ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಇದಕ್ಕೆ ಬೇಕಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ನೀಡಿ ದೆ. ಈ ಕೆಲಸವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಿಎಂ ಸಹ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದಾರೆ. ಹೀಗಿದ್ದರೂ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ
ಮೈಸೂರು(ಜ.29): ಬೆಂಗಳೂರು ಅರಮನೆ ಮೈದಾನದ ಬಳಕೆ ಮತ್ತು ನಿಯಂತ್ರಣಕ್ಕಾಗಿ ಅಧಿನಿಯಮ ರೂಪಿಸಿದ್ದು ಸಿದ್ದರಾಮಯ್ಯ ಸರ್ಕಾರವಲ್ಲ. ಎಚ್.ಡಿ. ದೇವೇಗೌಡ ಅವರ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.
ಎಚ್.ಡಿ. ದೇವೇಗೌಡ ಮುಖ್ಯಮಂತ್ರಿ ಆಗಿದ್ದಾಗ 1996 ರಲ್ಲಿ ಜಾರಿಗೆ ಬಂದಿದೆ. ಇದನ್ನು ಪ್ರಶ್ನಿಸಿ ಜಯಚಾಮರಾಜ ಒಡೆ ಯರ್ ಅವರ 5 ಜನ ವಾರಸುದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದರು. ಸರ್ಕಾರ ಕ್ರಮವನ್ನು ಹೈಕೋರ್ಟ್ ಸಹ ಎತ್ತಿ ಹಿಡಿದಿತ್ತು. ಬಳಿಕ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದು ಕೊಳ್ಳಲು ಸೂಚಿಸಿದೆ ಎಂದು ಅವರು ಭಾನು ವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಡಾ ಹಗರಣ: ಇ.ಡಿ ವಿರುದ್ಧ ರಾಷ್ಟ್ರಪತಿಗಳಿಗೆ ದೂರು, ಎಂ.ಲಕ್ಷ್ಮಣ
2013 ರಿಂದ 2018, ಈಗಿನ ಒಂದು ಮುಕ್ಕಾಲು ವರ್ಷ ಸಿಎಂ ಆಗಿ ಅಧಿಕಾರದ ಲ್ಲಿರುವ ಸಿದ್ದರಾಮಯ್ಯ ಅವರು, ಅರ ಮನೆ, ಅದರ ಆಸ್ತಿ, ರಾಜವಂಸ್ಥರ ಕುರಿತು ಒಂದೇ ಒಂದು ತೀರ್ಮಾನ ತೆಗೆದು ಕೊಂಡಿಲ್ಲ. ಆದಾಗ್ಯೂ, ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಹಾಗೆಯೇ, ನಮ್ಮನ್ನು ಗುರಿಯಾಗಿಸಿಕೊಂಡು ತೊಂದರೆ ನೀಡಲಾಗುತ್ತಿದೆ ಎಂಬ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿಕೆ ಆಧಾರ ರಹಿತ ಎಂದರು.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾ ಗಲೆಲ್ಲ ಅರಮನೆಗೆ ತೊಂದರೆ ನೀಡಲಾ ಗುತ್ತಿದೆ ಎಂಬ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ 2, 1996, 2012, 2021, 202250 ಕಾಂಗ್ರೆಸ್ ಸರ್ಕಾರವೇ ಇರಲಿಲ್ಲ. ಯಾವ ರೀತಿ ತೊಂದರೆ ಕೊಡಲಾಗಿದೆ ಎಂಬುದನ್ನ ತಿಳಿಸಬೇಕು ಎಂದು ಆಗ್ರಹಿಸಿದರು. 25.2. ಕುಮಾರ ಸ್ವಾಮಿ ಸುಳ್ಳು ಹೇಳುವ ಮೂಲಕ ಸಿದ್ದರಾಮಯ್ಯ ಅವರನ್ನು ಖಳನಾಯಕನ ರೀತಿ ಬಿಂಬಿಸಲು ಹುನ್ನಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದರು.
ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಇದಕ್ಕೆ ಬೇಕಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ನೀಡಿ ದೆ. ಈ ಕೆಲಸವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಿಎಂ ಸಹ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದಾರೆ. ಹೀಗಿದ್ದರೂ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
