ದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ನ ನಾಯಕರನ್ನು ಭೇಟಿಯಾಗಿದ್ದೇನೆ. ಎಲ್ಲವೂ ಒಳ್ಳೆಯದಾಗಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಕಾಲ್ತುಳಿತಕ್ಕೆ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹಾಗೂ ಪೊಲೀಸರು ಹೊಣೆ ಎಂದು ಉಲ್ಲೇಖಿಸಿ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೀಡಿರುವ ವರದಿ ಸರಿಯಿಲ್ಲ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜು.19 ರಂದು ಸಿದ್ದು ತವರು, ಮೈಸೂರಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲಾಗುತ್ತಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ವರಿಷ್ಠ ಸುರ್ಜೇವಾಲಾ ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಹೀಗಾಗಿ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ತಾಲೂಕಿನ ಸತ್ತಗಿಹಳ್ಳಿ, ಹಿರೆಮೊರ ಹಾಗೂ ಆಯ್ದ ಭಾಗಗಳಲ್ಲಿ ನೀರಾವರಿ ನಿಗಮದಿಂದ ₹5 ಕೋಟಿ ವೆಚ್ಚದ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಗಳ ಜಂಗಲ್ ಕಟಾವು ಹಾಗೂ ಲೈನಿಂಗ್ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಅಭಿವೃದ್ಧಿಯಾಗಲಿ ಅಥವಾ ಸಮಸ್ಯೆಗೆ ಪರಿಹಾರ ಮಾಡಲು ಇವರು ಪ್ರಯತ್ನ ಮಾಡುತ್ತಿಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸತ್ತ ಸರ್ಕಾರವಾಗಿದ್ದು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯು 2027ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನದ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದಾರೆ. ಹಾಸನ ಕ್ಷೇತ್ರದ ಮೇಲಿನ ತಮ್ಮ ಭಾವನಾತ್ಮಕ ಸಂಬಂಧವನ್ನು ವಿವರಿಸಿದ್ದಾರೆ.