Asianet Suvarna News Asianet Suvarna News

ಶೆಟ್ಟರ್ ಬಿಟ್ಟ ಪರಿಷತ್ ಸ್ಥಾನ ನಿಷ್ಠಾವಂತರಿಗೆ: ಡಿ.ಕೆ.ಶಿವಕುಮಾರ್

ಶೆಟ್ಟರ್‌ ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

Parishat Seat left by Jagadish Shettar is for the faithful Says DCM DK Shivakumar grg
Author
First Published Jan 27, 2024, 6:51 AM IST

ಬೆಂಗಳೂರು(ಜ.27):  ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಯಾರೇ ಹೋದರೂ ನಮ್ಮ ಪಕ್ಷಕ್ಕೆ ನಷ್ಟವಾಗುವುದಿಲ್ಲ. ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಪರಿಷತ್ ಸದಸ್ಯ ಸ್ಥಾನವನ್ನು ಕಾಂಗ್ರೆಸ್‌ ನಿಷ್ಠಾವಂತ ಕಾರ್ಯಕರ್ತನಿಗೆ ನೀಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ್ ಅವರು ಬಿಜೆಪಿಗೆ ಹೋಗಿದ್ದು ಒಳ್ಳೆಯದಾಯಿತು ಎಂದು ಬೆಳಗಾವಿ ಹಾಗೂ ಇತರೆ ಭಾಗದ ನಾಯಕರು, ಕಾರ್ಯಕರ್ತರು ಹೇಳಿದ್ದಾರೆ. ಹೀಗಾಗಿ ನಮ್ಮ ಪಕ್ಷಕ್ಕೆ ಯಾವುದೇ ನಷ್ಟ ಇಲ್ಲ ಎಂದು ಹೇಳಿದರು. 

ಇಂದು ಬಂದು ನಾಳೆ ವಾಪಸು ಹೋಗಬಾರದು: ಖರ್ಗೆ ಚಾಟಿ

ಶೆಟ್ಟರ್‌ ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು ಎಂದರು. ಅವರಿಗೆ ವಿಧಾನಸಭೆ ಚುನಾವಣೆ ಟೆಕೆಟ್ ನೀಡಿದ್ದೆವು. 35 ಸಾವಿರಮತಗಳ ಅಂತರದಲ್ಲಿ ಸೋತಿದ್ದರು. ಆದರೂ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಆದರೂ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios