Asianet Suvarna News Asianet Suvarna News

ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಅಧಿಸೂಚನೆ ಪ್ರಕಟ

ಕಲಬುರಗಿ ಜಿಲ್ಲೆಯ ಚಿಂಚೋಳಿ ಹಾಗೂ ಧಾರವಾಡದ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ.

Notification announced For Chincholi And Kundagola Assembly By Elections
Author
Bengaluru, First Published Apr 22, 2019, 5:42 PM IST

ಬೆಂಗಳೂರು, [ಏ.22]: ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಈಗಾಗಲೇ ದಿನಾಂಕ ಪ್ರಕಟವಾಗಿದ್ದು, ಇಂದು [ಸೋಮವಾರ] ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಿಸಿದ್ದಾರೆ.

ಈಗಾಗಲೇ ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿದಂತೆ ಇದೇ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ಕ್ಕೆ ಮತ ಎಣಿಕೆ ನಡೆಯಲಿದೆ. ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಕಾರ್ಯವೂ ಆರಂಭವಾಗಿದ್ದು, ಏಪ್ರಿಲ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

ಉಮೇಶ್ ಜಾಧವ್ ರಾಜೀನಾಮೆ: ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ದಿನಾಂಕ ಪ್ರಕಟ

ಏಪ್ರಿಲ್ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ನಾಮಪತ್ರ ವಾಪಸಾತಿಗೆ ಅಂತಿಮ ದಿನಾಂಕವಾಗಿರುತ್ತದೆ.

ಉಮೇಶ್ ಜಾಧವ್ ಅವರು ಕಾಂಗ್ರೆಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಂಚೋಳಿ ವಿಧಾಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಮತ್ತೊಂದೆಡೆ ಸಚಿವರಾಗಿದ್ದ ಸಿ.ಎಸ್​. ಶಿವಳ್ಳಿ ಅವರ ನಿಧನದಿಂದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. 

Follow Us:
Download App:
  • android
  • ios