ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ: ಶಿವಯೋಗೇಶ್ವರ ಸ್ವಾಮೀಜಿ ಭವಿಷ್ಯ
ಹೈಕಮಾಂಡ್ ಮಧ್ಯಪ್ರವೇಶದ ಬಳಿಕ ತಣ್ಣಗಾಗಿದ್ದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆಂಬ ಪುಕಾರುಗಳಿಗೆ ಇದೀಗ ಮತ್ತೊಮ್ಮೆ ಜೀವಬಂದಿದೆ. ಡಿ.ಕೆ.ಶಿವಕುಮಾರ್ ಅವರು ನಾಡಿನ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಇದೀಗ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿ ವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಮದ್ದೂರು (ಡಿ.10): ಹೈಕಮಾಂಡ್ ಮಧ್ಯಪ್ರವೇಶದ ಬಳಿಕ ತಣ್ಣಗಾಗಿದ್ದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆಂಬ ಪುಕಾರುಗಳಿಗೆ ಇದೀಗ ಮತ್ತೊಮ್ಮೆ ಜೀವಬಂದಿದೆ. ಡಿ.ಕೆ.ಶಿವಕುಮಾರ್ ಅವರು ನಾಡಿನ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಇದೀಗ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿ ವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಕದಲೂರು ಗ್ರಾಮದಲ್ಲಿ ಪಟ್ಟಲದಮ್ಮ ದೇವಿ ಕಾರ್ತಿಕ ಮಾಸದ ದೀಪೋತ್ಸವ ವೇಳೆ ಕೆರೆಗೆ ಬಾಗಿನ ಅರ್ಪಿಸಿದ ನಂತರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ನಮ್ಮ ಮಠದ ಪರಮಭಕ್ತರು. ಅವರು ಮುಖ್ಯಮಂತ್ರಿಯಾಗುವುದಕ್ಕೆ ನಮ್ಮ ಆಶೀರ್ವಾದವಿದೆ.
ಅವರಿಗಾಗಿ ನಾವು ಭಗವಂತನಲ್ಲಿ ಸಂಕಲ್ಪವನ್ನೂ ಮಾಡಿದ್ದೇವೆ. ನಮ್ಮ ಹಾಗೂ ನಿಮ್ಮೆಲ್ಲರ ಆಶಯದಂತೆ ದೇವರ ಆಶೀರ್ವಾದದಿಂದ ಡಿ.ಕೆ.ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದರು. ಇದೇ ವೇಳೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದ ಕೆ.ಎಂ.ಉದಯ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ನನ್ನ ಪಾತ್ರವೂ ಇದೆ ಎಂದ ಶ್ರೀಗಳು, ಡಿ.ಕೆ.ಶಿವಕುಮಾರ್ ಅವರು ನನ್ನ ಸಲಹೆ ಪಡೆದುಕೊಂಡು ಉದಯ್ ಅವರಿಗೆ ಟಿಕೆಟ್ ನೀಡಿದ್ದಾರೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕೆ.ಎಂ.ಉದಯ್ ಅವರನ್ನು ಮದ್ದೂರು ಕ್ಷೇತ್ರದ ಜನ 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಸಚಿವರನ್ನಾಗಿ ಮಾಡುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದರು.
ಚುನಾವಣೆ ಗೆಲ್ಲಲು ಜನರ ಹೃದಯ ಗೆಲ್ಲಬೇಕು: ಪ್ರಧಾನಿ ಮೋದಿ
ಬಿಜೆಪಿಯವರು ಮೊದಲು ಕೇಂದ್ರದಿಂದ ಬರ ಪರಿಹಾರ ತರಲಿ: ಬಿಜೆಪಿ ನಾಯಕರು ಬರಗಾಲದ ಬಗ್ಗೆ ಸುಮ್ಮನೆ ಮಾತನಾಡುವ ಬದಲು ಕೇಂದ್ರದಿಂದ ಪರಿಹಾರ ತರಲಿ. ಜತೆಗೆ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ನಗರದ ವಿಮಾನ ನಿಲ್ದಾಣದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಬಿಟ್ಟು ತೆಲಂಗಾಣಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಬರಗಾಲ ಬಂದಿದೆ. ವಿಪಕ್ಷ ನಾಯಕರು ಕೂಡ ಬರ ಅಧ್ಯಯನಕ್ಕಾಗಿ ಓಡಾಡಿದ್ದಾರೆ.
ಅವರು ಕೇಂದ್ರದಿಂದ ಪರಿಹಾರ ಕೊಡಿಸಲಿ.ನರೇಗಾದಡಿ 100 ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಿಸಬಹುದು. ಇದನ್ನು ಕೇಂದ್ರದಿಂದ ಘೋಷಣೆ ಮಾಡಿಸುತ್ತಿಲ್ಲ ಯಾಕೆ? ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದಲ್ಲಿ ಕಂದಾಯ ಹಾಗೂ ಕೃಷಿ ಸಚಿವರು ಎಲ್ಲರಿಗಿಂತ ಮುಂಚಿತವಾಗಿ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿದ್ದು, ಪರಿಹಾರ ಬೇಕು ಎಂದಿದ್ದಾರೆ. ಈವರೆಗೂ ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ನೀಡಿಲ್ಲ.
ದೇಶದಲ್ಲಿ ಕಾಂಗ್ರೆಸ್ ಜನತೆಯ ವಿಶ್ವಾಸ ಕಳೆದುಕೊಂಡಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ
ಈಗ ಅವರು ಬಿಜೆಪಿ ನಾಯಕರು ತಮ್ಮ ವರದಿ ಕೊಟ್ಟು ಪರಿಹಾರ ಕೊಡಿಸಲಿ. ಬರಗಾಲ ಎಂದು ಕೇವಲ ಮಾತನಾಡುವುದಲ್ಲ. ಬರೀ ಆರೋಪ ಮಾಡುವುದಕ್ಕಿಂತ ತಾನು ಏನು ಮಾಡಿದ್ದೇವೆ ಎಂದು ಹೇಳಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದಿಂದ ಯಾವ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮುಖ್ಯಮಂತ್ರಿಗಳು ಯಾರಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂದು ಮಾತನಾಡಿದ್ದಾರೆ. ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಗೋಶಾಲೆಗಳಿಗೆ ಮೇವು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.