Mandya: ಮತದಾರ ಹೇಳಿದಂತೆ ನಮ್ಮ ಕೆಲಸ: ಶಾಸಕ ಎಚ್.ಟಿ.ಮಂಜು
ಜೆಡಿಎಸ್ ಪಕ್ಷ ಹಾಗೂ ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಮತದಾರರ ಆಶಯದಂತೆ ಮುಂದಿನ ದಿನಗಳಲ್ಲಿ ಕೆಲಸ ನಿರ್ವಹಿಸುತ್ತೇನೆ ಎಂದು ನೂತನ ಶಾಸಕ ಎಚ್.ಟಿ.ಮಂಜು ತಿಳಿಸಿದರು.
ಕೆ.ಆರ್.ಪೇಟೆ (ಮೇ.20): ಜೆಡಿಎಸ್ ಪಕ್ಷ ಹಾಗೂ ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಮತದಾರರ ಆಶಯದಂತೆ ಮುಂದಿನ ದಿನಗಳಲ್ಲಿ ಕೆಲಸ ನಿರ್ವಹಿಸುತ್ತೇನೆ ಎಂದು ನೂತನ ಶಾಸಕ ಎಚ್.ಟಿ.ಮಂಜು ತಿಳಿಸಿದರು. ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಸಂತೆಬಾಚಹಳ್ಳಿ ಮತ್ತು ರಂಗನಾಥಪುರ ಕ್ರಾಸ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ತೆರಳಿ ಮತದಾರರಿಗೆ ಕೃತಜ್ಙತೆ ತಿಳಿಸಿ ಮಾತನಾಡಿ, ತಾಲೂಕಿನಲ್ಲಿ ಬದಲಾವಣೆಯನ್ನು ತಂದಿದ್ದೀರಿ ಎಂದರು. ನೀವು ತೋರಿರುವ ಈ ವಿಶ್ವಾಸ, ಪ್ರೀತಿಯನ್ನು ವರ್ಣಿಸಲು ಸಾಧ್ಯವಿಲ್ಲ. ನಿಮ್ಮ ಗ್ರಾಮಗಳಿಗೆ ಭೇಟಿ ನೀಡಿದಾಗ ಯುವಕರು, ಮಹಿಳೆಯರು, ಹಿರಿಯರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಜನರು ನನಗೆ ಅಪಾರವಾದ ಅಭಿಮಾನ ತೋರಿಸಿ ಹಾರೈಸಿ ನನ್ನ ಗೆಲುವಿಗೆ ಕಾರಣಕರ್ತರಾಗಿದ್ದೀರಿ ಎಂದು ಹೇಳಿದರು.
ಮನ್ಮುಲ್ ನಿರ್ದೇಶಕ ಡಾಲುರವಿ ಮಾತನಾಡಿದರು. ಇದೇ ವೇಳೆ ದೊಡ್ಡಕ್ಯಾತನಹಳ್ಳಿ, ಚಿಕ್ಕಕ್ಯಾತನಹಳ್ಳಿ, ಹುಬ್ಬನಹಳ್ಳಿಮ ಲೋಕನಹಳ್ಳಿ, ಹಡೇನಹಳ್ಳಿ, ಅಮಚಹಳ್ಳಿ, ಹೊಸಹಳ್ಳಿ, ಸಂತೇಬಾಚಹಳ್ಳಿ ಲಕ್ಷ್ಮಿಪುರ, ಸೋಮೇನಹಳ್ಳಿ, ಕೊತ್ತಮಾರನಹಳ್ಳಿ, ನಾಯಕನಹಳ್ಳಿ, ಕೊಡಗಹಳ್ಳಿ, ಬಿಕ್ಕಸಂದ್ರ, ಅಪ್ಪನಹಳ್ಳಿ, ಮಾವಿನಕಟ್ಟೆಕೊಪ್ಪಲು, ಮಾಳಗೂರು, ಹರಪನಹಳ್ಳಿ, ರಂಗನಾಥಪುರ, ಬೊಪ್ಪನಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಿಗೆ ಭೇಟಿನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಸಭೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು, ತಾಪಂ ಮಾಜಿ ಸದಸ್ಯ ಮೋಹನ್, ಸಂತೇಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ನಿವೃತ್ತ ಶಿಕ್ಷಕ ಕೃಷ್ಣೇಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.
ಮೌಢ್ಯ ತೊರೆದು ಚಾಮರಾಜನಗರ ಜಿಲ್ಲೆ ಉದ್ಘಾಟಿಸಿದ್ದ ಸಿದ್ದರಾಮಯ್ಯ
ಆದಿಚುಂಚನಗಿರಿಗೆ ಮಂಜು ಭೇಟಿ: ಕ್ಷೇತ್ರದ ನೂತನ ಶಾಸಕ ಎಚ್.ಟಿ.ಮಂಜು ದಂಪತಿಗಳು ಶುಕ್ರವಾರ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ತೆರಳಿ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿ ನಂತರ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಶಾಸಕ ಎಚ್.ಟಿ.ಮಂಜು ದಂಪತಿಗಳನ್ನು ಅಭಿನಂದಿಸಿ ಮಾತನಾಡಿದ ಶ್ರೀಗಳು, ಮತದಾರರು ನಂಬಿಕೆ ಇಟ್ಟು ನಿಮಗೆ ಆಶೀರ್ವಾದ ಮಾಡಿದ್ದಾರೆ. ಒಳ್ಳೆಯ ಕೆಲಸಗಳ ಮೂಲಕ ತಾಲೂಕಿನ ಜನರ ವಿಶ್ವಾಸಗಳಿಸಿ ಎಂದು ಹೇಳಿ ಆಶಿರ್ವದಿಸಿದರು.
ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ಪೂಜೆ: ಆದಿಚುಂಚನಗಿರಿ ಮಹಾಸಂಸ್ಥಾನಮಠದ ಕಾಲಭೈರವೇಶ್ವರಸ್ವಾಮಿ ಸನ್ನಿಧಿಯಲ್ಲಿ ಶುಕ್ರವಾರ ನಡೆದ ಅಮಾವಾಸ್ಯೆ ಪೂಜೆಯಲ್ಲಿ ವಿವಿಧ ಕ್ಷೇತ್ರಗಳ ಶಾಸಕರು ಪಾಲ್ಗೊಂಡು ಕ್ಷೇತ್ರಾಧಿದೇವತೆಗಳಿಗೆ ಪೂಜೆ ಸಲ್ಲಿಸಿದರು. ಬಳಿಕ, ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದರು. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಮಾಗಡಿ ಶಾಸಕ ಬಾಲಕೃಷ್ಣ, ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಹುಣಸೂರು ಶಾಸಕ ಹರೀಶ್ ಗೌಡ, ಭಟ್ಕಳ-ಹೊನ್ನಾವರ ಶಾಸಕ ಮಂಕಾಳ ಎಸ್.ವೈದ್ಯ, ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಮತ್ತು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅಮಾವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು.
ಸಮಸ್ಯೆಗಳ ಆಗರವಾಗಿರುವ ಮಳವಳ್ಳಿ ಪಟ್ಟಣ: ನೂತನ ಶಾಸಕ ನರೇಂದ್ರಸ್ವಾಮಿಗೆ ಸವಾಲು
ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಅಮಾವಾಸ್ಯೆ ಪೂಜಾ ಕಾರ್ಯದಲ್ಲಿ ಪಾಲ್ಗೊಂಡ ಶಾಸಕರು, ಕ್ಷೇತ್ರಪಾಲಕ ಕಾಲಭೈರವೇಶ್ವರ ಸ್ವಾಮಿ, ಮಾಳಮ್ಮದೇವಿ, ಆದಿಶಕ್ತಿ ಸ್ಥಂಬಾಬಿಕ, ಮಹಾಗಣಪತಿ, ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಎಲ್ಲಾ ಅಧಿದೇವತೆಗಳಿಗೆ ಪೂಜೆ ಸಲ್ಲಿಸಿದರು. ನಂತರ, ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಮಹಾಸಮಾಧಿಗೆ ಪೂಜೆ ನೆರವೇರಿಸಿದರು. ಕಾಲಭೈರವೇಶ್ವರನಿಗೆ ಅಮಾವಾಸ್ಯೆ ಪ್ರಯುಕ್ತ ಜರುಗುವ ಪಂಚಾಮೃತಾಭಿಷೇಕ, ಭಸ್ಮಾಭಿಷೇಕ, ಬಿಲ್ವಾಭಿಷೇಕ, ಪುಷ್ಪಾಭಿಷೇಕ, ಸುಗಂಧ ದ್ರವ್ಯಗಳೊಂದಿಗೆ ಶ್ರೀಗಳು ಪೂಜೆ ನರೆವೇರಿಸಿದರು. ದೇವಾಲಯದಲ್ಲಿ ಬೆಳ್ಳಿರಥೋತ್ಸವ ಕೂಡ ನಡೆಯಿತು.