* ಮುಂಬರುವ ವಿಧಾನಸಭೆ ಚುನಾವಣೇಲಿ ಚುಕ್ಕಾಣಿ ಹಿಡಿಯಲು ಶ್ರಮಿಸಿ* ಕಾರ್ಯಕರ್ತರಿಗೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಇಬ್ರಾಹಿಂ ಕರೆ* ಬೆಂಗಳೂರು ಘಟಕ ವತಿಯಿಂದ ಇಬ್ರಾಹಿಂಗೆ ಸನ್ಮಾನ
ಬೆಂಗಳೂರು(ಏ.21): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ(Karnataka Assembly Election) ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾಗಿದ್ದು, ಕಾರ್ಯಕರ್ತರೆಲ್ಲಾ ಒಗ್ಗಟ್ಟಿನಿಂದ ಶ್ರಮ ವಹಿಸಬೇಕಿದೆ ಎಂದು ಜೆಡಿಎಸ್‌ನ(JDS) ನೂತನ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ(CM Ibrahim) ಕರೆ ನೀಡಿದ್ದಾರೆ.
ಬುಧವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಬೆಂಗಳೂರು(Bengaluru) ನಗರದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಈಗಿನಿಂದಲೇ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕಾಗಿದೆ. ಇದಕ್ಕಾಗಿ ಹೆಚ್ಚಿನ ಒತ್ತು ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಮತ್ತು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ(HD Devegowda) ಅವರು ಈಗಾಗಲೇ ರೂಪುರೇಷೆ ರೂಪಿಸಿದ್ದಾರೆ. ಅದರಂತೆಯೇ ಕಾರ್ಯನಿರ್ವಹಿಸಬೇಕಾಗಿದೆ. ಕೆಳಹಂತದಿಂದ ಪಕ್ಷ ಕಟ್ಟಿದರೆ ಮಾತ್ರ ಸದೃಢವಾಗಿರಲಿದೆ. ಅಲ್ಲದೇ, ಜೆಡಿಎಸ್ ಸರ್ಕಾರದ ಸಾಧನೆಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಬೇಕು. ಇದಕ್ಕಾಗಿ ಪಕ್ಷದ ಪ್ರತಿಯೊಬ್ಬರು ಒಗ್ಗಟ್ಟಿನಲ್ಲಿ ಕೆಲಸ ಮಾಡಬೇಕು. ಆಗ ಮಾತ್ರ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಾಜಪೇಯಿಗಿಂತ ಮೋದಿ ದೊಡ್ಡ ಲೀಡ್ರಾ? ಇಬ್ರಾಹಿಂ, ಜೆಡಿಎಸ್, ಬಿಜೆಪಿ ವಿರುದ್ಧವೂ ಸಿದ್ದು ವಾಗ್ದಾಳಿ
ವಾರ್ಡ್ ಮಟ್ಟ ಅಧ್ಯಕ್ಷರಿಂದ ಹಿಡಿದು ಜಿಲ್ಲಾಧ್ಯಕ್ಷರು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕಾರ್ಯಕರ್ತರು ಸದಸ್ಯತ್ವ ನೊಂದಣಿ ಕಾರ್ಯವನ್ನು ಚುರುಕುಗೊಳಿಸಬೇಕು. ಜೆಡಿಎಸ್ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವುದರ ಜತೆಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ಎರಡು ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನತೆಗೆ ಬೇಸರಗೊಂಡಿದ್ದಾರೆ. ಪ್ರಾದೇಶಿಕ ಪಕ್ಷದ(Regional Party) ಅಗತ್ಯತೆ ಇದೆ. ರಾಜ್ಯದ(Karnataka) ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ. ಹೀಗಾಗಿ ಜೆಡಿಎಸ್‌ನತ್ತ ಜನತೆಯ ಒಲವು ಇದೆ ಎಂದು ಹೇಳಿದರು.
ಇದೇ ವೇಳೆ ಜೆಡಿಎಸ್ ಬೆಂಗಳೂರು ಘಟಕ ವತಿಯಿಂದ ಇಬ್ರಾಹಿಂ ಅವರನ್ನು ಸನ್ಮಾನಿಸಲಾಯಿತು. ಪಕ್ಷದ ವಕ್ತಾರ ಟಿ.ಎ.ಶರವಣ, ಪಕ್ಷದ ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್. ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು: ಕಾಂಗ್ರೆಸ್ ತೊರೆದ ಇಬ್ರಾಹಿಂಗೆ ಸಿದ್ದರಾಮಯ್ಯ ತಿರುಗೇಟು!
ಇಬ್ರಾಹಿಂ ನಂತರ ಸಿದ್ದು ಕಾಂಗ್ರೆಸ್ ಬಿಟ್ಟರೂ ಆಶ್ಚರ್ಯವಿಲ್ಲ: ಸಿ.ಟಿ.ರವಿ
ಚಿಕ್ಕಮಗಳೂರು: ಕಾಂಗ್ರೆಸ್(Congress), ನೀತಿಹೀನ, ನೇತೃತ್ವಹೀನ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ(CT Ravi) ಆರೋಪಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬೆಳವಣಿಗೆಗೆ ನೇತೃತ್ವ ಮತ್ತು ನೀತಿ ಕಾರಣವಾಗಿರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ನೇತೃತ್ವವೂ ಇಲ್ಲ, ನೀತಿಯೂ ಇಲ್ಲ. ಹಾಗಾಗಿ ಜನ ವಿಶ್ವಾಸ ಇಡಲು ಸಾಧ್ಯ ಇಲ್ಲ ಎಂದರು.
ಕ್ಯಾನ್ಸರ್, ದೇಹದಲ್ಲಿ ಹೇಗೆ ಹರಡುತ್ತದೆಯೋ ಹಾಗೆ, ಕಾಂಗ್ರೆಸ್ ಪಕ್ಷಕ್ಕೆ ಕ್ಯಾನ್ಸರ್ ಬಂದಿದೆ. ಅದಕ್ಕೆ ಚಿಕಿತ್ಸೆ ಇಲ್ಲ. ಅದು, ಜಾತಿವಾದ, ಪರಿವಾರವಾದ, ಭ್ರಷ್ಟಚಾರದಲ್ಲಿ ಮುಳುಗಿ ಹೋಗಿದೆ. ಅದಕ್ಕೆ ಚಿಕಿತ್ಸೆ ಇಲ್ಲ. ಹಾಗಾಗಿ ಅದು ಬದುಕುತ್ತೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
