Loksabha Elections 2024: ಮಾ. 15ರಿಂದ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪ್ರವಾಸ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಮಾ. 15ರಂದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.

PM Narendra Modi's Tour in Karnataka from March 15th grg

ಹುಬ್ಬಳ್ಳಿ(ಮಾ.12): ಲೋಕಸಭೆ ಚುನಾವಣೆಯ ನಿಮಿತ್ತ ಕರುನಾಡಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಧಾರವಾಡ ಸೇರಿ ರಾಜ್ಯದ 5 ಕಡೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಮಾ. 15ರಂದು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.

ಮಾ. 15ರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಅವರನ್ನು ಬರಮಾಡಿಕೊಳ್ಳಲಿದ್ದು, ನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾ.16 ರಂದು ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಮಾ. 17ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್‌)ದಲ್ಲಿ ಸಭೆ ಆಯೋಜಿಸಲಾಗಿದೆ.

ಲೋಕಸಭಾ ಚುನಾವಣೆ 2024: ಬಿಜೆಪಿ ಜತೆ ಟಿಕೆಟ್‌ ಸಭೆ: ಇಂದು/ನಾಳೆ ಎಚ್‌ಡಿಕೆ ದಿಲ್ಲಿಗೆ

ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಈ ಸಭೆ ನಿಗದಿಗೊಳಿಸಲಾಗಿದೆ.

Latest Videos
Follow Us:
Download App:
  • android
  • ios