ಪಕ್ಷ ಸಂಘಟನೆ: ಗುರುವಾರ ರಾಜ್ಯಕ್ಕೆ ಅಮಿತ್ ಶಾ ಆಗಮನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಜ್ಯಕ್ಕೆ ಬಂದಿಳಿಯುತ್ತಿದ್ದು, ಮೂರು ದಿನಗಳ ಕಾಲ ದಕ್ಷಿಣ ಕರ್ನಾಟಕದಲ್ಲಿ ಪಕ್ಷವನ್ನು ಸಂಘಟಿಸುವ  ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ಬತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

party organization issue  Amit Shah arrival in the state on Thursday saysCN Ashwath Narayan rav

ಬೆಳಗಾವಿ (ಡಿ.28): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಜ್ಯಕ್ಕೆ ಬಂದಿಳಿಯುತ್ತಿದ್ದು, ಮೂರು ದಿನಗಳ ಕಾಲ ದಕ್ಷಿಣ ಕರ್ನಾಟಕದಲ್ಲಿ ಪಕ್ಷವನ್ನು ಸಂಘಟಿಸುವ  ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ಬತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ಇಲ್ಲಿನ ಸುವರ್ಣ ಸೌಧ(Suvarnasoudha)ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,  "ಮಂಡ್ಯದಲ್ಲಿ ಶುಕ್ರವಾರ ನಡೆಯಲಿರುವ ಜನಸಂಕಲ್ಪ ಯಾತ್ರೆ(Janasankalpa Yatra)ಯಲ್ಲಿ ಶಾ(Amit shah) ಅವರು  ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದಿಂದ ಶಾಸಕರು ಆಯ್ಕೆಯಾಗಬೇಕು ಎಂಬುದು ಪಕ್ಷದ ವರಿಷ್ಠರ ಗುರಿಯಾಗಿದೆ" ಎಂದರು. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಗ್ಗೆ  ಯಾವ ಚರ್ಚೆಯೂ ನಡೆದಿಲ್ಲ. ಇದು ಚುನಾವಣಾ ಆಯೋಗ(election commission)ಕ್ಕೆ ಸಂಬಂಧಪಟ್ಟ ವಿಷಯ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಎರಡು ದಿನ ಅಮಿತ್ ಶಾ ಪ್ರವಾಸ: ಬಿಜೆಪಿ ನಾಯಕರ ಜೊತೆ ಹೈವೋಲ್ಟೇಜ್ ಮೀಟಿಂಗ್?

 ದಕ್ಷಿಣದ ಅಯೋಧ್ಯೆಯಾಗಿ ರಾಮದೇವರ ಬೆಟ್ಟ

ರಾಮನಗರದ ರಾಮದೇವರ ಬೆಟ್ಟ(Ramadevara betta)ದಲ್ಲಿ ಅಯೋಧ್ಯೆಯ ಮಾದರಿಯಲ್ಲಿ ರಾಮಮಂದಿರ ನಿರ್ಮಿಸುವ ಆಲೋಚನೆ ಇದೆ. ಮುಂಬರುವ ರಾಜ್ಯ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಬೀಳಬಹುದು ಎಂದು ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

ರಾಮದೇವರ ಬೆಟ್ಟವನ್ನು  ಅಯೋಧ್ಯೆಯಂತೆ ಅಭಿವೃದ್ಧಿ ಪಡಿಸಬೇಕೆಂಬುದು ಅಲ್ಲಿನ ಜನರ ಭಾವನೆಯಾಗಿದೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.ರಾಮದೇವರ ಬೆಟ್ಟ ಜೀರ್ಣೋದ್ಧಾರದಲ್ಲಿ  ಪಾಲ್ಗೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(yogi adityanath) ಅವರನ್ನು ಆಹ್ವಾನಿಸಲಾಗಿದೆ ಎಂದು ಅವರು ಹೇಳಿದರು.

ಮಂಡ್ಯ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಜೆಡಿಎಸ್, ಕಾಂಗ್ರೆಸ್ ಕಾರಣ

ಒಂದು ಕಾಲದಲ್ಲಿ ಅಭಿವೃದ್ಧಿಯಲ್ಲಿ ಮುಂದಿದ್ದ ಮಂಡ್ಯ ಜಿಲ್ಲೆಯು ಹಿಂದೆ ಬೀಳುವುದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರಣವಾಗಿದೆ. ಆ ಎರಡೂ ಪಕ್ಷಗಳನ್ನು ಮೂಲೋತ್ಪಾಟನೆ ಮಾಡುವುದು ಅನಿವಾರ್ಯವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು. ಮೈಷುಗರ್ ಕಾರ್ಖಾನೆ(Mysugar factory)ಯನ್ನು ಈ ಎರಡೂ ಪಕ್ಷಗಳ ಸರ್ಕಾರಗಳು ಸರಿಯಾಗಿ ನಿರ್ವಹಣೆ ಮಾಡದೆ ಇದ್ದುದರಿಂದ ಇಂದು ರೈತರು(Farmers) ಸಮಸ್ಯೆಗೆ ಸಿಲುಕಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯ ಅಗತ್ಯಗಳನ್ನು ಮನಗಂಡು ನಮ್ಮ ಸರ್ಕಾರವು ಮೂಲ ಸೌಕರ್ಯ ಒದಗಿಸುತ್ತಿದೆ. ಆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಸರ್ಕಾರವು ಒತ್ತು ನೀಡಿದೆ. ಜೆಡಿಎಸ್ ಪಕ್ಷವನ್ನು ನಂಬಿಕೊಂಡಿದ್ದರೆ ಅಭಿವೃದ್ಧಿಯಲ್ಲಿ ಹಿಂದೆ ಬೀಳಬೇಕಾಗುತ್ತದೆ ಎಂಬುದು ಅಲ್ಲಿನ ಜನರಿಗೆ ಮನವರಿಕೆಯಾಗಿದೆ.  ಜೆಡಿಎಸ್ ಕೇವಲ ರಾಜಕೀಯ ಮಾಡುವುದಕ್ಕೋಸ್ಕರ ರಾಜಕಾರಣದಲ್ಲಿ ಉಳಿದುಕೊಂಡಿದೆ ಎಂದು ಅವರು ವ್ಯಂಗ್ಯವಾಡಿದರು.

ಬಿಜೆಪಿಯು ಎಲ್ಲಾ ವರ್ಗಗಳನ್ನು ಸಮರ್ಥವಾಗಿ ಪ್ರತಿನಿಧಿಸುವ ಪಕ್ಷವಾಗಿದೆ. ಅಂಬೇಡ್ಕರ್, ಕೆಂಪೇಗೌಡ ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು ಸೇರಿದಂತೆ ಎಲ್ಲಾ ಮಹಾಪುರುಷರನ್ನು  ಗೌರವದಿಂದ ಸ್ಮರಿಸುವ ಕಾರ್ಯವನ್ನು ನಾವು ಮಾಡುತ್ತಿದ್ದೇವೆ. ಹಾಗೆಯೇ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಎಂಬ ಹೆಸರುಗಳನ್ನು ಘೋಷಣೆ ಮಾಡಿದ ಶ್ರೇಯಸ್ಸು ನಮ್ಮ ಪಕ್ಷದ್ದಾಗಿದೆ ಎಂದರು.

ಡಿ.30ಕ್ಕೆ ಮಂಡ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರ್ಯಾಲಿ

ಬಿಜೆಪಿ ಯಾವುದೇ ಕುಟುಂಬದ ಪಕ್ಷವಲ್ಲ. ಇದು ಜನರ ಪಕ್ಷವಾಗಿದೆ. ನಮ್ಮ ಪಕ್ಷದ ನಾಯಕರು ಹೆಚ್ಚಿನ ಸಮನ್ವತೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಕೋವಿಡ್ ನಿರ್ವಹಣೆ ನಡೆಯುತ್ತಿದೆ. ಇದಕ್ಕೆ ಸಂಪುಟ ಸಹೋದ್ಯೋಗಿಗಳು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

Latest Videos
Follow Us:
Download App:
  • android
  • ios