Asianet Suvarna News Asianet Suvarna News

ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸಿದ್ಧ: ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

Opposition parties are ready to answer any issue raised by them Says CM Siddaramaiah gvd
Author
First Published Dec 12, 2023, 12:30 AM IST

ಬೆಳಗಾವಿ (ಡಿ.11): ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದರು. ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. 

ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ ಎಂದರು. ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರು ತಪ್ಪಿತಸ್ಥರೊ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿಯವರೊಂದಿಗೆ ಮಾತನಾಡುತ್ತೇನೆ. ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು ಡಿ.13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುತ್ತವೆ ಎಂದು ತಿಳಿಸಲಾಗಿದೆ ಎಂದರು.

ಸರ್ಕಾರ ಪತನ ಆಗಲಿದೆಯೆಂದು ಎಚ್‌ಡಿಕೆ ಕನಸು ಕಾಣುತ್ತಲೇ ಇರಲಿ: ಸಚಿವ ಚಲುವರಾಯಸ್ವಾಮಿ

ಸುವರ್ಣ ಸೌಧದಲ್ಲಿರುವ ಸಾರ್ವರ್ಕರ್ ಫೋಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು ಎಂದರು. ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಗರ ಮೇಲೆ ಐಟಿ ದಾಳಿ ಆದರೂ ದುಡ್ಡು ಸಿಗುತ್ತೆ: ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಯಾಕೆ ಆದಾಯ ತೆರಿಗೆ (ಐಟಿ) ದಾಳಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಗರ ಮೇಲೆ ಐಟಿ ದಾಳಿಯಾದರೂ ಸಾಕಷ್ಟು ಹಣ ಸಿಗುತ್ತದೆ. ಆದರೆ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಜಾರ್ಖಂಡ್‌ ಕಾಂಗ್ರೆಸ್‌ ಸಂಸದನ ಮೇಲಿನ ತೆರಿಗೆ ದಾಳಿ ಪ್ರಕರಣವನ್ನು ಪ್ರಸ್ತಾಪಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಸಲ್ಮಾನರಿಗೆ ಆರ್ಥಿಕತೆಯಲ್ಲಿ ಪಾಲು ಸಮಾನವಾಗಿ ಸಿಗುತ್ತಿಲ್ಲ ಎನ್ನುವ ಕಾಂಗ್ರೆಸ್‌ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂದು ಟೀಕಿಸಿದ್ದರು. 

ಕೇಂದ್ರ ಸರ್ಕಾರದಿಂದ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

ಇದಕ್ಕೆ ಪ್ರತಿಕ್ರಿಯೆ ಟ್ವೀಟರ್‌ನಲ್ಲಿ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು ಎಂದಿದ್ದಾರೆ. ಆದರೆ, ಯಾಕೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿಯವರ ಮೇಲೆ ಐಟಿ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು. ಆದರೆ, ಅವರ ಮೇಲೆ ದಾಳಿ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

Follow Us:
Download App:
  • android
  • ios