* ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡ್ಬೇಡಿ* ಆತ ದುಶ್ಚಟಗಳಿಗೆ ಬಲಿಯಾಗಿದ್ದಾನೆ * ಸಾರ್ವಜನಿಕರಲ್ಲಿ ಮಾಜಿ ಶಾಸಕ ಮನವಿ
ಹುಬ್ಬಳ್ಳಿ, (ಜುಲೈ.05): ದಯವಿಟ್ಟು ಯಾರೂ ನನ್ನ ಮಗನಿಗೆ ಸಾಲ ಕೊಡಬೇಡಿ ಎಂದು ಬಿಜೆಪಿ ಮಾಜಿ ಶಾಸಕರೊಬ್ಬರು ಸಾರ್ವಜನಿಕರಿಗೆ ಪ್ರಕಟಣೆ ಹೊರಡಿಸಿದ್ದಾರೆ.
ಮಗನ ನಡೆಯಿಂದ ಬೇಸತ್ತ ಮಾಜಿ ಶಾಸಕರೂ ಆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್, . ನನ್ನ ಸ್ವಂತ ಮಗನೇ ನನ್ನ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾನೆ. ನನ್ನ ಪುತ್ರ ಬಾಪೂಗೌಡ ಪಾಟೀಲ್ಗೆ ಯಾರೂ ಸಾಲ ಕೊಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಎಂಗೆ ವಿಶೇಷ ಮಮಕಾರ, ವರುಣಾ ಕ್ಷೇತ್ರಕ್ಕೆ ಭರ್ಜರಿ ಅನುದಾನ
ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ. ದುಶ್ಚಟಕ್ಕೆ ಬಲಿಯಾಗಿ ತನ್ನ ಎಲ್ಲ ಆಸ್ತಿಯನ್ನೂ ಹಾಳು ಮಾಡಿಕೊಂಡಿದ್ದಾನೆ. ಅವನ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದರೂ ಮುಂಗಡ ಚೆಕ್ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ. ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ ಎಂದು NWKSRTC ಲೆಟರ್ಹೆಡ್ ಮೂಲಕವೇ ಮನವಿ ಮಾಡಿದ್ದಾರೆ.
ಪದವೀಧರನಾದ ನನ್ನ ಮಗ, ಐದಾರು ವರ್ಷಗಳಿಂದ ದುಶ್ಚಟಕ್ಕೆ ಬಿದ್ದಿದ್ದಾನೆ. ಕೋಟಿಗಟ್ಟಲೇ ಸಾಲ ಮಾಡಿ, ಸಾಲ ತೀರಿಸಲು ಅವನ ಹೆಸರಿನಲ್ಲಿದ್ದ ಆಸ್ತಿಯನ್ನೂ ಮಾರಿದ್ದಾನೆ, ಅವನ ಮಾನಸಿಕ ಸ್ಥಿತಿ ಸರಿ ಇಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಜನರಿಗೆ ಸುಳ್ಳು ಹೇಳಿ ಸಾಲ ಪಡೆಯುತ್ತಿದ್ದಾನೆ. ದಯವಿಟ್ಟು ಸಾರ್ವಜನಿಕರು ನನ್ನ ಮಗನ ಮಾತಿಗೆ ಮರುಳಾಗಿ ಸಾಲ ಕೊಡಬಾರದು. ಮೋಸ ಹೋಗಬಾರದು ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ್ ಮಾಧ್ಯಮಗಳಿಗೆ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿ.ಎಸ್.ಪಾಟೀಲ ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಶಿವರಾಮ ಹೆಬ್ಬಾರ ಅವರ ಎದುರಾಳಿಯಾಗಿದ್ದರು. 2008ರಲ್ಲಿ ಶಿವರಾಮ ಹೆಬ್ಬಾರ ಅವರನ್ನು ಸೋಲಿಸಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013 ಹಾಗೂ 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಹೆಬ್ಬಾರ ವಿರುದ್ಧವೇ ಸೋಲು ಕಂಡಿದ್ದರು.
ಆದ್ರೆ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಲ್ಲಾಪುರ- ಮುಂಡಗೋಡ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ ಅವರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿದ್ದರು.
