ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಬಾಲಿವುಡ್ ಸೆಲೆಬ್ರಿಟಿಗಳು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ. ಈ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆಯಾಗುತ್ತಿದೆ.
ಜನತಾದಳ, ವಿಶೇಷವಾಗಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಕಿಡಿಕಾರುತ್ತ ಬಂದಿರುವ ತುಮಕೂರಿನ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಮತ್ತೆ ಕೆಂಡಾಮಂಡಲವಾಗಿದ್ದಾರೆ. ತುಮಕೂರು ಅಂದ್ರೆ ರೆಡ್ ಲೈಟ್ ಏರಿಯಾನಾ? ಎಂದು ಪ್ರಶ್ನಿಸಿದ್ದಾರೆ. ಏನು? ಯಾಕೆ? ಅವರ ಬಾಯಿಯಿಂದಲೇ ಕೇಳಿ...
ಮೈತ್ರಿಕೂಟಕ್ಕೆ ಸೆಡ್ಡುಹೊಡೆದು ಸಂಸದ ಮುದ್ದ ಹನುಮೇಗೌಡರು ತುಮಕೂರು ಲೋಕಸಭಾ ಕಣಕ್ಕೆ ಧುಮುಕಿರುವುದು ುಭಯಪಕ್ಷದ ನಾಯಕರಿಗೆ ತಲೆನೋವು ತಂದಿದೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಮುದ್ದುಹನುಮೇಗೌಡರನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದಾರೆ. ‘ತುಮಕೂರು ಸಂಧಾನ’ ಎಲ್ಲಿಯವರೆಗೆ ಬಂದಿದೆ? ಈ ಸ್ಟೋರಿ ನೋಡಿ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ವೇಳೆ ವಿವಿಧ ಪಕ್ಷಗಳಲ್ಲಿ ಜಿದ್ದಾ ಜಿದ್ದಿ ಜೋರಾಗಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಖಚಿತ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿದ್ದಾರೆ.
ನಟ ದರ್ಶನ್, ಯಶ್ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ‘ಜೋಡೆತ್ತು’ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಎಚ್ ಡಿಕೆ ಮತ್ತು ಡಿಕೆಶಿ ಎಂಬ ಜೋಡೆತ್ತುಗಳಿಗೆ ಹೊಸ ವ್ಯಾಖ್ಯಾನ ನೀಡುವ ಮೂಲಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಪೇದೆಯೋರ್ವರನ್ನು ಅಮಾನತುಗೊಳಿಸಿ ಸಚಿವ ಸಾ.ರಾ ಮಹೇಶ್ ದರ್ಪ ಮೆರೆದಿದ್ದಾರೆ.
ಶಿಂಧೆ ವಿರುದ್ಧ ಬಿಜೆಪಿಯಿಂದ ಲಿಂಗಾಯತ ಸ್ವಾಮೀಜಿ ಕಣಕ್ಕೆ| ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಗ್ ಫೈಟ್| 3.5 ಲಕ್ಷ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟ ಬಿಜೆಪಿ| ಅಂಬೇಡ್ಕರ್ ಮೊಮ್ಮಗ ಕೂಡ ಇಲ್ಲಿ ಸ್ಪರ್ಧಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಲಾಗಿದೆ. ಯಾವಾಗಲೂ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗುವ ಅನಂತ್ ಕುಮಾರ್ ಗೆ ಟಿಕೆಟ್ ಕೊಡುವುದು ಬೇಡ ಎಂದು ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ಎದ್ದಿತ್ತು. ಆದರೆ ಹೈಕಮಾಂಡ್ ಮಾತ್ರ ಇದಕ್ಕೆ ಸೊಪ್ಪು ಹಾಕಿಲ್ಲ.
ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ರಾಜ್ಯಗಳಲ್ಲಿಯೂ ಕೂಡ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೀಗ 2 ಕ್ಷೇತ್ರಗಳಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ ಅನಂತ್‌ಕುಮಾರ್ ಬದಲು ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದ್ದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ. ತೇಜಸ್ವಿನಿಗೆ ಟಿಕೆಟ್ ಪಕ್ಕಾ ಎಂದು ಕೊನೆವರೆಗೂ ಹೇಳಲಾಗಿದ್ದು ಅಂತಿಮ ಕ್ಷಣದಲ್ಲಿ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದ್ದು ಯಾಕೆ ಎಂಬ ಕುತೂಹಲಗಳಿಗೆ ಇಲ್ಲಿದೆ ಉತ್ತರ.