ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಸಿಎಂ ಸಭೆಯ ನಿರ್ಣಯಕ್ಕೆ ಆಕ್ಷೇಪ: ಸಂಸದ ಯದುವೀರ ಒಡೆಯರ್
ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿಚಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೆಲವು ನಿರ್ಣಯ ಕೈಗೊಂಡಿರುವುದು ಆಕ್ಷೇಪಾರ್ಹ ಎಂದು ಮೈಸೂರು ರಾಜವಂಶಸ್ಥರೂ ಆದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮೈಸೂರು (ಸೆ.06): ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿಚಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೆಲವು ನಿರ್ಣಯ ಕೈಗೊಂಡಿರುವುದು ಆಕ್ಷೇಪಾರ್ಹ ಎಂದು ಮೈಸೂರು ರಾಜವಂಶಸ್ಥರೂ ಆದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕೆಲವು ನಿರ್ಣಯ ಕೈಗೊಳ್ಳಲಾಗಿದೆ. ಪ್ರಾಧಿಕಾರದ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ನಿರ್ಧಾರಕ್ಕೆ ನನ್ನ ಆಕ್ಷೇಪವಿದೆ. ಆ ನಿರ್ಣಯ ಊರ್ಜಿತವಾಗುವುದಿಲ್ಲ. ನಾವು ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ. ನಮ್ಮ ಮುಂದಿನ ನಡೆ ಏನು ಎಂಬುದನ್ನು ಸದ್ಯದಲ್ಲಿಯೇ ತಿಳಿಸುತ್ತೇವೆ ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪರವಾದ ಏಕೈಕ ಪಕ್ಷ ಬಿಜೆಪಿ: ಸಂಸದ ಯದುವೀರ ಒಡೆಯರ್
ಪ್ರಶಸ್ತಿಗೆ ತಡೆ ಸರಿಯಲ್ಲ: ಉಡುಪಿಯಲ್ಲಿ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದ ಬಳಿಕ ತಡೆ ಹಿಡಿಯಲಾಗಿದೆ. ರಾಜ್ಯ ಸರ್ಕಾರದ ಈ ಸರಿಯಲ್ಲ ಎಂದರು. ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳನ್ನು ಸಮಾನತೆಯ ದೃಷ್ಟಿಯಿಂದ ಕಾಣುತ್ತಾರೆ. ಹಾಗಾಗಿ ಎಲ್ಲರೂ ಸಮವಸ್ತ್ರ ಧರಿಸಿಕೊಂಡು ಬನ್ನಿ ಎಂದು ಹೇಳಿದ್ದಾರೆ. ಆದರೆ ಇದನ್ನೇ ಮುಂದಿಟ್ಟುಕೊಂಡು ಪ್ರಕಟಿಸಿದ್ದ ಪ್ರಶಸ್ತಿಯನ್ನು ತಡೆ ಹಿಡಿದಿರುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು.
ನಮ್ಮನ್ನು ಕೋಮುವಾದಿ ಎನ್ನುತ್ತಾರೆ. ಹಿಜಾಬ್ ಧರಿಸಿಕೊಂಡು ಶಾಲೆಗೆ ಬರಬೇಡಿ ಎಂದು ಹೇಳಿದ್ದ ಶಿಕ್ಷಕರಿಗೆ ಪ್ರಶಸ್ತಿ ತಡೆ ಹಿಡಿದಿದ್ದಾರೆ. ಈ ಮೂಲಕ ನಿಜವಾದ ಕೋಮುವಾದಿ ಯಾರು ಎಂದು ಸರ್ಕಾರ ತೋರಿಸಿದೆ. ಈ ಕೂಡಲೇ ಪ್ರಶಸ್ತಿ ತಡೆದಿರುವುದನ್ನು ರದ್ದುಗೊಳಿಸಬೇಕು ಎಂದರು. ತಡೆ ಹಿಡಿದ ಪ್ರಶಸ್ತಿಯನ್ನು ಆ ಶಿಕ್ಷಕರಿಗೆ ಕೊಡಬೇಕು, ಇಲ್ಲದಿದ್ದರೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಯದುವೀರ್ ಎಚ್ಚರಿಸಿದರು.
2025ರಲ್ಲೇ ಬರಬಹುದಾದ ಚುನಾವಣೆಗೆ ಸಿದ್ಧರಾಗಿ: ಅಚ್ಚರಿ ಮೂಡಿಸಿದ ಕುಮಾರಸ್ವಾಮಿ ಹೇಳಿಕೆ
ಗಣಪತಿ ಪ್ರತಿಷ್ಠಾಪನೆಗೆ ನಿರ್ಬಂಧ ಸರಿಯಲ್ಲ: ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಪೊಲೀಸರು ನಿರ್ಬಂಧ ವಿಧಿಸುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು. ಗಣಪತಿ ಮೂರ್ತಿಗಳನ್ನು ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಷ್ಠಾಪಿಸಬೇಕು. ವಿದ್ಯುತ್ ಕಂಬಗಳಿಂದ ಅಕ್ರಮವಾಗಿ ಸಂಪರ್ಕ ಪಡೆದುಕೊಳ್ಳಬಾರದು. ಒಂದು ವೇಳೆ ಪೊಲೀಸರು ಮೂರ್ತಿ ಪ್ರತಿಷ್ಠಾಪನೆಗೆ ಅಡ್ಡಿಪಡಿಸಿದರೆ ನನ್ನ ಗಮನಕ್ಕೆ ತನ್ನಿ. ಜನರು ಮುಕ್ತವಾಗಿ ಗಣಪತಿ ಹಬ್ಬ ಆಚರಿಸಲು ಅನುವು ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.