ರಾಜ್ಯದ ಜನರು ಪ್ರಧಾನಿ ಮೋದಿ ಪರ ನಿಲ್ಲಬೇಕು: ಎಚ್.ಡಿ.ರೇವಣ್ಣ
ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ಮೈಸೂರು (ಮಾ.11): ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾನುವಾರ ಆಯೋಜಿಸಿದ್ದ 4 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು. ಹಾಸನ ಜಿಲ್ಲೆಯೊಂದಕ್ಕೆ 10500 ಕೋಟಿ ರೂ. ಅನುದಾನವನ್ನು ರಸ್ತೆ ಅಭಿವೃದ್ಧಿಗೆ ನೀಡಿದ್ದಾರೆ. ಹತ್ತು ವರ್ಷಗಳಲ್ಲಿ ಹಾಸನ ಜಿಲ್ಲೆಗೆ 35 ಸಾವಿರ ಕೋಟಿ ನೀಡಿದ್ದಾರೆ ಎಂದರು.
ಎಚ್.ಡಿ. ದೇವೇಗೌಡರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುವುದಕ್ಕೆ ಹೋದರೆ ಯಾವುದೇ ಯೋಜನೆಗಳನ್ನು ಕೊಟ್ಟರೂ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ. ದೇಶದಲ್ಲಿ ವಿರೋಧಿಗಳು ಇದ್ದರೂ ನಿತಿನ್ ಗಡ್ಕರಿ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ, ಮುಂದೆಯೂ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪರವಾಗಿ ರಾಜ್ಯದ ಜನ ನಿಲ್ಲಬೇಕು ಎಂದು ಅವರು ಕೋರಿದರು.
ಚಾಮುಂಡಿ ಬೆಟ್ಟದಲ್ಲಿ ₹114 ಕೋಟಿ ವೆಚ್ಚದ ರೋಪ್ ವೇ ನಿರ್ಮಾಣ: ನಿತಿನ್ ಗಡ್ಕರಿ ಘೋಷಣೆ
ಮುಂದಿನ 2047ಕ್ಕೆ ಭಾರತವನ್ನು ಪ್ರಪಂಚದ ನಂ.1 ದೇಶವನ್ನಾಗಿಸುವ ಪ್ರಧಾನಿ ಮೋದಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸಚಿವರಾದ ನಿತಿನ್ ಗಡ್ಕರಿ ಅವರು ಕೆಲಸ ಮಾಡುತ್ತಿದ್ದಾರೆ. ಮಂಡ್ಯ ನಗರದಲ್ಲಿ ಸುಗಮ ಸಂಚಾರಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವ ವಿಶ್ವಾಸವಿದೆ. ಬೆಂಗಳೂರು- ಮೈಸೂರು ಮಾರ್ಗದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹೊರಗೆ- ಒಳಗೆ, ಕೆಳಸೇತುವೆ ಮತ್ತಿತರ ಸೌಲಭ್ಯ ಕಲ್ಪಿಸಿಕೊಡಬೇಕು.
- ಸುಮಲತಾ ಅಂಬರೀಶ್, ಮಂಡ್ಯ ಸಂಸದರು