Asianet Suvarna News Asianet Suvarna News

ನಮ್ಮದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್: ಸಿಎಂ ಸಿದ್ದರಾಮಯ್ಯ

ನಯಾಪೈಸ ನೀಡದ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತು ಎತ್ತಿದರೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವರು ಆದರೆ ನಮಗೆ ಸಾಥ್ ನೀಡುತ್ತಿಲ್ಲ. ಬಡವರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್ಸಿನದ್ದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Ours is real sab ka saath sab ka vikas Says CM Siddaramaiah
Author
First Published Dec 31, 2023, 10:36 PM IST

ಸಿಂಧನೂರು (ರಾಯಚೂರು) (ಡಿ.31): ಬರ ಪರಿಹಾರ ಬಿಡುಗಡೆ ಗೊಳಿಸುವಂತೆ ಮನವಿ ಮಾಡಿದರು ನಯಾಪೈಸ ನೀಡದ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತು ಎತ್ತಿದರೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವರು ಆದರೆ ನಮಗೆ ಸಾಥ್ ನೀಡುತ್ತಿಲ್ಲ. ಬಡವರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್ಸಿನದ್ದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರ ನಮ್ಮಿಂದ ತೆರಿಗೆ ಕಟ್ಟಿಸಿಕೊಂಡು ಬರ ಪರಿಹಾರ ನೀಡಲು ಮೀನಮೇಷ ಎಣಿಸುತ್ತಿದೆ. ಬಿಜೆಪಿ ಆಡಳಿತ ಸಮಯದಲ್ಲಿ ಹಣವನ್ನು ತಿಂದು ಹೋಗಿದ್ದಾರೆ. ನೀರಾವರಿ ಇಲಾಖೆಯಲ್ಲಿ 13 ಸಾವಿರ ಕೋಟಿ, ಲೋಕೋಪಯೋಗಿಯಲ್ಲಿ 9 ಸಾವಿರ ಕೋಟಿ, ಸಣ್ಣ ನೀರಾವರಿಯಲ್ಲಿ 4 ಸಾವಿರ ಕೋಟಿ, ಆರ್ಡಿಪಿಎಸ್ನಲ್ಲಿ 3 ಸಾವಿರ ಕೋಟಿಯನ್ನು ಬಾಕಿ ಉಳಿಸಿದ್ದು, ಇಂತಹ ಕಷ್ಟ ಕಾಲದಲ್ಲಿಯೂ ನಾವು ನಿಮ್ಮ ಜೊತೆಗಿದ್ದು ಕೆಲಸ ಮಾಡುತ್ತಿದ್ದೇವೆ ಎಂದರು.

ಎಲ್ಲ ಶಾಸಕರು ಕ್ರಿಯಾಶೀಲರಾಗಿದ್ದುಕೊಂಡು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚು ಒತ್ತನ್ನು ನೀಡಿದರೆ ಇಡೀ ರಾಜ್ಯವೂ ಸಹ ಅಭಿವೃದ್ಧಿಯಾಗುತ್ತದೆ. ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಸಜ್ಜನ ಮತ್ತು ಅಭಿವೃದ್ಧಿ ಬಗ್ಗೆ ಹೆಚ್ಚು ಶ್ರಮಿಸುವ ಶಾಸಕರು. ಇವರಂತೆಯೇ ಎಲ್ಲಾ ಶಾಸಕರು ಶ್ರಮಿಸಿದರೆ ಇಡಿ ರಾಜ್ಯ ಮತ್ತು ಹೈದರಾಬಾದ್ ಕರ್ನಾಟಕ ಹೆಚ್ಚು ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ಸರ್ಕಾರಿ ಉಚಿತ ಡೇ ಕೇರ್ ಸೆಂಟರ್: ದುಡಿಯುವ ಮಹಿಳೆಯರ ಮೂರು ವರ್ಷದವರೆಗಿನ ಮಕ್ಕಳನ್ನು ನೋಡಿಕೊಳ್ಳಲು ದೇಶದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಉಚಿತ ಸರ್ಕಾರಿ ಡೇ ಕೇರ್ ಸೆಂಟರ್’ಗಳನ್ನು ಆರಂಭಿಸಲಾಗಿದ್ದು, ‘ಕೂಸಿನ ಮನೆ’ ಹೆಸರಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇದಾಗಿದ್ದು, ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆಯುವ ನಿರೀಕ್ಷೆ ಇದೆ. ಪ್ರಾರಂಭದಲ್ಲಿ ನರೇಗಾ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳಿಗೆ ಮಾತ್ರ ಈ ಕೂಸಿನ ಮನೆಯ ಸೌಲಭ್ಯ ದೊರೆಯಲಿದೆ. ಯೋಜನೆಯ ಯಶಸ್ಸನ್ನು ನೋಡಿಕೊಂಡು ಸರ್ಕಾರ ಇದನ್ನು ಗಾರ್ಮೆಂಟ್ಸ್ ಸೇರಿದಂತೆ ಇತರೆ ಕಾರ್ಮಿಕ ವರ್ಗದ ಮಹಿಳೆಯರಿಗೂ ವಿಸ್ತರಿಸಿದರೆ ಅಚ್ಚರಿಯಿಲ್ಲ.

ಸಚಿವ ಮಧು ಭ್ರಷ್ಟಾಚಾರ ಶೀಘ್ರವೇ ತೆರೆದಿಡುವೆ: ಪ್ರಣವಾನಂದ ಸ್ವಾಮೀಜಿ

ಏನಿದು ಕೂಸಿನ ಮನೆ?: ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳ ಪೋಷಣೆಗಾಗಿ ಕೂಸಿನ ಮನೆ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಕಾರ್ಮಿಕ ಮಹಿಳೆಯು ಕೆಲಸದ ವೇಳೆಯಲ್ಲಿ ತನ್ನ ಮಗುವನ್ನು ಕೂಸಿನ ಮನೆಯಲ್ಲಿ ಬಿಟ್ಟು ನೆಮ್ಮದಿಯಿಂದ ಕೆಲಸ ಮಾಡಲು ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ. ತುಮಕೂರು ತಾಲ್ಲೂಕು ದೇವಲಾಪುರ ಗ್ರಾಮ ಪಂಚಾಯತಿಯ ಕಾಡುಸಿದ್ದಯ್ಯನಪಾಳ್ಯ ಗ್ರಾಮದಲ್ಲಿ ದೇಶದ ಹಾಗೂ ರಾಜ್ಯದ ಮೊದಲ ಸರ್ಕಾರಿ ಡೇ ಕೇರ್ ಸೆಂಟರ್ ಎಂದು ಹೇಳಬಹುದಾದ ‘ಕೂಸಿನ ಮನೆ’ಯನ್ನು ಶನಿವಾರ ಗೃಹ ಸಚಿವ ಡಾ.ಜಿ ಪರಮೇಶ್ವರ್ ಉದ್ಘಾಟಿಸಿದ್ದಾರೆ.

Follow Us:
Download App:
  • android
  • ios