Asianet Suvarna News Asianet Suvarna News

ಪಕ್ಷಾಂತರಿಗಳು 10 ವರ್ಷ ಚುನಾವಣೆಗೆ ನಿಲ್ಲಬಾರದು: ಸಿದ್ದು

ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದ ಮೂಲಕ ಆಪರೇಷನ್‌ ಕಮಲಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಕರ್ನಾಟಕದ ಬಿಜೆಪಿಯ ಚಾಳಿ ಇಡೀ ದೇಶಕ್ಕೆ ಹಬ್ಬಿಸಿ ಬಿಟ್ಟಿದ್ದಾರೆ.

operation kamala is a deadly development for democracy says siddaramaiah gvd
Author
Bangalore, First Published Jun 24, 2022, 5:00 AM IST

ಮೈಸೂರು (ಜೂ.24): ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದ ಮೂಲಕ ಆಪರೇಷನ್‌ ಕಮಲಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಕರ್ನಾಟಕದ ಬಿಜೆಪಿಯ ಚಾಳಿ ಇಡೀ ದೇಶಕ್ಕೆ ಹಬ್ಬಿಸಿ ಬಿಟ್ಟಿದ್ದಾರೆ. ಇದನ್ನು ತಡೆಗಟ್ಟಲು ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಒಂದು ಪಕ್ಷದಿಂದ ಆಯ್ಕೆಯಾದವನು ಬೇರೆ ಸ್ಥಾನಕ್ಕೆ ಹೋಗದಂತೆ ತಡೆಯಬೇಕು. ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು. 

ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ. ಆಪರೇಷನ್‌ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು. 2008ರಲ್ಲಿ ಯಡಿಯೂರಪ್ಪ ಮೊದಲ ಆಪರೇಷನ್‌ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಎಲ್ಲಾ ಕಡೆ ಹಣ ಕೊಟ್ಟು ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದು ಗಂಭೀರವಾಗಿ ಟೀಕಿಸಿದರು. ಡಬಲ್‌ ಎಂಜಿನ್‌ ಸರ್ಕಾರ ಏನು ಮಾಡಿದೆ: ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಏನು ಮಾಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುಳ್ಳು, ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ: ಸಿ.ಟಿ.ರವಿ

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಡಬಲ್‌ ಎಂಜಿನ್‌ ಸರ್ಕಾರ ಎಂದಿದ್ದಾರೆ. ಈ ಸರ್ಕಾರ ಏನು ಮಾಡಿದೆ? ಅಭಿವೃದ್ಧಿ ಕಾರ್ಯದ ಪಟ್ಟಿ ಕೊಡಿ ಎಂದ ಅವರು, ಸುಮ್ಮನೇ ಸುಳ್ಳು ಹೇಳಿ ಮೋದಿ ಹೋಗಿದ್ದಾರೆ. ರಾಜ್ಯ ಸರ್ಕಾರವು ತನ್ನ ಬೇಡಿಕೆಗಳ ಕುರಿತಾದ ಮನವಿಯನ್ನೂ ಪ್ರಧಾನಿಗೆ ನೀಡಿಲ್ಲ. ಏಕೆಂದರೆ ಮೋದಿ ಏನೂ ಮಾಡುವುದಿಲ್ಲ ಎಂಬುದು ರಾಜ್ಯ ನಾಯಕರಿಗೆ ಗೊತ್ತಿದೆ. ಅದಕ್ಕೆ ಅವರು ಯಾವುದೇ ಮನವಿ ನೀಡಿಲ್ಲ. ಮೋದಿ ಭೇಟಿ ಹಿನ್ನೆಲೆಯಲ್ಲಿ .25 ಕೋಟಿ ಖರ್ಚಾಗಿದೆ. ಆದರೆ ರಸ್ತೆ ಆಗಿರುವುದನ್ನು ಬಿಟ್ಟರೆ ಜನರಿಗೆ ಹೆಚ್ಚು ಲಾಭವಿಲ್ಲ ಎಂದರು.

ಮಹಿಳೆಯನ್ನು ಆರ್‌ಎಸ್‌ಎಸ್‌ ಮುಖ್ಯ ಸರಸಂಚಾಲಕರಾಗಿ ಮಾಡಲಿ: ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಮೈತ್ರಿಕೂಟವು ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡಿರುವುದು ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ. ಹಾಗೆ ಸಾಮಾಜಿಕ ನ್ಯಾಯ ನೀಡಬೇಕು ಎಂಬುದಿದ್ದರೆ ಆರ್‌ಎಸ್‌ಎಸ್‌ನ ಮುಖ್ಯ ಸರಸಂಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್‌ ಭಾಗವತ್‌ ಅವರ ಸ್ಥಾನಕ್ಕೆ ಇಂತಹ ಮಹಿಳೆಯನ್ನು ನೇಮಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮೋದಿ ರಾಜ್ಯ ಪ್ರವಾಸ ಟೀಕಿಸಿದ ಸಿದ್ದುಗೆ ಬಿಜೆಪಿ ಗುದ್ದು

ದ್ರೌಪದಿ ಮುರ್ಮು ಅವರು ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲ ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಸ್ವತಂತ್ರವಾಗಿ ಕೆಲಸ ಮಾಡಲು ಇವರು ಬಿಡಲ್ಲ. ಹಿಂದೆ ರಾಜೇಂದ್ರಪ್ರಸಾದ್‌ ಅವರು ಮಾಡಿದಂತೆ ಕೆಲಸ ಮಾಡಲು ಆಗುತ್ತಾ? ಎಂದು ಪ್ರಶ್ನಿಸಿದ ಅವರು, ರಾಮನಾಥ್‌ ಕೋವಿಂದ್‌ ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು? ಇದು ಅವರಂತೆ ನಾಮಕವಾಸ್ತೆಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Follow Us:
Download App:
  • android
  • ios