ರಾಜ್ಯಮಟ್ಟದಲ್ಲಿ , ರಾಷ್ಟ್ರ ಮಟ್ಟದಲ್ಲಿ ಅನೇಕ ಬಾರಿ ನಡೆಯುವ ಚುನಾವಣೆಗಿಂತ ಒಂದು ಒಂದು ಚುನಾವಣೆ ಬಗ್ಗೆ ಇದೀಗ ಚರ್ಚೆ ನಡೆದಿದೆ. ಈ ಬಗ್ಗೆ ಅಧಿವೇಶನದಲ್ಲಿಯೂ ಹೆಚ್ಚಿನ ಚರ್ಚೆ ಬಗ್ಗೆ ಪ್ರಸ್ತಾಪಿಸಲಾಯಿತು.
ಬೆಂಗಳೂರು (ಫೆ.02): ಕೇಂದ್ರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ‘ಒಂದು ದೇಶ ಒಂದು ಚುನಾವಣೆ’ ಸಂಬಂಧ ಚರ್ಚೆ ನಡೆಸುವ ವಿಚಾರವನ್ನು ಮುಂದಿನ ಅಧಿವೇಶನಕ್ಕೆ ಮುಂದೂಡಿ ಕಾರ್ಯ ಕಲಾಪ ಸಲಹಾ ಸಭೆ ನಿರ್ಧಾರ ಕೈಗೊಂಡಿದೆ.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಈ ಬಾರಿಯ ಅಧಿವೇಶನದ ಬದಲು ಮುಂದಿನ ಬಜೆಟ್ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಕುರಿತು ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.
ಲೋಕಸಭಾ ಚುನಾವಣೆ : ಬೆಳಗಾವಿ ಸ್ಪರ್ಧೆಗೆ ಈ ಮುಖಂಡಗೆ ಕರೆ..?
ಮಾಚ್‌ರ್ ತಿಂಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆಗೂ ಮುನ್ನ ಎರಡು ದಿನಗಳ ಕಾಲ ಈ ವಿಚಾರಕ್ಕಾಗಿ ಮೀಸಲಿಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸಕ್ತ ಅಧಿವೇಶನವನ್ನು ಶುಕ್ರವಾರದವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ರಾಜ್ಯಪಾಲರ ಭಾಷಣದ ಮೇಲಿನ ವಂದನಾರ್ಪಣ ಚರ್ಚೆಯನ್ನು ಬುಧವಾರದವರೆಗೆ ನಡೆಸಲಾಗುವುದು. ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ನೀಡಲಿದ್ದಾರೆ. ಮಂಗಳವಾರದಿಂದ ಸದನವನ್ನು ಬೆಳಗ್ಗೆ 10.30ಕ್ಕೆ ಆರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಇದರಿಂದ ರಾಜ್ಯಪಾಲರ ಭಾಷಣದ ಮೇಲೆ ಹೆಚ್ಚಿನ ಜನ ಚರ್ಚೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿದೆ. ವಿಧೇಯಕಗಳನ್ನು ಎಲ್ಲವೂ ಒಟ್ಟಿಗೆ ತೆಗೆದುಕೊಳ್ಳುವ ಬದಲು ಪ್ರತಿದಿನ ಮೂರ್ನಾಲ್ಕು ಮಾತ್ರ ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 2, 2021, 9:12 AM IST