'ಎಚ್ಡಿಕೆ ಸಿಎಂ ಆಗಿದ್ದಾಗ ಫೋನ್ ಕದ್ದಾಲಿಕೆ'; ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು!
ಫೋನ್ ಕದ್ದಾಲಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರು ಅಧಿಕಾರದಲ್ಲಿದ್ದಾಗ ಯಾವ ರೀತಿ ಪ್ರಕರಣ ನಡೆದಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರು (ಮೇ.23): ಫೋನ್ ಕದ್ದಾಲಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಮ್ಮ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿರುವವರು ಅಧಿಕಾರದಲ್ಲಿದ್ದಾಗ ಯಾವ ರೀತಿ ಪ್ರಕರಣ ನಡೆದಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಫೋನ್ ಕದ್ದಾಲಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು. ಅದೇ ರೀತಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗೃಹ ಸಚಿವರಾಗಿದ್ದರು. ಇವರೆಲ್ಲ ಇದೀಗ ಫೋನ್ ಕದ್ದಾಲಿಕೆ ಬಗ್ಗೆ ಆರೋಪಿಸುತ್ತಿದ್ದಾರೆ. ಸುಮ್ಮನೇ ಮಾತನಾಡುವ ಬದಲು ಫೋನ್ ಕದ್ದಾಲಿಕೆ ಕುರಿತು ಗೃಹ ಸಚಿವರಿಗೆ ಲಿಖಿತ ದೂರು ನೀಡಲಿ. ಯಾರ್‍ಯಾರ ಕಾಲದಲ್ಲಿ ಏನೆಲ್ಲ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
News Hour: ಪ್ರಜ್ವಲ್ ರೇವಣ್ಣಗೆ ಡೆಡ್‌ಲೈನ್ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!
ಫೋನ್ ಕದ್ದಾಲಿಕೆ ವಿಚಾರವಾಗಿ ಸಿಎಂ, ಡಿಸಿಎಂ ಜತೆಯಲ್ಲಿರುವವರೇ ಮಾಹಿತಿ ನೀಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಅವರಿಗೆ ಯಾರೆಲ್ಲ ಮಾಹಿತಿ ನೀಡಿದ್ದಾರೆ ಎಂಬ ಬಗ್ಗೆ ಒಂದು ಪಟ್ಟಿ ಮಾಡಿ ಅಫಿಡವಿಟ್ ಸಲ್ಲಿಸಲಿ ಎಂದು ವ್ಯಂಗ್ಯವಾಡಿದರು.
ಸಚಿವರಿಗೆ ಔತಣ ಕೂಟ ಏರ್ಪಡಿಸಿದ ಬಗ್ಗೆ ಮಾತನಾಡಿ, ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ಲೋಕಸಭೆ ಚುನಾವಣೆಯ ನಿರ್ವಹಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಔತಣಕೂಟ ಏರ್ಪಡಿಸಿದ್ದೇನೆ ಎಂದರು.
ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ
ಲೋಕಸಭೆ ಚುನಾವಣೆ ನಂತರ ಸಚಿವರ ತಲೆದಂಡವಾಗುತ್ತದೆಯೇ ಎಂಬ ಪ್ರಶ್ನೆಗೆ, ಇಂತಹ ವಿಚಾರವನ್ನೆಲ್ಲ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕೆ ಸಾಧ್ಯವಿಲ್ಲ ಎಂದುತ್ತರಿಸಿದರು.