ಅವಧಿಪೂರ್ವ ಚುನಾವಣೆ ಇಲ್ಲ, ಅಧಿಕಾರ ಪೂರೈಸುತ್ತೇವೆ: ಸಿಎಂ ಬೊಮ್ಮಾಯಿ
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ ಕುರಿತು ಎದ್ದಿರುವ ಸುದ್ದಿಗಳನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತಳ್ಳಿಹಾಕಿದ್ದಾರೆ.
ಮೈಸೂರು (ಡಿ.11): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ ಕುರಿತು ಎದ್ದಿರುವ ಸುದ್ದಿಗಳನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತಳ್ಳಿಹಾಕಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿ ಪೂರ್ಣಗೊಳಿಸಲಿದೆ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಅವಧಿಪೂರ್ವ ಚುನಾವಣೆಗೆ ಹೋಗ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಶನಿವಾರ ಗರಂ ಆಗಿಯೇ ಪ್ರತಿಕ್ರಿಯಿಸಿದ ಅವರು, ‘ಇಂಥವನ್ನೆಲ್ಲ ನಿಮಗೆ ಯಾರು ಹೇಳ್ತಾರ್ರೀ’ ಎಂದು ಅಸಮಾಧಾನ ಹೊರಹಾಕಿದರು.
ಗುಜರಾತ್ ಚುನಾವಣೆ ನಂತರ ಸಹಜವಾಗಿ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಇದು ಸಹಜ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಬಿಜೆಪಿಯು ಜನಸಂಪರ್ಕ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಯನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಈಗ ಚುನಾವಣಾ ದೃಷ್ಟಿಯಿಂದ ಈ ಕಾರ್ಯವನ್ನು ಮತ್ತಷ್ಟುಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ವಿವಿಧ ಸ್ತರಗಳ ಕೋರ್ ಕಮಿಟಿಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಕಳೆದ ಹಲವು ಚುನಾವಣೆಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆದರೆ, ಈ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ದೊಡ್ಡಸಂಖ್ಯೆಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗುತ್ತಾರೆ. ನೀವೇ ಕಾದು ನೋಡಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ: ಭಾರಿ ಕುತೂಹಲ
ಸಿದ್ದು ಮನೆಗೆ ಖಚಿತ: ರಾಜ್ಯದಲ್ಲಿ ನಾವು ಸುಮ್ಮನೆ ಕೂತರೂ ಕಾಂಗ್ರೆಸ್ ಚುನಾವಣೆ ಗೆಲ್ಲುತ್ತದೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮುಂಬರುವ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ಹೋಗುವುದು ನಿಶ್ಚಿತ ಎಂದು ಲೇವಡಿ ಮಾಡಿದರು. ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಇದು ಅವರಿಗೆ ಗೊತ್ತಾಗಿದ್ದರಿಂದ ಆ ರೀತಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಎತ್ತಿನಹೊಳೆ ವೆಚ್ಚ ಡಬಲ್: ಪರಿಷ್ಕೃತ ಯೋಜನಾ ವೆಚ್ಚಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ
ಗುಜರಾತ್ ಚುನಾವಣೆ ನಂತರ ಸಹಜವಾಗಿ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಇದು ಸಹಜ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಅವಧಿ ಪೂರ್ವ ಚುನಾವಣೆ ನಡೆಯುತ್ತೆ ಎನ್ನುವುದನ್ನೆಲ್ಲಾ ನಿಮಗೆ ಯಾರು ಹೇಳ್ತಾರೆ?
- ಬಸವರಾಜ ಬೊಮ್ಮಾಯಿ ಸಿಎಂ