Asianet Suvarna News Asianet Suvarna News

ಬಿಜೆಪಿ ಸದಸ್ಯತ್ವ ಅಭಿಯಾನದಿಂದ ಪಕ್ಷ ಮತ್ತಷ್ಟು ಬಲಗೊಳ್ಳಬೇಕು: ಸಂಸದ ಯದುವೀರ ಒಡೆಯರ್

ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಳೆದ ಬಾರಿಗಿಂತ ಹೆಚ್ಚಾಗಿ, ಪಕ್ಷ ಮತ್ತಷ್ಟು ಬಲಗೊಳ್ಳಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. 

Party should be further strengthened by BJP membership campaign says mp yaduveer wadiyar gvd
Author
First Published Aug 28, 2024, 5:14 AM IST | Last Updated Aug 28, 2024, 5:23 AM IST

ಮೈಸೂರು (ಆ.28): ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಳೆದ ಬಾರಿಗಿಂತ ಹೆಚ್ಚಾಗಿ, ಪಕ್ಷ ಮತ್ತಷ್ಟು ಬಲಗೊಳ್ಳಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಘಟಕ ಆಯೋಜಿಸಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದಿಂದ ರಾಷ್ಟ್ರವ್ಯಾಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಸದಸ್ಯರನ್ನು ನೊಂದಾಯಿಸಬೇಕು. ಆ ಮೂಲಕ ಮತ್ತಷ್ಟು ಪಕ್ಷ ಬಲಗೊಳ್ಳಬೇಕು ಎಂದರು.

ದೇಶದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ದೇಶ ಮತ್ತಷ್ಟು ಬಲಿಷ್ಠ ಭಾರತವಾಗಲಿದೆ. ಈ ವೇಳೆ ಸದಸ್ಯತ್ವ ಸಂಖ್ಯೆ ಕಳೆದ ಬಾರಿಗಿಂತ ಹೆಚ್ಚಾಗಬೇಕು. ಆ ಮೂಲಕ ಜಿಲ್ಲೆಯಲ್ಲಿ ನಮ್ಮ ಪಕ್ಷ ಮತ್ತಷ್ಟು ಗಟ್ಟಿಯಾಗಬೇಕು ಎಂದು ಅವರು ತಿಳಿಸಿದರು. ನರೇಂದ್ರಮೋದಿ ಅವರ ಆಡಳಿತದಲ್ಲಿ ಭಾರತ ಇಡೀ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗುತ್ತಿದೆ. ಆದ್ದರಿಂದ ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಸರಿಯಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರತಿ ಕ್ಷೇತ್ರವಾರು ನಾನೇ ಖುದ್ದಾಗಿ ಭೇಟಿ ನೀಡಿ ಗಮನಿಸುತ್ತೇನೆ ಎಂದರು.

ಚಾಮುಂಡಿಬೆಟ್ಟ ದೇವಸ್ಥಾನದ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು: ಸಂಸದ ಯದುವೀರ್ ಒಡೆಯರ್

ಬಿಜೆಪಿ ಉಪಾಧ್ಯಕ್ಷ ಎಂ. ರಾಜೇಂದ್ರ ಮಾತನಾಡಿ, ಇಡೀ ರಾಷ್ಟ್ರದಲ್ಲಿ 12 ಕೋಟಿ ಸದಸ್ಯತ್ವ ಮಾಡುವುದರೊಂದಿಗೆ ದೇಶದ ಮೂಲೆ, ಮೂಲೆಯಲ್ಲೂ ಕಾರ್ಯಕರ್ತರೊಟ್ಟಿಗೆ ಪಕ್ಷ ಸಂಘಟಿಸುವತ್ತ ಸದಸ್ಯತ್ವ ಅಭಿಯಾನ ಸಹಕಾರಿಯಾಗಿತ್ತು. ಈ ಬಾರಿ ಇನ್ನೂ ಹೆಚ್ಚಿನ ಸದಸ್ಯತ್ವ ಅಭಿಯಾನ ನಡೆಸುವ ನಿಟ್ಟಿನಲ್ಲಿ ನಾವೆಲ್ಲರೂ ಸಂಘಟಿತರಾಗೋಣ ಎಂದು ಅವರು ಹೇಳಿದರು.

ಸದಸ್ಯತ್ವ ಅಭಿಯಾನದ ಸದಸ್ಯ ರಾಬಿನ್ ದೇವಯ್ಯ ಮಾತನಾಡಿ, ಜಿಲ್ಲಾ ವಿಭಾಗದ ಪ್ರತೀ ಬೂತ್ ನಲ್ಲಿಯೂ ಸದಸ್ಯರು ಟೋಲ್ ಫ್ರೀ ನಂಬರ್ 88000 02024 ಗೆ ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ಹೊಂದಬೇಕು. ಪ್ರತೀ ಬೂತ್ ನಿಂದ ಕನಿಷ್ಠ 300 ಸದಸ್ಯರು ಮಿಸ್ ಕಾಲ್ ಕೊಡುವುದರ ಮೂಲಕ ನೋಂದಾಯಿತರಾಗಬೇಕು. ಇದರ ಜೊತೆ ಗ್ರಾಮೀಣ ಭಾಗಗಳಲ್ಲಿ ಯುವಕರನ್ನು ಒಟ್ಟುಗೂಡಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ಈ ಕಾರ್ಯಾಗಾರ ಯಶಸ್ವಿ ಆಗುವವರೆಗೂ ನಿದ್ರಿಸುವುದಿಲ್ಲ. ಜಿಲ್ಲೆಯಲ್ಲಿ 1778 ಬೂತ್ಗಳಿದ್ದು, ಎಲ್ಲಾ ಬೂತ್ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಎಲ್ಲರೂ ಕೂಡ ಈ ಅಭಿಯಾನದಲ್ಲಿ ಭಾಗವಹಿಸಬೇಕು. ಸೆ. 2ರಂದು ಪ್ರಧಾನಿ ನರೇಂದ್ರಮೋದಿ ಅವರು ದೆಹಲಿಯಲ್ಲಿ ಸದಸ್ಯತ್ವ ಅಭಿಯಾನ ಉದ್ಘಾಟನೆ ಮಾಡುವುದಾಗಿ ಅವರು ಹೇಳಿದರು. ಈ ಹಿಂದೆ ಜಿಲ್ಲೆಯಿಂದ 2,15,000 ಲಕ್ಷ ಸದಸ್ಯತ್ವ ಮಾಡಿದ್ದು, ಅದರಲ್ಲಿ 2,400 ಮಂದಿ ಸಕ್ರಿಯ ಕಾರ್ಯಕರ್ತರಿದ್ದು, ಈ ಬಾರಿ ಐದು ಲಕ್ಷ ಸದಸ್ಯತ್ವ ನೋಂದಾಯಿಸುವ ಗುರಿ ಇದೆ. ಇದರಲ್ಲಿ ಕನಿಷ್ಠ ಐದು ಸಾವಿರ ಸಕ್ರಿಯ ಸದಸ್ಯರನ್ನು ಮಾಡುವ ನಿರೀಕ್ಷೆ ಹಾಗೂ ಗುರಿ ಹೊಂದಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಪುರಸ್ಕೃತ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಸಂಸದ ಯದುವೀರ್ ಒಡೆಯರ್ ಅಧಿಕಾರಿಗಳಿಗೆ ಸೂಚನೆ!

ಸದಸ್ಯತ್ವ ಅಭಿಯಾನದ ಬಗ್ಗೆ ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಪ್ರತಿ ಜಿಲ್ಲೆ, ತಾಲೂಕು ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು, ಅವರ ಮಾರ್ಗದರ್ಶನದಂತೆ ನಾವೆಲ್ಲರೂ ಪ್ರತೀ ಬೂತ್ ನಲ್ಲಿ ಕಾರ್ಯಕರ್ತ ಮಿತ್ರರೊಡನೆ ಕೆಲಸ ಮಾಡುತ್ತಿದ್ದೇವೆ ಎಂದರು. ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಮಡವಾಡಿ ಮಹೇಶ್, ಕಿರಣ್ ಜಯರಾಮೇಗೌಡ, ಬಾಲಕೃಷ್ಣ, ಪಾಪಣ್ಣ ಇದ್ದರು.

Latest Videos
Follow Us:
Download App:
  • android
  • ios