Asianet Suvarna News Asianet Suvarna News

ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ; ಆರು ಮಸೂದೆಗಳ ಮಂಡನೆಗೆ ಸರ್ಕಾರದ ನಿರ್ಧಾರ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಜು.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ. ಫೆಬ್ರವರಿ ತಿಂಗಳಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಅನ್ನು ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದರು.

Parliament s Monsoon Session Begins Monday Centre to introduce six new bills  mrq
Author
First Published Jul 21, 2024, 7:23 AM IST | Last Updated Jul 21, 2024, 7:23 AM IST

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜು.22ರಿಂದ ಆರಂಭವಾಗಲಿದ್ದು, ಆ.12ರ ವರೆಗೂ ನಡೆಯಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಜು.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಸೋಮವಾರ ನಿರ್ಮಲಾ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಒಟ್ಟು ಆರು ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. 1934ರ ಏರ್‌ಕ್ರಾಫ್ಟ್‌ ಕಾಯ್ದೆಯನ್ನು ರದ್ದುಪಡಿಸಿ ಹೊಸ ಕಾಯ್ದೆ ತರಲು ಭಾರತೀಯ ವಾಯುಯಾನ ವಿಧೇಯಕ ಮಂಡಿಸಲಾಗುತ್ತದೆ. ಹಾಗೆಯೇ, 2024ನೇ ಸಾಲಿನ ಹಣಕಾಸು ಮಸೂದೆ, ಸ್ವಾತಂತ್ರ್ಯ ಪೂರ್ವಕ್ಕಿಂತ ಹಳೆಯ ಕಾಯ್ದೆಯನ್ನು ಬದಲಿಸಲು ಬಾಯ್ಲರ್ಸ್‌ ಮಸೂದೆ, ಕಾಫಿ ಮಸೂದೆ, ರಬ್ಬರ್‌ ಮಸೂದೆ ಮತ್ತು ವಿಪತ್ತು ನಿರ್ವಹಣೆ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆಯಲು ನಿರ್ಧರಿಸಲಾಗಿದೆ.

ಈ ವರ್ಷದ ಫೆಬ್ರವರಿ ತಿಂಗಳಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಅನ್ನು ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದರು. ಬಳಿಕ ಲೋಕಸಭೆಗೆ ಚುನಾವಣೆ ನಡೆದಿತ್ತು. ಈಗ ಹೊಸ ಸರ್ಕಾರ ಬಂದಿರುವುದರಿಂದ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ. ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಒಡಿಶಾದಲ್ಲಿ ಬ್ರಿಟನ್‌ ರೀತಿ ‘ವಿಪಕ್ಷದ ಸಚಿವ ಸಂಪುಟ’! ಏನಿದು ಶಾಡೋ ಕ್ಯಾಬಿನೆಟ್?

ಪತ್ರಿಕಾ ಸ್ವಾತಂತ್ರ್ಯ ಕುರಿತು ದನಿ ಎತ್ತುವಂತೆ ರಾಹುಲ್‌ಗೆ ಸಂಪಾದಕರ ಗಿಲ್ಡ್‌ ಮನವಿ

ಪತ್ರಿಕಾ ಸ್ವಾತಂತ್ರ್ಯದ ಮೇಲೆ ಕೇಂದ್ರ ಸರ್ಕಾರ ದಬ್ಬಾಳಿಕೆ ಮಾಡುತ್ತಿದ್ದು, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ, ಸರ್ಕಾರ ಗಮನ ಹರಿಸುವಂತೆ ಮಾಡಬೇಕು ಎಂದು ಸಂಪಾದಕರ ಒಕ್ಕೂಟ (ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ) ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದೆ.

ಪತ್ರದಲ್ಲಿ, ‘ಇತ್ತೀಚಿನ ದಿನಗಳಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಕೇಂದ್ರ ಸರ್ಕಾರದ ಒತ್ತಡ ಹೆಚ್ಚಾಗುತ್ತಿದೆ. ಇದು ಮುಂದುವರೆದರೆ, ಭಾರತದಂತಹ ಪ್ರಜಾಪ್ರಭುತ್ವ ದೇಶಕ್ಕೆ ಆಪತ್ತು. ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕು ಎಂದು ಮನವಿ ಮಾಡಿದೆ. ಜೊತೆಗೆ ಪತ್ರಿಕೆ ಹಾಗೂ ಮಾಧ್ಯಮಗಳ ಬಗೆಗಿನ ಕಾನೂನುಗಳಲ್ಲಿನ ತಿದ್ದುಪಡಿಯನ್ನು ಸರಿಮಾಡುವಂತೆ ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕೆಂದು ಅದು ಮನವಿ ಮಾಡಿದೆ.

ವಿದೇಶಾಂಗ ಕಾರ್ಯದರ್ಶಿ ನೇಮಿಸಿ ಕೇಂದ್ರಕ್ಕೆ ಕೇರಳ ಸರ್ಕಾರ ಸೆಡ್ಡು! ಸಂವಿಧಾನ ವಿರೋಧಿ ಎಂದ ಬಿಜೆಪಿ

Latest Videos
Follow Us:
Download App:
  • android
  • ios