ಪ್ರಧಾನಿ ಮೋದಿ ಗ್ಯಾರಂಟಿಯಿಂದ ಜನರಿಗೆ ಅನುಕೂಲ: ಕೇಂದ್ರ ಸಚಿವ ಕ್ರಿಶನ್ ಪಾಲ್
ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.
ಮಾಗಡಿ (ಜ.06): ದೇಶದ ಜನರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿ ಯೋಜನೆಗಳಿಂದ ರೈತರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ತಿಳಿಸಿದರು.
ತಾಲೂಕಿನ ಕಲ್ಯಾ ಗ್ರಾಮದ ಶ್ರೀ ಉರಿಗದ್ದಿಗೇಶ್ವರ ಪ್ರೌಢಶಾಲೆ ಆವರಣದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೋದಿ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಸ್ತರದ ಜನರಿಗೆ ತಲುಪಿಸಿ, ಪ್ರತಿ ಗ್ರಾಮದಲ್ಲೂ ಪ್ರಚುರ ಪಡಿಸಬೇಕು ಎಂಬ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೋದ್ರಾ ಮಾದರಿ ದಾಳಿ: ಹರಿಪ್ರಸಾದ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಡಿ.ಕೆ.ಸುರೇಶ್
ವಿಕಸಿತ ಭಾರತ ಸಂಕಲ್ಪಯಾತ್ರೆ ವೇಳೆ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಮಾಹಿತಿಯನ್ನು ವಿವರಿಸಲಾಗುವುದು. ಅಂತೆಯೇ ಯೋಜನೆಯ ಲಾಭ ಪಡೆಯದ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಮಾಡಲಾಗುವುದು. ದೇಶ ಎಲ್ಲ ಜನರ ಅಭಿವೃದ್ಧಿಯೇ ಕೇಂದ್ರ ಸರ್ಕಾರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸರಕಾರ ಯಾವುದೇ ಇರಲಿ ಜನರಿಗೆ ಯೋಜನೆಯ ಲಾಭವನ್ನು ತಲುಪಿಸುವುದು ಸರಕಾರ ಮತ್ತು ಅಧಿಕಾರಿಗಳ ಅಶಯವಾಗಬೇಕು. ಆದರೆ ಈ ಆಶಯಕ್ಕೆ ವಿರುದ್ಧವಾಗಿ ರಾಜ್ಯ ಸರಕಾರ ನಡೆದುಕೊಳ್ಳುತ್ತಿರುವುದು ನೋಡಿದರೆ ಜನರ ಪರಿಸ್ಥಿತಿ ಕೆಳ ಮಟ್ಟದಲ್ಲಿಡಬೇಕು. ಜನರಿಗೆ ಯಾವುದೇ ಯೋಜನೆ ನೀಡಬಾರದು ಎಂಬ ಕೆಟ್ಟ ಉದ್ದೇಶ ರಾಜ್ಯ ಸರಕಾರಕ್ಕಿರುವಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರದ ಯೋಜನೆಗಳು ಕಡುಬಡವರಿಗೂ ದೊರೆಯಲಿ: ಸಚಿವ ಕ್ರಿಶನ್ ಪಾಲ್
ಪಿಡಿಒಗೆ ತರಾಟೆ: ಕೇಂದ್ರ ಸರಕಾರದ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಇದರಿಂದ ಜನರಿಲ್ಲದೆ ಕಾರ್ಯಕ್ರಮಕ್ಕೆ ಬರುವ ಕೇಂದ್ರ ಸಚಿವರಿಗೆ ಇರಿಸುಮುರಿಸಾಗುತ್ತದೆ. ಜವಾಬ್ದಾರಿ ಇಲ್ಲದಿದ್ದರೆ ಬೇರೆಡೆ ವರ್ಗಾವಣೆಯಾಗಿ ಎಂದು ಕಲ್ಯ ಗ್ರಾಪಂ ಪಿಡಿಒ ಸೋಮಶೇಖರ್ ಅವರನ್ನು ಬಿಜೆಪಿ ಮುಖಂಡ ವೀರಭದ್ರ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಇದಕ್ಕೆ ಬಿಜೆಪಿ ಉಸ್ತುವಾರಿ ಅಶ್ವಥನಾರಾಯಣಗೌಡ ಧ್ವನಿಗೂಡಿಸಿದರು. ಕಾರ್ಯಕ್ರಮದಲ್ಲಿ ಎಂಎಲ್ಸಿಗಳಾದ ಸಿಪಿ.ಯೋಗೇಶ್ವರ್, ಕೇಶವ ಪ್ರಸಾದ್, ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ, ಜಿಲ್ಲಾಧ್ಯಕ್ಷ ಉಳುವಾಡಿ ದೇವರಾಜು, ಬಿಜೆಪಿ ಮುಖಂಡ ಕೆ.ಆರ್.ಪ್ರಸಾದ್ ಗೌಡ, ಗ್ರಾ.ಪಂ. ಸದಸ್ಯ ನಾಗರಾಜು ಇದ್ದರು.