ಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸುವ ಕುರಿತು ಬೇಡಿಕೆ ಬಂದಿದೆ. ಉಪ ಚುನಾವಣೆ ಬಳಿಕ ಆ ಕುರಿತು ನೋಡೋಣ ಎಂದು ಹೇಳಿದ್ದೇನೆ. ಅದನ್ನೇ ಸಂಪುಟ ಪುನ‌ರ್ ರಚನೆ ಎಂದು ಹೇಳಬೇಡಿ ಎ೦ದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು(ನ.14):  ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಬುಧವಾರ ಸುದ್ದಿಗಾರರ ಜತೆಗೆ ಮಾತ ನಾಡಿದ ಅವರು, ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಜೈಲುಪಾಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸುವ ಕುರಿತು ಬೇಡಿಕೆ ಬಂದಿದೆ. ಉಪ ಚುನಾವಣೆ ಬಳಿಕ ಆ ಕುರಿತು ನೋಡೋಣ ಎಂದು ಹೇಳಿದ್ದೇನೆ. ಅದನ್ನೇ ಸಂಪುಟ ಪುನ‌ರ್ ರಚನೆ ಎಂದು ಹೇಳಬೇಡಿ ಎ೦ದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶೀಘ್ರ ಸಂಪುಟ ಪುನಾರಚನೆ ಸರ್ಕಸ್‌?: 6-7 ಸಚಿವರ ಸ್ಥಾನಕ್ಕೆ ಕುತ್ತು

ಡಿಸೆಂಬರಲ್ಲಿ ಸಂಪುಟ ಪುನಾರಚನೆ: ಪರಂ 

ಬೆಂಗಳೂರು: ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿದ್ದಾಗ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿತ್ತು. ಆಗ ಡಿಸೆಂಬರ್‌ನಲ್ಲಿ ಸಂಪುಟ ಪುನಾ ರಚನೆ ನಡೆಯಬಹುದು ಎಂಬ ಸುಳಿವು ಇತ್ತು. ಆದರೆ, ಈಗ ಏನಾಗಿದೆ ನನಗೆ ಗೊತ್ತಿಲ್ಲ. ಆ ಬಗ್ಗೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವ‌ರ್ ಹೇಳಿದ್ದಾರೆ. ಈ ವಿಚಾರದ ಕುರಿತು ಮುಖ್ಯಮಂತ್ರಿಯವರು ಉತ್ತರ ನೀಡಬೇಕು ಎಂದರು.