ಕಾಂಗ್ರೆಸ್‌ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ, ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕೆ ಮಾಡಿದೆ.

ಬೆಂಗಳೂರು (ಆ.23): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಸ್ರೋ ಕೇಂದ್ರ ಕಚೇರಿಯ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಮೋದಿ ಸಾಗುವ ರಸ್ತೆಯ ಬಳಿ ಇರಿಸಲಾಗಿದ್ದ ಬ್ಯಾರಿಕೇಡ್‌ನ ಹೊರಗೆ ರಾಜ್ಯ ಬಿಜೆಪಿ ಘಟಾನುಘಟಿ ನಾಯಕರು ನಿಂತು ಕೈಬೀಸಿದ್ದರು. ಈ ದೃಶ್ಯವನ್ನು ಕಾಂಗ್ರೆಸ್‌ ಕಟುವಾಗಿ ಟೀಕಿಸಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೋ ಕೇಂದ್ರಕ್ಕೆ ಹೋಗುವ ಮುನ್ನ ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಈ ವೇಳೆ ಬಿಜೆಪಿಯ ಹಲವು ಘಟನಾನುಘಟಿ ನಾಯಕರು ರಸ್ತೆ ಬಳಿಯ ಬ್ಯಾರಿಕೇಡ್‌ ಬಳಿ ನಿಂತು ಪ್ರಧಾನಿ ಮೋದಿಯ ಆಗಮನಕ್ಕಾಗಿ ಕಾಯುತ್ತಿದ್ದು, ಅವರತ್ತ ಕೈಬೀಸಿದರು. ಆದರೆ, ಈ ವೇಳೆ ಕಂಡುಬಂದ ದೃಶ್ಯವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ, ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ ಎಂದು ಟೀಕೆ ಮಾಡಿದೆ.

ಕಾಂಗ್ರೆಸ್‌ ಸೇರೊಲ್ಲವೆಂದು ಹೇಳುತ್ತಲೇ ಸಿಎಂ ಸಿದ್ದರಾಮಯ್ಯ ಭೇಟಿಯಾದ ಶಾಸಕ ಶಿವರಾಂ ಹೆಬ್ಬಾರ್

ಈ ಕುರಿತು ಕರ್ನಾಟಕ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯಿಂದ ಬಿಜೆಪಿ ನಾಯಕರನ್ನು ಲೇವಡಿ ಮಾಡಿ ಟ್ವೀಟ್‌ ಮಾಡಲಾಗಿದೆ. ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ, ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಬಿಜೆಪಿ ನಾಯಕರನ್ನು ಕುಟುಕಿದೆ.

ಸರ್ವಾಧಿಕಾರದ ಸಂತ್ರಸ್ಥರಾದ ಬಿಜೆಪಿ ನಾಯಕರು: ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ "ವಿರೋಧ ಪಕ್ಷದ ನಾಯಕ"ನ ಆಯ್ಕೆ ಸಾಧ್ಯವಾಗುವುದೇ? "ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ" ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಸಾಮಾಜಿಕ ಜಾಲತಾಣದ (ಟ್ವೀಟ್‌) ಮೂಲಕ ಟೀಕೆ ಮಾಡಿದ್ದಾರೆ. 

Scroll to load tweet…

ರಾಜ್ಯ ಬಿಜೆಪಿ ನಾಯಕರಿಗೆ ದೊಡ್ಡ ಅಪಮಾನ: ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ ಬಿಜೆಪಿ ನಾಯಕರಿಗೂ ಅವಕಾಶ ಕೊಟ್ಟಿಲ್ಲ. ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಬೊಮ್ಮಾಯಿಯವರನ್ನು ಕೂಡ ಹತ್ತಿರಕ್ಕೆ ಬಿಟ್ಟು ಕೊಳ್ಳಲಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಇದಕ್ಕಿಂತ ಅಪಮಾನವುಂಟೆ? ಬಿಜೆಪಿ ನಾಯಕರಿಗೆ ಕಿಂಚಿತ್ತಾದರೂ ಆತ್ಮಗೌರವ ಬೇಡವೆ? ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟೀಕೆ ಮಾಡಿದ್ದಾರೆ. ಸರಣಿ ಟ್ವೀಟ್‌ಗಳ ವಿವರ ಇಲ್ಲಿದೆ ನೋಡಿ..

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ದರೋಡೆಯಿಂದ ತಪ್ಪಿಸಿಕೊಳ್ಳಬೇಕೇ? ಈ ನಿಯಮ ಪಾಲಿಸಿ: ಸಂಸದ ಪ್ರತಾಪ್‌ಸಿಂಹ

Scroll to load tweet…