ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಪ್ರಯುಕ್ತ ದೇಶ-ವಿದೇಶಗಳ ಗಣ್ಯರು ಶುಭಾಶಯ ಕೋರಿದ್ದಾರೆ. ಪಕ್ಷಭೇದ ಮರೆತು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಹಾರೈಸಿದ್ದಾರೆ. ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳು ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಹಾಗೂ ಆಡಳಿತವನ್ನು ಶ್ಲಾಘಿಸಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ 76ನೇ ಹುಟ್ಟುಹಬ್ಬ. 1950ರಲ್ಲಿ ಹುಟ್ಟಿರುವ ಪ್ರಧಾನಿ ಅವರಿಗೆ ಇಂದು ದೇಶ ಮಾತ್ರವಲ್ಲದೇ ವಿದೇಶಗಳ ಮೂಲೆಮೂಲೆಗಳಿಂದಲೂ ಶುಭಾಶಯಗಳ ಸುರಿಮಳೆಯಾಗುತ್ತಲೇ ಇದೆ. ಸಾಮಾನ್ಯವಾಗಿ ಹುಟ್ಟುಹಬ್ಬದ ಸಂದರ್ಭಗಳಲ್ಲಿ ಎಲ್ಲಾ ನಾಯಕರು, ಪಕ್ಷಬೇಧ ಮರೆತು ವಿಷ್ ಮಾಡುವುದು ಸಾಮಾನ್ಯ. ಉಳಿದ ದಿನಗಳಲ್ಲಿ, ವೈಮನಸ್ಸು, ದ್ವೇಷ ಭಾಷಣ, ಆರೋಪ- ಪ್ರತ್ಯಾರೋಪ ಏನೇ ಇರಲಿ ಆದರೆ ಹುಟ್ಟುಹಬ್ಬದಂದು ಸಹಜವಾಗಿ ಎಲ್ಲರೂ ಒಳ್ಳೆಯದ್ದನ್ನೇ ಬಯಸುವುದು ಇದೆ.
ಅದೇ ರೀತಿ, ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ರಾಹುಲ್, ಖರ್ಗೆ ಶುಭಾಶಯ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ" ಎಂದಿದ್ದಾರೆ. ರಾಹುಲ್ ಗಾಂಧಿ ಅವರು X ಖಾತೆಯಲ್ಲಿ ಪ್ರಧಾನಿಯ ಶುಭಾಶಯಗಳನ್ನು ಸಲ್ಲಿಸಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ" ಎಂದು ಹಾರೈಸಿದ್ದಾರೆ. ಕಾಂಗ್ರೆಸ್ ಸಂಸದ ಮತ್ತು ಹಣಕಾಸು ಕುರಿತ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯ ಮನೀಶ್ ತಿವಾರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ 76 ನೇ ಹುಟ್ಟುಹಬ್ಬದ ಶುಭಾಶಯಗಳು. ದೇವರು ಆಶೀರ್ವದಿಸಲಿ" ಎಂದು ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಜೋಸೆಫ್ ವಿಜಯ್ ಏನಂದ್ರು?
ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು, "ಪ್ರಬಲ ಭಾರತವನ್ನು ನಿರ್ಮಿಸುವತ್ತ ಸಮರ್ಪಣಾಭಾವದಿಂದ ಮುನ್ನಡೆಸುತ್ತಿರುವ ಭಾರತದ ಪ್ರಧಾನಿ ತಿರು. ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಪ್ರಧಾನಿಗೆ ಶುಭ ಹಾರೈಸಿದರು, ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ ವಿಷ್
ಇನ್ನು ರಾಷ್ಟ್ರಪತಿ, ಉಪರಾಷ್ಟ್ರಪತಿ ಸೇರಿದಂತೆ ಹಲವಾರು ಗಣ್ಯರು ಪ್ರಧಾನಿ ಅವರಿಗೆ ವಿಷ್ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಶ್ಲಾಘಿಸಿದ್ದು, ಆಡಳಿತ ಮತ್ತು ಸಮಗ್ರ ಅಭಿವೃದ್ಧಿಗೆ ಅವರ ಕೊಡುಗೆಗಳನ್ನು ಎತ್ತಿ ತೋರಿಸಿದ್ದಾರೆ. ಕಳೆದ 25 ವರ್ಷಗಳಲ್ಲಿ, ನೀವು ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯಾಗಿದ್ದ ಅವಧಿಯಲ್ಲಿ, ನೀವು ಉತ್ತಮ ಆಡಳಿತದ ಹಲವು ಹೊಸ ಮಾನದಂಡಗಳನ್ನು ಸ್ಥಾಪಿಸಿದ್ದೀರಿ ಮತ್ತು ಸಮಗ್ರ ಅಭಿವೃದ್ಧಿಗೆ ಅಭೂತಪೂರ್ವ ಆವೇಗ ಮತ್ತು ಹೊಸ ದಿಕ್ಕನ್ನು ನೀಡಿದ್ದೀರಿ" ಎಂದು ರಾಷ್ಟ್ರಪತಿ ಪೋಸ್ಟ್ ಮಾಡಿದ್ದಾರೆ.
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದರು, ಅವರ ಆಡಳಿತದಲ್ಲಿ ಭಾರತದ ಆರ್ಥಿಕ ಪ್ರಗತಿ ಮತ್ತು ಬಡತನ ನಿವಾರಣೆಯನ್ನು ಎತ್ತಿ ತೋರಿಸಿದರು. X ರಂದು, ಅವರು "ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ದೃಢ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತವು ವಿಶ್ವದಲ್ಲಿ ಮತ್ತು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಪ್ರಕಾಶಮಾನವಾದ ತಾಣವಾಗಿ ಹೊಳೆಯುತ್ತಿದೆ. 25 ಕೋಟಿಗೂ ಹೆಚ್ಚು ಭಾರತೀಯರು ತೀವ್ರ ಬಡತನದಿಂದ ಹೊರಬಂದಿದ್ದಾರೆ. ಪರಿವರ್ತನಾತ್ಮಕ ಡಿಜಿಟಲ್ ಕ್ರಾಂತಿಯು ಲಕ್ಷಾಂತರ ಜನರನ್ನು ಸಬಲೀಕರಣಗೊಳಿಸಿದೆ ಮತ್ತು ಬಾಹ್ಯಾಕಾಶ, ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯಿಂದ ಮೂಲಸೌಕರ್ಯ ಮತ್ತು ಉತ್ಪಾದನೆಯವರೆಗೆ ಪ್ರತಿಯೊಂದು ವಲಯವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ ಎಂದಿದ್ದಾರೆ.


