ಅಹ್ಮದ್‌ ಪಟೇಲ್‌ ಅವರ ನಿಧನದಿಂದ ತೆರವಾಗಿದ್ದ ಕಾಂಗ್ರೆಸ್ ಪಕ್ಷದ ಖಜಾಂಚಿ ಹುದ್ದೆಗೆ ಹೊಸಬರನ್ನ ನೇಮಕ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನವದೆಹಲಿ, (ನ.28): ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ನೇಮಕ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಕ್ಷಣದಿಂದ ಜಾರಿಯಾಗುವಂತೆ ಬರುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು (ಶನಿವಾರ) ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಅಹ್ಮದ್‌ ಭಾಯಿ ಇಲ್ಲದ ಕಾಂಗ್ರೆಸ್, ಗಾಂಧಿ ಕುಟುಂಬದ ಕಥೆಯೇನು?

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಪ್ರಕಟಣೆ ಹೊರಡಿಸಿದ್ದು, ಅಹ್ಮದ್‌ ಪಟೇಲ್‌ ಅವರ ನಿಧನದಿಂದಾಗಿ ಈ ಸ್ಥಾನ ತೆರವಾಗಿತ್ತು. ಅಖಿಲ ಭಾರತ ಕಾಂಗ್ರೆಸ್‌ ಸಮಿತಿ(ಎಐಸಿಸಿ) ಆಡಳಿತದ ಹೊಣೆ ಹೊತ್ತಿರುವ ಬನ್ಸಾಲ್‌ ಅವರು, ಮಧ್ಯಂತರ ಕ್ರಮವಾಗಿ ತಕ್ಷಣದಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಈ ಹುದ್ದೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಹ್ಮದ್‌ ಪಟೇಲ್‌ ಅವರ ಕಾಂಗ್ರೆಸ್‌ ಪಕ್ಷದ ಖಜಾಂಚಿಯಾಗಿದ್ದರು. ಆದ್ರೆ, ಅವರ ಅಕಾಲಿಕ ನಿಧನದಿಂದ ಖಜಾಂಚಿ ಹುದ್ದೆ ಖಾಲಿಯಾಗಿತ್ತು.