ಮೋದಿ ಸರ್ಕಾರ ನಿರಂತರವಾಗಿ ಭಾರತದ ರಾಜ್ಯಗಳ ಆರ್ಥಿಕತೆಯ ಕತ್ತು ಹಿಸುಕುತ್ತಿದೆ. ಈಗ ಕರ್ನಾಟಕದ ಜನರು ಬೆಲೆ ತೆರಬೇಕಾಗಿ ಬಂದಿದೆ. ಅವರು ತಮ್ಮ ಹಕ್ಕು ಚಲಾಯಿಸಿ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಸರ್ಕಾರ ಹೀಗೆ ಸೇಡು ತೀರಿಸಿಕೊಳ್ಳುತ್ತಿದೆ: ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ 

ನವದೆಹಲಿ(ಮಾ.26):  ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಬೇಕಿದ್ದ ಬರ ಪರಿಹಾರ ಸೇರಿದಂತೆ ವಿವಿಧ ಅನುದಾನಗಳನ್ನು ತಡೆಹಿಡಿದಿದೆ ಎಂಬ ರಾಜ್ಯ ಸರ್ಕಾರದ ಕೂಗಿಗೆ ಇದೀಗ ಕಾಂಗ್ರೆಸ್‌ ಹೈಕಮಾಂಡ್‌ ಕೂಡ ದನಿಗೂಡಿಸಿದೆ. ಕರ್ನಾಟಕದ ಜನರು ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಮೋದಿ ಸರ್ಕಾರ ಅನುದಾನ ತಡೆಹಿಡಿಯುವ ಮೂಲಕ ಶಿಕ್ಷೆ ವಿಧಿಸುತ್ತಿದೆ. ಇದು ಬಿಜೆಪಿಯ ಸ್ವಾರ್ಥ ಮತ್ತು ಕ್ಷುಲ್ಲಕ ರಾಜಕಾರಣ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಕಿಡಿಕಾರಿದ್ದಾರೆ. 

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್‌ಗೆ ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿರುವ ಜೈರಾಂ ರಮೇಶ್‌, ಮೋದಿ ಸರ್ಕಾರ ನಿರಂತರವಾಗಿ ಭಾರತದ ರಾಜ್ಯಗಳ ಆರ್ಥಿಕತೆಯ ಕತ್ತು ಹಿಸುಕುತ್ತಿದೆ. ಈಗ ಕರ್ನಾಟಕದ ಜನರು ಬೆಲೆ ತೆರಬೇಕಾಗಿ ಬಂದಿದೆ. ಅವರು ತಮ್ಮ ಹಕ್ಕು ಚಲಾಯಿಸಿ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಸರ್ಕಾರ ಹೀಗೆ ಸೇಡು ತೀರಿಸಿಕೊಳ್ಳುತ್ತಿದೆ. ಹಣಕಾಸು ಸಚಿವರು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಆದರೂ,12,000 ಕೋಟಿ ರು.ಗಿಂತ ಹೆಚ್ಚಿನ ಅನುದಾನವನ್ನು ಕರ್ನಾಟಕಕ್ಕೆ ತಡೆಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ 2024: ಬಿಜೆಪಿ ಜತೆ ಮೈತ್ರಿ ಯಶಸ್ಸಿಗೆ ಜೆಡಿಎಸ್‌ ಅಷ್ಟಸೂತ್ರ..!

‘ಹಣಕಾಸು ಆಯೋಗ ಕರ್ನಾಟಕಕ್ಕೆ 5495 ಕೋಟಿ ರು. ವಿಶೇಷ ಅನುದಾನ ಹಾಗೂ 6000 ಕೋಟಿ ರು. ನಿರ್ದಿಷ್ಟ ಯೋಜನೆಗಳ ಅನುದಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಕರ್ನಾಟಕ ಪ್ರತಿ ವರ್ಷ ಕೇಂದ್ರಕ್ಕೆ 4.3 ಲಕ್ಷ ಕೋಟಿ ರು. ತೆರಿಗೆ ನೀಡುತ್ತಿದೆ. ಎಂದು ವಾಗ್ದಾಳಿ ನಡೆಸಿದ್ದಾರೆ.