Asianet Suvarna News Asianet Suvarna News

RR ನಗರ ಉಪಕದನ: ಸಿದ್ದರಾಮಯ್ಯ ಪ್ರಚಾರದ ವೇಳೆ ಪ್ರಧಾನಿ ಮೋದಿ ಪರ ಜೈಕಾರ

ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಕೈ ಕಾರ್ಯಕರ್ತರ ಹೋರಾಟ|ಕಾಂಗ್ರೆಸ್‌ ಅಭ್ಯರ್ಥಿ ಸಹ ಪ್ರತಿಭಟನೆಯಲ್ಲಿ ಭಾಗಿ| ಯಶವಂತಪುರ ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ|

PM Narendra Modi Pro Slogan During Siddaramaiah Campaign in Bengaluru grg
Author
Bengaluru, First Published Oct 28, 2020, 10:28 AM IST

ಬೆಂಗಳೂರು(ಅ.28): ರಾಜರಾಜೇಶ್ವರಿ ನಗರ ಕ್ಷೇತ್ರದ ಯಶವಂತಪುರ ವಾರ್ಡ್‌ನಲ್ಲಿ ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಪ್ರಚಾರ ಭಾಷಣ ನಡೆಸುವಾಗ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಅವರ ಪರ ಜೈಕಾರ ಕೂಗಿ ಅಡ್ಡಿಪಡಿಸಿದ ಘಟನೆ ನಡೆದಿದೆ. 

ಇದರ ಬೆನ್ನಲ್ಲೇ ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಯಶವಂತಪುರ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿ ಸಿದ್ದರಾಮಯ್ಯ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ ತಡರಾತ್ರಿ ವರೆಗೂ ಪ್ರತಿಭಟನೆ ನಡೆಸಿದ್ದಾರೆ. 

ಮತದಾರರ ಬೆನ್ನಿಗೆ ಚೂರಿ ಹಾಕಿದ ಮುನಿರತ್ನಗೆ ತಕ್ಕಪಾಠ ಕಲಿಸಿ: ಸಿದ್ದರಾಮಯ್ಯ

ಈ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರೇ ಸ್ವತಃ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಸಂಸದ ಡಿ.ಕೆ.ಸುರೇಶ್‌, ಶಾಸಕ ಬೈರತಿ ಸುರೇಶ್‌ ಸೇರಿದಂತೆ ಕಾಂಗ್ರೆಸ್‌ ಪ್ರಮುಖ ಮುಖಂಡರು ಸಹ ಯಶವಂತಪುರ ಠಾಣೆ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರ ಹೋರಾಟಕ್ಕೆ ಸಾಥ್‌ ನೀಡಿದ್ದಾರೆ. 
 

Follow Us:
Download App:
  • android
  • ios