ಇಂದು (ಸೋಮವಾರ) ನಡೆದ ಯುವ ಸಂಘಟನಾ ಸಭೆಯಲ್ಲಿ ಗಿ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿ ರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. 

ಬೆಂಗಳೂರು, (ಜ.04): ಇಲ್ಲಿಯವರೆಗೂ ಒಂದು ರೀತಿಯ ರಾಜಕಾರಣ ನಡೆಯಿತು. ಇನ್ನು ಮುಂದಿನ ದಿನಗಳಲ್ಲಿ ನಿಜವಾದ ರಾಜಕಾರಣ ಆರಂಭವಾಗಲಿದೆ. ಪಕ್ಷದ ಯಾರೊಬ್ಬರೂ ನಿರುತ್ಸಾಹಿಗಳಾಗದೆ ಕೆಲಸ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು,

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಇಂದು (ಸೋಮವಾರ) ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ಪಕ್ಷದ ಯುವ ಸಂಘಟನಾ ಸಭೆಯಲ್ಲಿ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ. ಯಾವುದೇ ಕಾರಣಕ್ಕೂ ಪಕ್ಷವನ್ನ ವಿಲೀನ ಮಾಡುವ ಸಂದರ್ಭ ಬರುವುದಿಲ್ಲ. ಯಾವ ಪಕ್ಷದ ಜೊತೆಗೂ ನಮ್ಮ ಪಕ್ಷವನ್ನ ವಿಲೀನ ಮಾಡುವುದಿಲ್ಲ. ಇದನ್ನ ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ ಎಂದರು.

ಸಂಕ್ರಾಂತಿ ನಂತರ ದೊಡ್ಡ ಮಟ್ಟದಲ್ಲಿ ಬದಲಾವಣೆ: ಹೊಸ ಬಾಂಬ್ ಸಿಡಿಸಿದ ಎಚ್‌ಡಿಕೆ

ಯಾರೂ ಉತ್ಸಾಹ ಕಳೆದುಕೊಳ್ಳಬೇಡಿ. ನಾವು ನಿಮ್ಮ ಜೊತೆ ಇದ್ದೇವೆ. ತಳಮಟ್ಟದಲ್ಲಿ ಪಕ್ಷ ಸಾಕಷ್ಟು ಸದೃಢವಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆಯೇ ಇದಕ್ಕೆ ಸಾಕ್ಷಿ ಎಂದು ನಿಖಿಲ್ ಹೇಳಿದರು.

ಮುಂಬರುವ ಚುನಾವಣೆಗಳಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದ ಅವರು, ಮತ್ತೊಮ್ಮೆ ಕುಮಾರಣ್ಣ ಸಿಎಂ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ‌ ಶ್ರಮವಹಿಸಿ ‌ಪಕ್ಷ ಸಂಘಟಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.