ಸಿಎಂ ಸಿದ್ದರಾಮಯ್ಯಗೆ ಜನರೇ ನಿವೃತ್ತಿ ಮಾಡ್ತಾರೆ: ಛಲವಾದಿ ನಾರಾಯಣಸ್ವಾಮಿ
ಸಿಎಂ ಸಿದ್ದರಾಮಯ್ಯ ಅವರಿಗೆ ನಿವೃತ್ತಿಯ ಸಮಯ ಬಂದಿದ್ದು, ತಾವಾಗಿಯೇ ನಿವೃತ್ತಿ ಆಗಬೇಕು. ಇಲ್ಲವಾದರೆ, ಜನರೇ ಅವರನ್ನು ಮನೆಗೆ ಕಳುಹಿಸುವ ಮೂಲಕ ನಿವೃತ್ತಿ ಮಾಡಲಿದ್ದಾರೆ ಎಂದು ಶಾಸಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಹುಬ್ಬಳ್ಳಿ (ಫೆ.17): ಸಿಎಂ ಸಿದ್ದರಾಮಯ್ಯ ಅವರಿಗೆ ನಿವೃತ್ತಿಯ ಸಮಯ ಬಂದಿದ್ದು, ತಾವಾಗಿಯೇ ನಿವೃತ್ತಿ ಆಗಬೇಕು. ಇಲ್ಲವಾದರೆ, ಜನರೇ ಅವರನ್ನು ಮನೆಗೆ ಕಳುಹಿಸುವ ಮೂಲಕ ನಿವೃತ್ತಿ ಮಾಡಲಿದ್ದಾರೆ ಎಂದು ಶಾಸಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಸಿದ್ದರಾಮಯ್ಯ ನಾಟಕ ಕಂಪನಿ ದೆಹಲಿಗೆ ಹೋಗಿತ್ತು. ಕೇವಲ ನಾಟಕ ಮಾಡುವುದೇ ಅವರ ಕಾಯಕವಾಗಿದೆ ಎಂದು ಟೀಕಿಸಿದರು. ಪ್ರಧಾನಿ ಮೋದಿ ಅವರು ಅತಿ ಹೆಚ್ಚು ಅನುದಾನ ನೀಡುವ ಮೂಲಕ ಕರ್ನಾಟಕದ ಪರವಾಗಿದ್ದಾರೆ.
ಸಿದ್ದರಾಮಯ್ಯ ಅನುದಾನದ ವಿಷಯದಲ್ಲಿ ಸುಮ್ಮನೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ತಮ್ಮ ಮನೆಗೆ ನೀರು ಬರದಿದ್ದರೂ ಪ್ರಧಾನಿ ಮೋದಿ ಮೇಲೆ ಆರೋಪಿಸುತ್ತಾರೆ. ಸಿದ್ದರಾಮಯ್ಯನವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಆರೋಪಿಸಿದರು. ಚುನಾವಣೆ ಗಿಮಿಕ್‌ಗಾಗಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಅವರು ನೀಡಿದ ಗ್ಯಾರಂಟಿಗೆ ವಾರಂಟಿಯೇ ಇಲ್ಲ. ಅದರಿಂದ ಕಾಂಗ್ರೆಸ್ ಅಳಿವಿನಂಚಿಗೆ ಬಂದು ನಿಂತಿದೆ. ಒಂದೇ ಸಮುದಾಯಕ್ಕೆ 10 ಸಾವಿರ ಕೋಟಿ ಕೊಡ್ತೇನೆ ಎಂದು ಸಿದ್ದರಾಮಯ್ಯ ಅಬ್ಬರಿಸಿದ್ದಾರೆ.
ಕೊಬ್ಬರಿ ಖರೀದಿಯಲ್ಲಿ ಅಕ್ರಮ: ತನಿಖೆಗೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹ
ಬೆಂಗಳೂರಿನವರು ಕೇವಲ ಬೆಂಗಳೂರು ಅಭಿವೃದ್ಧಿ ಆಗಲಿ ಎಂದರೆ, ಇತರರು ಏನು ಮಾಡಬೇಕು? ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿದ್ದಲ್ಲಿ, ಗ್ಯಾರಂಟಿ ಹಿಂಪಡೆಯುವ ಬೆದರಿಕೆಯನ್ನು ಸಿದ್ದರಾಮಯ್ಯ ಹಾಕುತ್ತಿದ್ದಾರೆ. ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ ಮನೆಗೆ ಬಂದಾಗ ತಕ್ಕ ಉತ್ತರ ಕೊಡಲು ಜನತೆ ಕಾಯುತ್ತಾ ಕುಳಿತಿದ್ದಾರೆ. ರಾಜ್ಯದಲ್ಲಿ ಈ ಬಾರಿ 28ಕ್ಕೆ 28 ಲೋಕಸಭಾ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಅಸ್ಪೃಶ್ಯತೆ ಜೀವಂತವಾಗಿರಲು ಕಾಂಗ್ರೆಸ್ ಕಾರಣ: ಅಸ್ಪೃಶ್ಯತೆ ರೂಪಾಂತರವಾಗಿದೆ, ಇದು ಜೀವಾಂತವಾಗಿರಲು ಕಾಂಗ್ರೆಸ್ ಕಾರಣ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಬಿಜೆಪಿ ಎಸ್ಸಿ ಮೋರ್ಚಾ ನಗರದ ಕುವೆಂಪು ಕಲಾಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಲವರ್ಧನೆಗಾಗಿ ಭೀಮ ಸಮಾವೇಶದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಕಾರಣ ನಮ್ಮನ್ನು ಆಳುತ್ತಿದೆ. ನಾವೆಲ್ಲರೂ ಒಗ್ಗಟ್ಟಾಗಿರಬೇಕು, ನಮ್ಮಲ್ಲಿ ಯಾವುದಾದರೂ ಅಪನಂಬಿಕೆ ಇದ್ದರೆ ಅದನ್ನು ಸರಿಪಡಿಸಿಕೊಳ್ಳಬೇಕು, ರಾಜಕಾರಣದಲ್ಲಿ ಮುಂಚೂಣಿಗೆ ಬರಬೇಕು ಎಂದು ಕಿವಿಮಾತು ಹೇಳಿದರು.
ಶೀಘ್ರವೇ ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ: ಮಾಜಿ ಸಚಿವ ಮುರಗೇಶ್ ನಿರಾಣಿ
ಬಿಜೆಪಿ, ದಲಿತರ ವಿರೋಧಿ ಎಂಬ ಭಾವನೆ ಹುಟ್ಟು ಹಾಕಿದ್ದರು. ಆದರೆ, ಅದು ತಪ್ಪೆಂದು ಬಿಜೆಪಿ ಸಾಬೀತು ಪಡಿಸಿದೆ, ಪರಿಶಿಷ್ಟ ಜಾತಿ ಏಳಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈ ಹಿಂದೆ ರಾಜ್ಯದಲ್ಲೂ ಅಧಿಕಾರದಲ್ಲಿತ್ತು ಎಂದ ಅವರು, ರಾಜಕೀಯ ಅಧಿಕಾರ ಮುಖ್ಯ ಎಂದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ತಮ್ಮ ಜೀವನದಲ್ಲಿ ನೋವನ್ನು ಅನುಭವಿಸಿದ್ದರು, ಅಂತಹ ನೋವನ್ನು ನಮ್ಮ ಜನಾಂಗ ಮುಂದೆ ಅನುಭವಿಸಬಾರದೆಂದು ನಮ್ಮಲ್ಲೆರ ಹಿತರಕ್ಷಣೆಗಾಗಿ ಸಂವಿಧಾನ ರಚನೆ ಮಾಡಿದರು. ಇಂದು ಈ ಕಾರ್ಯಕ್ರಮದಲ್ಲಿ ಇಷ್ಟು ಸಂಖ್ಯೆಯಲ್ಲಿ ನಾವುಗಳು ಭಾಗವಹಿಸಿದ್ದೇವೆ ಎಂದರೆ ಇದಕ್ಕೆ ಕಾರಣ ಅಂಬೇಡ್ಕರ್ ಎಂದು ಹೇಳಿದರು.