ಜಾತಿ ಜನಗಣತಿಯ ಮೂಲ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಪಾದಿಸಿದ್ದಾರೆ.
ಬೆಂಗಳೂರು (ಏ.22): ಜಾತಿ ಜನಗಣತಿಯ ಮೂಲ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಪಾದಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗಿರುವುದು ನಕಲಿ ವರದಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ.
ಕಾಂಗ್ರೆಸ್ಸಿನ ಸಚಿವರು ಇದನ್ನು ವೈಜ್ಞಾನಿಕ ಹಾಗೂ ಅಸಲಿ ಎಂದು ಹೇಳುತ್ತಿದ್ದಾರೆ ಎಂದರು. ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜು ಸಹಿ ಹಾಕದೆ ಓಡಿಹೋಗಿದ್ದಾರೆ. ಮೂಲ ವರದಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ. ಬೇಕಾದ ಜಾತಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಸಚಿವ ಸಂಪುಟದಲ್ಲಿ ಗಲಾಟೆಯಾಗಿದೆ. ಯಾರ ಮನೆಗೂ ಹೋಗದೆ ಸಮೀಕ್ಷೆ ಮಾಡಲಾಗಿದೆ. ಎಲ್ಲರೂ ಸಿದ್ದರಾಮಯ್ಯ ಅವರ ಮನೆ, ಕಚೇರಿಯಲ್ಲಿ ಕುಳಿತು ವರದಿ ತಯಾರಿಸಿದ್ದಾರೆ. ಗಣತಿಗೆಂದು ಖರ್ಚಾದ 150 ಕೋಟಿ ರು. ಎಲ್ಲಿ ಹೋಗಿದೆ ಎಂಬುದನ್ನು ಸರ್ಕಾರ ತಿಳಿಸಬೇಕು ಎಂದು ಅಶೋಕ್ ಆಗ್ರಹಿಸಿದರು.
ದಲಿತರಿಗೆ ನಿರಂತರ ಅನ್ಯಾಯ: ಕಾಂಗ್ರೆಸ್ ಪಕ್ಷ ದೇಶದಲ್ಲಿ ದಲಿತ ಸಮುದಾಯಕ್ಕೆ ನಿರಂತರವಾಗಿ ೭೫ ವರ್ಷಗಳಿಂದ ಅನ್ಯಾಯ ಮಾಡಿಕೊಂಡು ಬಂದಿದೆ. ಅದನ್ನು ಜನಸಾಮಾನ್ಯರಿಗೆ ತಿಳಿಸಿ ದಲಿತ ಸಮುದಾಯದವರನ್ನು ಎಚ್ಚರಿಸುವ ಉದ್ದೇಶ ಭೀಮ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು. ಅವರು ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಭೀಮಹೆಜ್ಜೆ ಶತಮಾನದ ಸಂಭ್ರಮದ ರಥಯಾತ್ರೆಗೆ ಶಿರಾ ನಗರದಲ್ಲಿ ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡ ಮಾತನಾಡಿದರು. ದೇಶದಲ್ಲಿ ಪ.ಜಾತಿ, ಪಂಗಡದವರು, ತುಳಿತಕ್ಕೊಳಗಾದವರು, ದಲಿತರು, ಹಿಂದುಳಿದ ವರ್ಗದವರು ವಿದ್ಯಾವಂತರಾಗಿ ಅಭಿವೃದ್ಧಿ ಹೊಂದಿದ್ದರೆ ಅದಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಕಾರಣ. ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶಗಳು ದೊರಕಿವೆ.
ಮಹದೇಶ್ವರ ಬೆಟ್ಟದ ಮ್ಯೂಸಿಯಂನಲ್ಲಿ ರಾಮವ್ವ ಮೂಗಪ್ಪ ಇತಿಹಾಸ ಕೈ ಬಿಟ್ಟಿದ್ದಾರೆ: ಏನಿದು ಆರೋಪ?
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು ೧೦೦ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಭೀಮ ಹೆಜ್ಜೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಭೀಮ ಹೆಜ್ಜೆ ೧೦೦ರ ಸಂಭ್ರಮ ಜಾಗೃತಿ ಕಾರ್ಯಕ್ರಮ ಅಂಗವಾಗಿ ಬೆಂಗಳೂರಿನಿಂದ ನಿಪ್ಪಾಣಿ ವರೆಗೆ ನಡೆಯುತ್ತಿದ್ದು, ಏ. ೧೫ರಂದು ನಿಪ್ಪಾಣಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ವಿಧಾನಸೌಧದಲ್ಲಿರುವ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭೀಮ ಹೆಜ್ಜೆ ಅಭಿಯಾನಕ್ಕೆ ಚಾಲನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಗೋವಿಂದ ಕಾರಜೋಳ, ಎನ್ ಮಹೇಶ್, ಮಾಜಿ ಸಂಸದ ಕೋಲಾರ ಮುನಿಸ್ವಾಮಿ, ಸೇರಿದಂತೆ ಹಲವರು ಚಾಲನೆ ನೀಡಿದ್ದಾರೆ ಎಂದರು.
