ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ಈ ವಿಚಾರಗಳು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವೆಲ್ಲ ನಡೆದುಕೊಳ್ಳುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ  

ಬೆಂಗಳೂರು(ಜು.02):  ಮುಖ್ಯಮಂತ್ರಿ ಬದಲಾವಣೆ, ಉಪ ಮುಖ್ಯಮಂತ್ರಿಗಳ ನೇಮಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹುದ್ದೆಗಳ ಪ್ರಶ್ನೆಗೆ ಸೋಮವಾರ ನಗರದಲ್ಲಿ ಉತ್ತರಿಸಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ಈ ವಿಚಾರಗಳು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವೆಲ್ಲ ನಡೆದುಕೊಳ್ಳುತ್ತೇವೆ ಎಂದರು. 

ರಾಜ, ರಾಜ್ಯ ಮತ್ತು ಕೇಂದ್ರವಾಗಲಿ ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸೋದು: ಸಿಎಂ ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರನ್ನು ಸಿಎಂ ಮಾಡಬೇಕು ಎಂಬ ಪ್ರಣವಾನಂದ ಸ್ವಾಮೀಜಿ ಹೇಳಿಕೆಗೆ, ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.