ಆಪರೇಷನ್‌ ಕಮಲ ಮಾಡುವುದಿಲ್ಲ, ಭಯ ಬೇಡ: ಬಿ.ವೈ.ವಿಜಯೇಂದ್ರ

ಬಿಜೆಪಿಯು ಇತರೆ ಪಕ್ಷದವರನ್ನು ಸೆಳೆದು ಆಪರೇಷನ್‌ ಕಮಲ ಮಾಡಲಿದೆ ಎಂಬ ಆತಂಕ ಕಾಂಗ್ರೆಸ್‌ನಲ್ಲಿದ್ದು, ಅಂತಹ ಭಯ ಬೇಡ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Operation Kamala will not do Says BJP State President BY Vijayendra gvd

ಬೆಂಗಳೂರು (ನ.17): ಬಿಜೆಪಿಯು ಇತರೆ ಪಕ್ಷದವರನ್ನು ಸೆಳೆದು ಆಪರೇಷನ್‌ ಕಮಲ ಮಾಡಲಿದೆ ಎಂಬ ಆತಂಕ ಕಾಂಗ್ರೆಸ್‌ನಲ್ಲಿದ್ದು, ಅಂತಹ ಭಯ ಬೇಡ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ಶಾಸಕರೇ ಅನುದಾನ ಇಲ್ಲದೇ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ಕಾಂಗ್ರೆಸ್‌ ಸರ್ಕಾರಕ್ಕೆ ಅವರ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ ಎಂದರು. ಆ ಜಾತಿ, ಈ ಜಾತಿ ಎಂಬ ಮನೋಭಾವನೆ ಬಿಟ್ಟು ನಾನು ಬಿಜೆಪಿ ಕಾರ್ಯಕರ್ತ ಅಂತಾ ಕೆಲಸ ಮಾಡಿದರೆ ನಿಶ್ಚಿತವಾಗಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ನಿಶ್ಚಿತ. 

ಚುನಾವಣೆ ಗೆದ್ದ ಬಳಿಕ ನಾನು ಯಾವುದೇ ಸಮುದಾಯಕ್ಕೆ ಸೇರಿದವನಲ್ಲ. ಕೇವಲ ಬಿಜೆಪಿ ಕಾರ್ಯಕರ್ತ ಎಂದು ಹೇಳಿದ ಅವರು, ನಾನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ನಿರೀಕ್ಷೆ ಮಾಡಿರಲಿಲ್ಲ. ಯಾರೂ ಸಹ ಬೇಸರದಲ್ಲಿ ಇಲ್ಲ. ಅದರ ಬಗ್ಗೆ ಚಿಂತೆ ಪಡಬೇಕಾಗಿಲ್ಲ. ಎಲ್ಲಾ ಹಿರಿಯರು, ಸಂಘ ಪರಿವಾರದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಬಡವರು, ರೈತರ ಪರ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಬಿಜೆಪಿ- ಜೆಡಿಎಸ್‌ನಿಂದ ಶೀಘ್ರವೇ ಬಹಳಷ್ಟು ಮಂದಿ ಕಾಂಗ್ರೆಸ್‌ಗೆ: ಸಚಿವ ಚಲುವರಾಯಸ್ವಾಮಿ

ಬಿಜೆಪಿ ಕಚೇರಿಯಲ್ಲಿ ಹಬ್ಬದ ಸಂಭ್ರಮ, ಹೋಮ, ಪೂಜೆ, ಅಲಂಕಾರ: ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಕ್ಷರಶಃ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಕಾರ್ಯಕರ್ತರ ಜಯಘೋಷದ ಜತೆಗೆ ಹೋಮ-ಹವನಗಳ ಮೂಲಕ ವಿಶೇಷ ಪೂಜೆ ನೆರವೇರಿಸಲಾಯಿತು. ಬಿಜೆಪಿ ಕಚೇರಿಯನ್ನು ತ್ರಿವರ್ಣ ಧ್ವಜ ಬಣ್ಣದಿಂದ ವಿದ್ಯುತ್‌ ದೀಪಾಲಂಕಾರವು ಕಣ್ಮನ ಸೆಳೆಯಿತು. ಹೂವಿನಿಂದ ಕಚೇರಿಯಲ್ಲಿ ಅಲಂಕಾರ ಮಾಡಲಾಗಿದ್ದು, ಪಕ್ಷದ ಅಧ್ಯಕ್ಷರ ಕಚೇರಿಯಲ್ಲಿ ವಿಶೇಷವಾಗಿ ವಿವಿಧ ಹೂಗಳಿಂದ ಅಲಂಕರಿಸಲಾಯಿತು. ಮಂಗಳವಾರ ರಾತ್ರಿ ಕಚೇರಿಯಲ್ಲಿ ಗಣಪತಿ ಹೋಮ ನಡೆಯಿತು.

ಮಂಗಳವಾರ ರಾತ್ರಿಯಿಂದ ಹೋಮ-ಹವನಾದಿ ಧಾರ್ಮಿಕ ಕ್ರಿಯೆಗಳು ಆರಂಭಗೊಂಡವು. ದುರ್ಗಾ ಹೋಮ ನಡೆಸಲಾಯಿತು. ಬಳಿಕ ಪೂರ್ಣಹುತಿಯಾಯಿತು. ಬುಧವಾರ ಬೆಳಗ್ಗೆ ಪದಗ್ರಹಣಕ್ಕೂ ಮೊದಲು ನಿಯೋಜಿತ ಅಧ್ಯಕ್ಷರ ಜೊತೆಗೆ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರು. ಶಾಸಕರು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಕಚೇರಿ ಮುಂಭಾಗದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನ ಗಮನ ಸೆಳೆಯಿತು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿದ್ದು, ಹೊರಭಾಗದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಿ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. 

ವಿದ್ಯುತ್‌ ಕಳ್ಳತನ ವಿವಾದಕ್ಕೆ ಸಿಲುಕಿದ ಎಚ್‌ಡಿಕೆ: ಜೈಲು ಇಲ್ಲ ದಂಡಕ್ಕೆ ಸೀಮಿತ ಎಂದ ಬೆಸ್ಕಾಂ

ಕಾರ್ಯಕ್ರಮಕ್ಕೆ ಆಗಮಿಸಿದ ಕಾರ್ಯಕರ್ತರಿಗಾಗಿ ಊಟದ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಅಭಿಮಾನಿಗಳು ವಿಜಯೇಂದ್ರ ಪರ ಜಯಘೋಷ ಮೊಳಗಿಸಿದರು. ಅಲ್ಲದೇ, ಜೆಪಿ ಕಚೇರಿ ಬಳಿ ವಿಜಯೇಂದ್ರರಿಗೆ ಶುಭಕೋರುತ್ತಿರುವ ಫ್ಲೆಕ್ಸ್‌ಗಳು ರಾರಾಜಿಸಿದವು. ಕಚೇರಿಗೆ ಆಗಮಿಸಿದ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಡೋಲು, ಚೆಂಡೆ, ವಾದ್ಯಗಳನ್ನು ನುಡಿಸಿ ಸ್ವಾಗತಿಸಲಾಯಿತು. ಅಲ್ಲದೇ, ಮಹಿಳೆಯರು ಪೂರ್ಣ ಕುಂಭದ ಮೂಲಕ ಸ್ವಾಗತಿಸಿದರು. ಕ್ರೇನ್‌ ಮೂಲಕ ಸೇಬು ಹಣ್ಣಿನ ಹಾರ ಹಾಕಿದ್ದು ವಿಶೇಷ ಎನಿಸಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ವಿಜಯೇಂದ್ರ ಪರ ಹಾಗೂ ಪಕ್ಷದ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios