'ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ'
ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ ಎಂದು ಬಿಜೆಪಿ ನಾಯಕ ಅಚ್ಚರಿ ಹೇಳಿಕೆ ನೀಡಿದ್ದಾರೆ.
ದಾವಣಗೆರೆ, (ಅ.19): ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ. ಕಾದು ನೋಡಿ ಎಂದು ಸಿಎಂ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
'ಅಧಿಕಾರ ಇಲ್ಲದಾಗ ಕಂಠಪೂರ್ತಿ ಕುಡಿದು ಅಮಾಯಕರನ್ನು ಸಾಯಿಸ್ತಾರೆ'
ಇಂದು (ಶನಿವಾರ) ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಮಾತನಾಡಿರುವ ರೇಣುಕಾಚಾರ್ಯ, ಸಿದ್ದರಾಮಯ್ಯ ಕಾಡಿ ಬೇಡಿ ವಿರೋಧ ಪಕ್ಷ ಸ್ಥಾನ ಪಡೆದವರು. ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಗೋಲಿ ಆಡುವವರು ಅಂತ ಹೇಳಿಕೆ ಸರಿಯಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ತೊರೆದರೂ ತೊರೆಯಬಹುದು ಎಂದು ಹೇಳಿದರು.
ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಿಮ್ಮಂತೆ ಮತಾಂಧ ಟಿಪ್ಪು ಜಯಂತಿ ನಾವು ಮಾಡಲ್ಲ. ಸಾವರ್ಕರ್ ಬಗ್ಗೆ ಇತಿಹಾಸ ಓದಿ ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಗೋಡ್ಸೆಗೂ ಭಾರತರತ್ನ ಕೊಡಿ: ಸಿದ್ದರಾಮಯ್ಯ ವಿವಾದ
ಸಿದ್ದರಾಮಯ್ಯ ಪ್ರತಿಪಕ್ಷ ದ ನಾಯಕ ರು ಅವರ ಬಗ್ಗೆ ನನಗೆ ಗೌರವ ಇದೆ. ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಮೂಲೆ ಗುಂಪಾಗುತ್ತಿದ್ದರು.ಈಗ ವಿರೋಧ ಪಕ್ಷದ ನಾಯಕ ಸ್ಥಾನ ಸಿಕ್ಕಿದೆ. ಹೀಗಾಗಿ ಸಾವರ್ಕರ್ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹೇಳಿಕೆಯನ್ನು ನಾನು ಕಠೋರವಾಗಿ ಖಂಡಿಸುತ್ತೇನೆ ಎಂದು ನಿನ್ನೆ ಅಷ್ಟೇ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೇವಲ ರೇಣುಕಾಚಾರ್ಯ ಮಾತ್ರವಲ್ಲದೇ ಸಾವರ್ಕರ್ ಹಗುರವಾಗಿ ಮಾತನಾಡಿರುವ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರುಗಳು ಇಗ್ಗಾಮುಗ್ಗಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.