ಬೆಂಗಳೂರು, (ಮೇ.07): ಮೊನ್ನೇ ಅಂದ್ರೆ ನಾಲ್ಕು ದಿನದಿಂದ ಅಷ್ಟೇ ರಾಜ್ಯದ ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಬದಲಿಸಲಾಗಿತ್ತು. ಆದ್ರೆ, ಇದೀಗ ಮತ್ತೆ ಇಂದು (ಶುಕ್ರವಾರ) ಮೂರು ಜಿಲ್ಲೆಗಳ ಉಸ್ತುವಾರಿಗಳನ್ನ ಚೇಂಜ್ ಮಾಡಿ ಸರ್ಕಾರ ಆದೇಶಿಸಿದೆ.

ಹೌದು... ಕೋಲಾರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದೆ.

6 ಜಿಲ್ಲೆಗಳಿಗೆ ನೂತನ ಉಸ್ತುವಾರಿ : ಯಾರಿಗೆ ಯಾವ ಜಿಲ್ಲೆ..?

ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ಮತ್ತೆ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

ಉಳಿದಂತೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಚವ್ಹಾಣ್ ಬದಲಿಗೆ ತೋಟಗಾರಿಕೆ ಸಚಿವ ಆರ್.ಶಂಕರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೊದಲು  ಅರವಿಂದ ಲಿಂಬಾವಳಿ ಅವರಿಗೆ ಬೀದರ್, ಪ್ರಭು ಚವ್ಹಾಣ್‌ಗೆ ಯಾದಗಿರಿ ಉಸ್ತುವಾರಿ ನೀಡಲಾಗಿತ್ತು.

ಕೆಲ ದಿನಗಳ ಹಿಂದೆ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಆರು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.