ಇಂದಿರಾ ಕ್ಯಾಂಟೀನ್‌ನಲ್ಲಿ ಕಬಾಬ್ ತಿನ್ನಲು ಅವಕಾಶ: ಸಚಿವ ಎಚ್.ಸಿ.ಮಹದೇವಪ್ಪ
ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾಂಸಾಹಾರ ನೀಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಬೇಕಿದ್ದವರು ಕಬಾಬ್ ತಂದು ಅಲ್ಲಿ ತಿನ್ನಬಹುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಮೈಸೂರು (ಜೂ.18): ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾಂಸಾಹಾರ ನೀಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಬೇಕಿದ್ದವರು ಕಬಾಬ್ ತಂದು ಅಲ್ಲಿ ತಿನ್ನಬಹುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಜಿಲ್ಲಾ ಪತ್ರಕರ್ತರ ಸಂಘ ಶನಿವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳ ಸಂಖ್ಯೆ ಹೆಚ್ಚಿಸಲು ನಮ್ಮ ಸರ್ಕಾರ ಉದ್ದೇಶಿಸಿದೆ. ಸದ್ಯ ಅಲ್ಲಿ ಸಸ್ಯಾಹಾರವನ್ನಷ್ಟೇ ನೀಡಲಾಗುವುದು ಎಂದು ತಿಳಿಸಿದರು.
ಸೌಹಾರ್ದ ದೇಶ ಕಟ್ಟಬೇಕು: ನಾವು ಧರ್ಮದ ಆಧಾರದ ಮೇಲೆ ದೇಶ ಕಟ್ಟುವುದಿಲ್ಲ. ಸೌಹಾರ್ದ ದೇಶ ಕಟ್ಟುತ್ತೇವೆ. ಪಠ್ಯ ಪುಸ್ತಕಗಳ ಮೂಲಕ ಚರಿತ್ರೆ ಹೇಳುವಾಗ ಸರಿಯಾಗಿ ಹೇಳಬೇಕು. ಅದನ್ನು ತಿರುಚಬಾರದು. ಜಾತಿ ಧರ್ಮ ಮೀರಿದ ಅಂಬೇಡ್ಕರ್, ಕುವೆಂಪು, ನಾರಾಯಣಗುರು ಮೊದಲಾದವರ ಬಗ್ಗೆ ಅಪವ್ಯಾಖ್ಯಾನ ಮಾಡಬಾರದು ಎಂದು ಇದೇ ವೇಳೆ ಹೇಳಿದರು. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದರೆ ಅಷ್ಟು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟುಕೀಳುಮಟ್ಟದ ರಾಜಕಾರಣಿ ಅವರಲ್ಲ ಎಂದು ಪ್ರತಿಪಕ್ಷಗಳ ಹೊಂದಾಣಿಕೆ ರಾಜಕೀಯದ ಕುರಿತ ಹೇಳಿಕೆಗೆ ತಿರುಗೇಟು ನೀಡಿದರು.
ಹಿಂದೂ ಧರ್ಮ ಕಡೆಗಣಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಆರಗ ಜ್ಞಾನೇಂದ್ರ
ಜಿಲ್ಲಾಭಿವೃದ್ಧಿಗೆ ಅಗತ್ಯವಿರುವಷ್ಟು ನೆರವು: ಚಾಮರಾಜನಗರ ಮತ್ತು ಮೈಸೂರು ಎರಡು ಜಿಲ್ಲೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನಗೆ ರಾಜಕೀಯ ನೆಲೆಕೊಟ್ಟಜಿಲ್ಲೆಗಳಾಗಿವೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವಷ್ಟು ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಮಾಜಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ತಿಳಿಸಿದರು. ನಗರದ ಎಪಿಎಂಸಿ ಅರಿಶಿನ ಮಾರುಕಟ್ಟೆಪ್ರಾಂಗಣದಲ್ಲಿ ಗ್ರಾಮಾಂತರ ಹಾಗೂ ನಗರಬ್ಲಾಕ್ ಕಾಂಗ್ರೆಸ್‌ನಿಂದ ನಡೆದ ಮತದಾರರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಿದ್ದ ಕೃತಜ್ಞತಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳು ಸಂವಿಧಾನದ ಆಶಯಗಳಿಗೆ ಪೂರಕವಾಗಿದ್ದು, ಎಲ್ಲಾ ವರ್ಗದವರಿಗೂ ಸಮಾನ ಅವಕಾಶ ನೀಡಿ, ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿ ರಾಜ್ಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ನೀಡಿದ್ದ 5ಗ್ಯಾರಂಟಿ ಯೋಜನೆಗಳನ್ನು ಕೇವಲ 20 ದಿನಗಳ ಅವಧಿಯಲ್ಲಿ ಜಾರಿಗೊಳಿಸುವ ಮೂಲಕ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಮತ್ತೊಮ್ಮೆ ಸಿದ್ದರಾಮಯ್ಯ ಸಾಬೀತು ಪಡಿಸಿದ್ದಾರೆ.
2013-18ನೇ ಅಧಿಕಾರವಧಿಯಲ್ಲಿ ಕಾಂಗ್ರೆಸ್ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆ ಈಡೇರಿಸಿತ್ತು. ಹೀಗಾಗಿ, ಜನರು ಕಳೆದ 5 ವರ್ಷಗಳ ಬಿಜೆಪಿ ಹಾಗೂ ಜೆಡಿಎಸ್ ಆಡಳಿತದಿಂದ ಬೇಸತ್ತಿದ್ದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಪಣ ತೊಟ್ಟು 135ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವ ಮೂಲಕ 2ನೇ ಬಾರಿಗೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಮಹದೇವಪ್ಪ ತಿಳಿಸಿದರು.
ಎಚ್ಡಿಕೆಯಿಂದ ಜಮೀನು ವಾಪಸ್ ಪಡೆದಿದ್ದೀರಾ?: ಹೈಕೋರ್ಟ್
ಶಾಸಕ ಸಿ.ಪುಟ್ಟರಂಗಶೆಟ್ಟರನ್ನು ಸತತ ನಾಲ್ಕು ಬಾರಿಗೆ ಗೆಲ್ಲಿಸುವ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಸರಳ ಸಜ್ಜನಿಕೆ ಹಾಗೂ ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾದ ಪುಟ್ಟರಂಗಶೆಟ್ಟರ ಗೆಲುವು ಹಿಂದುಳಿದ ವರ್ಗಗಳ ಗೆಲುವಾಗಿದೆ. ಬಹಳಷ್ಟುರಾಜಕಾರಣಿಗಳನ್ನು ಬೆಳೆಸಿದ ಜಿಲ್ಲೆ ಇದಾಗಿದೆ. ನನ್ನ ಹಾಗೂ ಸಿದ್ದರಾಮಯ್ಯ ಅವರ ರಾಜಕೀಯವಾಗಿ ಬೆಳೆಸಿದ ಜಿಲ್ಲೆ ಚಾ.ನಗರ. ಮೈಸೂರು ಅವಿಭಜಿತ ಜಿಲ್ಲೆಯಾಗಿದ್ದ ಚಾ.ನಗರ ಜಿಲ್ಲೆಯ ಬಗ್ಗೆ ರಾಚಯ್ಯ ಅವರಿಗೆ ಹಾಗೂ ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ. ಈ ಕಾಂಗ್ರೆಸ್ ಅವಧಿಯಲ್ಲಿ ಚಾ.ನಗರ ಹೆಚ್ಚು ಅಭಿವೃದ್ಧಿಯಾಗಿದೆ. ದಾಖಲೆಗಳನ್ನು ಒಮ್ಮೆ ತೆಗೆದು ನೋಡಿದರೆ ಅರಿವಿಗೆ ಬರುತ್ತದೆ ಎಂದು ಮಹದೇವಪ್ಪ ನುಡಿದರು.