Asianet Suvarna News Asianet Suvarna News

ನಾಸಿರ್‌ ಬೇಷರತ್‌ ಕ್ಷಮೆ ಕೇಳುವವರೆಗೂ ಪ್ರಮಾಣವಚನ ಬೇಡ: ಕೇಂದ್ರ ಸಚಿವ ಜೋಶಿ

ಪಾಕಿಸ್ತಾನ ಜಿಂದಾಬಾದ್ ಘೋಷಣೆ‌ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಸಿರ್‌ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 

No Swearing Until Nasir Hussain Apologizes Unconditionally Says Pralhad Joshi grg
Author
First Published Mar 9, 2024, 6:35 AM IST

ಹುಬ್ಬಳ್ಳಿ(ಮಾ.09):  ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸಿರ್ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಘೋಷಣೆ‌ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಸಿರ್‌ ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದರು. 

ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಹತ್ತಿರದವನು. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ನಾಸಿರ್ ಅಕ್ಕ-ಪಕ್ಕದಲ್ಲೇ ಇರುತ್ತಿದ್ದವನು ಎಂಬುದು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಕೂಡ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ನಾಸೀರ್‌ ಹುಸೇನ್‌ ಪ್ರಮಾಣ ವಚನ ಸ್ವೀಕರಿಸಬಾರದು ಎಂದರು. ಇದೇ ವೇಳೆಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದೆ. ಸರಿಯಾದ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಪೂರ್ವ ತಯಾರಿ ಇಲ್ಲದೇ ಕಾಂಗ್ರೆಸ್‌ನಿಂದ ಜಾತಿ ಗಣತಿ ವರದಿ: ಪ್ರಲ್ಹಾದ್‌ ಜೋಶಿ

ಮಹದಾಯಿ ಯೋಜನೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ಮಹದಾಯಿಗೆ ಅಡ್ಡಗಾಲು ಹಾಕುವುದನ್ನು ಬಿಟ್ಟರೆ ಬೇರೇನೂ ಮಾಡಿಲ್ಲ. ಗೋವಾಕ್ಕೆ ಹೋಗಿ ಹನಿ ನೀರು ಬಿಡಲ್ಲ ಅಂದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರೇ ಹೊರತು ನಾವಲ್ಲ ಎಂದು ಜೋಶಿ ತಿರುಗೇಟು ನೀಡಿದರು.

Follow Us:
Download App:
  • android
  • ios