Asianet Suvarna News Asianet Suvarna News

ಮುಡಾ ಹಗರಣ: ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಸಿಎಂ ಸಿದ್ದರಾಮಯ್ಯ

ಜನರಿಂದ ಚುನಾಯಿತವಾದ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರ ನಡೆಸಿದ್ದಾರೆ. ನನ್ನ ವಿರುದ್ಧ ದೂರು ಬಂದ ದಿನವೇ ಕೋಕಾಸ್ ನೋಟಿಸ್ ನೀಡಿದ್ದರು. ಹೀಗಾಗಿ ರಾಜ್ಯಪಾಲರ ಈ ನಡೆಯನ್ನು ನಾವು ನಿರೀಕ್ಷಿಸಿದೆವು. ಇದು ಬಿಜೆಪಿ ಹಾಗೂ ಮಿತ್ರಪಕ್ಷಗಳು ಸರ್ಕಾರವನ್ನು ಅತಂತ್ರ ನಡೆಸಲು ಹೂಡಿರುವ ಪಿತೂರಿ, ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ಹೀಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 
 

no question of resignation on muda scam says cm Siddaramaiah grg
Author
First Published Aug 18, 2024, 4:47 AM IST | Last Updated Aug 18, 2024, 4:47 AM IST

ಬೆಂಗಳೂರು(ಆ.18):  ಕೇಂದ್ರ ಬಿಜೆಪಿ ಸರ್ಕಾರಕ್ಕೆ ಈ ಸಿದ್ದರಾಮಯ್ಯನನ್ನ ಕಂಡರೆ ಭಯ. ಹೀಗಾಗಿ ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು, ಆಧಾರ ರಹಿತ ಪ್ರಕರಣದಲ್ಲಿ ನನ್ನ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡಿಸಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ನಡೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಈ ಬಗ್ಗೆ ಕಾನೂನು ಹೋರಾಟ ಹಾಗೂ ಪಕ್ಷದ ವತಿಯಿಂದ ಬೀದಿಗಿಳಿದು ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರು ಒಂದೇ ಒಂದು ದಾಖಲೆ ತೋರಿಸಲಿ: ಗೌರ್ನರ್ ನಿಯಮ ಉಲ್ಲಂಘಿಸಿದ್ದಾರೆ, ಸಚಿವ ಕೃಷ್ಣ

ರಾಜ್ಯಪಾಲರು ತಮ್ಮ ವಿರುದ್ಧದ ಮುಡಾ ಪ್ರಕರಣ ಸಂಬಂಧ ಅಭಿಯೋಜನೆಗೆ ಅನುಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯಪಾಲರ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. "ಜನರಿಂದ ಚುನಾಯಿತವಾದ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರ ನಡೆಸಿದ್ದಾರೆ. ನನ್ನ ವಿರುದ್ಧ ದೂರು ಬಂದ ದಿನವೇ ಕೋಕಾಸ್ ನೋಟಿಸ್ ನೀಡಿದ್ದರು. ಹೀಗಾಗಿ ರಾಜ್ಯಪಾಲರ ಈ ನಡೆಯನ್ನು ನಾವು ನಿರೀಕ್ಷಿಸಿದೆವು. ಇದು ಬಿಜೆಪಿ ಹಾಗೂ ಮಿತ್ರಪಕ್ಷಗಳು ಸರ್ಕಾರವನ್ನು ಅತಂತ್ರ ನಡೆಸಲು ಹೂಡಿರುವ ಪಿತೂರಿ, ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ಹೀಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ' ಎಂದು ಸ್ಪಷ್ಟಪಡಿಸಿದರು.

ಮುಡಾ ಹಗರಣ ರಾಜಕಾರಣಕ್ಕಾಗಿ ಕತೆ ಕಟ್ಟಿದ್ದಲ್ಲ: ಸಿದ್ದರಾಮಯ್ಯ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ: ಆರಗ ಜ್ಞಾನೇಂದ್ರ

ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಸುಸ್ಥಿರ ಸರ್ಕಾರದ ಮೇಲೆ ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ಯಾವುದೇ ತನಿಖಾ ವರದಿ, ದಾಖಲೆಗಳು, ಸಾಕ್ಷ್ಯಗಳೂ ಇಲ್ಲ, ಹೀಗಿದ್ದರೂ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯ ಷಡ್ಯಂತ್ರ ಮಾಡಿದ್ದಾರೆ. ಸಂವಿಧಾನ ಬಾಹಿರ. ಇದನ್ನು ಪ್ರಶ್ನಿಸಿ ಕಾನೂನುಹೋರಾಟಮಾಡಲಾಗುವುದು ಎಂದರು.

ರಾಜೀನಾಮೆ ಪ್ರಶ್ನೆಯೇ ಇಲ್ಲ:

ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ನಾನುರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ. ಹೀಗಾಗಿಯೇ ರಾಜ್ಯಪಾಲರ ಮೂಲಕ ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

Latest Videos
Follow Us:
Download App:
  • android
  • ios