ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಕೊಡಿ: ಅಣ್ಣಾಮಲೈ
ಹನೂರು ಕ್ಷೇತ್ರದ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಅಣ್ಣಾಮಲೈ ತಿಳಿಸಿದರು.
ಚಾಮರಾಜನಗರ (ಮಾ.31): ಹನೂರು ಕ್ಷೇತ್ರದ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಅಣ್ಣಾಮಲೈ ತಿಳಿಸಿದರು. ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪಖ್ಯಾತಿಗೆ ಗುರಿಯಾಗಿದ್ದ ಚಾಮರಾಜನಗರ ಜಿಲ್ಲೆಯಿಂದಲೇ ಸರ್ಕಾರದ ಸಾಧನೆಗಳನ್ನು ತಲುಪಿಸುವ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭ ಮಾಡಿದ್ದನ್ನು ಜಿಲ್ಲೆಯ ಜನತೆ ಮರೆಯಬಾರದು.
ದೇಶದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರ ಮಾಡದಿರುವ ಅಭಿವೃದ್ಧಿ ಕಾರ್ಯಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾಧಿಸಿ ತೋರಿಸಿದೆ. ಮೋದಿ ಬಂದ ಮೇಲೆ ಅಭಿವೃದ್ಧಿಯ ಪರ್ವ ಶುರುವಾಗಿದೆ. ಸರ್ಕಾರ ಮತ್ತು ಅಧಿಕಾರಿಗಳು ಗ್ರಾಮೀಣ ಪ್ರದೇಶದ ಜನರ ಮನೆ ಬಾಗಿಲಿಗೆ ಬರುವಂತಾಗಿದೆ. ಈ ಹಿಂದೆ ಆಯ್ಕೆಯಾದ ಜನಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರ್ಲಕ್ಷ ವಹಿಸಿದ್ದರಿಂದ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿ ಉಳಿದಿದೆ. 2024 ಡಿ.31ಕ್ಕೆ ದೇಶದ ಪ್ರತಿ ಮನೆಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ ಅವರ ಸಂಕಲ್ಪವಾಗಿದೆ.
ರಂಗೇರಿದ ಹೊಳಲ್ಕೆರೆ ಚುನಾವಣಾ ಅಖಾಡ: ಮಾಜಿ ಸಚಿವ ಎಚ್.ಆಂಜನೇಯಗೆ ಅದ್ದೂರಿ ಸ್ವಾಗತ
ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸ್ವತಂತ್ರ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ರಾಜ್ಯದ ಇನ್ನಷ್ಟು ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಿ ಎಂದು ಮನವಿ ಮಾಡಿದರು. ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮಾತನಾಡಿ ರಾಜ್ಯದ ಎಲ್ಲಾ ಸಮುದಾಯಗಳನ್ನು ಒಂದುಗೂಡಿಸಿ ಅಭಿವೃದ್ಧಿಯ ಸಾಧನೆ ಮಾಡುತ್ತಿರುವ ಬಿಜೆಪಿ ಈ ಚುನಾವಣೆಯಲ್ಲಿ ಮಿಷನ್ 150 ಸಂಕಲ್ಪ ಹೊಂದಿದೆ. ಬಿಜೆಪಿಯ ಸ್ವತಂತ್ರ ಸರ್ಕಾರಕ್ಕೆ ಎಂಬ ನಾವೆಲ್ಲರೂ ಪಣತೊಟ್ಟಿನಿಂತಿದ್ದೇವೆ. ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ವೆಂಕಟೇಶ್ ಮಾತನಾಡಿ ಅಧಿಕಾರದ ಆಸೆಗಾಗಿ ಅಥವಾ ಚುನಾವಣಾ ರಾಜಕಾರಣಕ್ಕಾಗಿ ಎಂದು ನಾನು ಆಸೆ ಪಟ್ಟವನಲ್ಲ.
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ಹಣ ವಶ
ಜನರ ಕಷ್ಟಸುಖಗಳಿಗೆ ಭಾಗಿಯಾಗಿ ನಿಮ್ಮಗಳ ಸೇವೆ ಮಾಡುವುದಕ್ಕಾಗಿ ಮಾತ್ರ ನಾನು ಹನೂರಿಗೆ ಬಂದಿದ್ದೇನೆ. ಚುನಾವಣೆ ಬರಲಿ ಹೋಗಲಿ ನಿಮ್ಮ ಸೇವೆ ಮಾಡಲು ನಾನು ನಿಮ್ಮ ಜೊತೆ ಇರುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಓಬಿಸಿ ಮೋರ್ಚಾದ ಕಾರ್ಯದರ್ಶಿ ಸುರೇಶ್ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದತ್ತೇಶ್ ಕುಮಾರ್, ಯುವ ಮುಖಂಡ ನಿಶಾಂತ್, ಪ್ರೀತಮ್ ನಾಗಪ್ಪ,ಮಂಡಲ ಅಧ್ಯಕ್ಷರಾದ ಸಿದ್ದಪ್ಪ, ವೀರಭದ್ರ, ಮುಖಂಡರಾದ ಒಬಿಸಿ ಉಪಾಧ್ಯಕ್ಷ ವೆಂಕಟಸ್ವಾಮಿ , ನಿಕಟಪೂರ್ವ ಜಿಲ್ಲಾಧ್ಯಕ್ಷ ಆರ್. ಸುಂದರ, ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್ ಹಾಗೂ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.