆಡಳಿತ ನಡೆಸಲಿದೆ ಎಂದರು. ಐಎನ್‌ಡಿಐಎ ಒಕ್ಕೂಟದ ನಾಯಕತ್ವವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿದ್ದಕ್ಕಾಗಿ ಈ ಬೆಳವಣಿಗೆ ಆಗಿದೆ ಎನ್ನಲು ಸಾಧ್ಯವಿಲ್ಲ. ಲಾಲು ಪ್ರಸಾದ್ ಮತ್ತು ಇತರೆ ಪರಿವಾರದವರು ನಿತೀಶಕುಮಾರ್ ಅವರಿಗೆ ತೊಂದರೆ ಕೊಡುತ್ತಿದ್ದರು. ಅದರ ಪರಿಣಾಮವಾಗಿ ಈ ರೀತಿಯ ಬೆಳವಣಿಗೆಯಾಗಿದೆ ಎಂದರು.
ಎಚ್‌ಡಿಕೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಸೇರ್ಪಡೆ: ಸಚಿವ ಚಲುವರಾಯಸ್ವಾಮಿ
ಮುಸ್ಲಿಮರ ತುಷ್ಟೀಕರಣ: ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜ ಕಂಬಕ್ಕೆ ಭಗವಾಧ್ವಜ ಅಳವಡಿಸಿದ್ದನ್ನು ಪೊಲೀಸರು ತೆರವುಗೊಳಿಸಿರುವ ವಿಚಾರ ಬಗ್ಗೆ ಮಾಹಿತಿ ಇಲ್ಲ. ಆದರೆ, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹಿಂದೂ ವಿರೋಧಿ ಕೆಲಸ ನಡೆಯುತ್ತಿದೆ. ಸರ್ಕಾರ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ ಎಂದು ಆರೋಪಿಸಿದರು. ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಏಕೆ ಅಹಿಂದ ಸಮಾವೇಶ ಮಾಡುತ್ತಿದ್ದಾರೆ. ಮೊದಲ ಅಕ್ಷರ ಬಿಟ್ಟು ಮಾಡಿ. ಹಿಂದ ಅಕ್ಷರಗಳು ಅವರಿಗೆ ಸಂಬಂಧವಿಲ್ಲ ಎಂದು ವ್ಯಂಗ್ಯವಾಡಿದರು.
ಜೋಶಿಯೇ ಲೋಕಸಭೆ ಚುನಾವಣೆಗೆ ಅಭ್ಯರ್ಥಿ: ಧಾರವಾಡ ಲೋಕಸಭಾ ಚುನಾವಣೆಗೆ ಪ್ರಹ್ಲಾದ ಜೋಶಿ ಅವರೇ ಅಭ್ಯರ್ಥಿ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ ಶೆಟ್ಟರ್ ಮರಳಿ ಪಕ್ಷಕ್ಕೆ ಬಂದಿರುವುದು ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಧಾರವಾಡ ಲೋಕಸಭೆ ಟಿಕೆಟ್ ವಿಷಯವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಉಹಾಪೋಹ ಇಲ್ಲ. ಜೋಶಿ ನಮ್ಮ ನಾಯಕರು. ಅವರೇ ಲೋಕಸಭೆ ಅಭ್ಯರ್ಥಿ. ಅವರಿಗೆ ಟಿಕೆಟ್ ಸಿಗಲಿದೆ. ಕಳೆದ ಸಲಕ್ಕಿಂತ ಈ ಸಲ ದೊಡ್ಡ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದರು.
ಪ್ರಧಾನಿ ಮೋದಿಯನ್ನು ಕಂಡರೆ ರಾಜ್ಯದ ಸಂಸದರಿಗೆ ಹೆದರಿಕೆ: ಸಚಿವ ಶಿವರಾಜ ತಂಗಡಗಿ
ಹಾಗಾದರೆ ಶೆಟ್ಟರ್ ನಿಮ್ಮ ನಾಯಕರು ಅಲ್ವಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ನಾನು ಹಾಗೆ ಹೇಳಿಲ್ಲ. ನನಗೆ ಶೆಟ್ಟರ್ ಸೇರ್ಪಡೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ದ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ. ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅಭ್ಯರ್ಥಿ ವಿಷಯವಾಗಿ ನೀವು ಕೇಳಿದ್ದಕ್ಕೆ ಹೇಳಿದೆ. ಪ್ರಹ್ಲಾದ ಜೋಶಿ ಬಿಟ್ಟರೆ ಬೇರೆ ಯಾರೂ ಇಲ್ಲ ಎಂದರು.