ಬಿಎಸ್‌ವೈ ಸರ್ಕಾರದ ಮುಂದೆ ಹೊಸ ಡಿಮಾಂಡ್ ಇಟ್ಟ ಸಿದ್ದರಾಮಯ್ಯ

ಕೋವಿಡ್ - 19 ನಿರ್ವಹಣೆ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಂದೆ ಹೊಸ ಡಿಮಾಂಡ್ ಇಟ್ಟಿದ್ದಾರೆ.

opposition leader Siddaramaiah demands For Set up all party Covid-19 monitoring panel

ಬೆಂಗಳೂರು, (ಜೂನ್,30): ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಡಿಮಾಂಡ್ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ಕೋವಿಡ್-19 ನಿರ್ವಹಣೆಗೆ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಿ, ವಿವಿಧ ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಬಾದಾಮಿಯಲ್ಲಿ ಸಿದ್ದರಾಮಯ್ಯರನ್ನ ಹಣಿಯಲು ಬಿಜೆಪಿ, ಜೆಡಿಎಸ್ ರಣತಂತ್ರ

ಕೊರೋನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ,ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿಯಾಗಿದೆ ಅವರ ಕಡೆ ಗಮನಹರಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ.ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಮುಖ್ಯಮಂತ್ರಿ ಅವರೇ ಇದು ಅನ್ಯಾಯ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.

Latest Videos
Follow Us:
Download App:
  • android
  • ios