Karnataka Assembly Elections 2023: ನಾಳೆ, ನಾಡಿದ್ದು ಕರ್ನಾಟಕದಲ್ಲಿ ಮೋದಿ ಅಬ್ಬರ
ಪ್ರಧಾನಿ ನರೇಂದ್ರ ಮೋದಿ ಏ.30ರಂದು ಬೆಳಿಗ್ಗೆ 11.30ಕ್ಕೆ ಕೋಲಾರ, ಮಧ್ಯಾಹ್ನ 1 ಗಂಟೆಗೆ ಚನ್ನಪಟ್ಟಣ, ಸಂಜೆ 4 ಗಂಟೆಗೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ಮೈಸೂರಿನಲ್ಲಿ ಜೆಎಸ್‌ಎಸ್ ವಿದ್ಯಾಪೀಠ ವೃತ್ತದಿಂದ ಬನ್ನಿಮಂಟಪ ವೃತ್ತದವರೆಗೆ ಸುಮಾರು 5 ಕಿ.ಮೀ. ದೂರ ರೋಡ್ ಶೋ ನಡೆಸಲಿದ್ದಾರೆ.
ಬೆಂಗಳೂರು(ಏ.28): ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮತ್ತು ಭಾನುವಾರ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಧಾನಿ ಮೋದಿ ಶನಿವಾರ ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲೆ ಹುಮ್ನಾಬಾದ್, ಮಧ್ಯಾಹ್ನ 1 ಗಂಟೆಗೆ ವಿಜಯಪುರ, ಮಧ್ಯಾಹ್ನ ಗಂಟೆಗೆ ಬೆಳಗಾವಿ ಜಿಲ್ಲೆ ಕುಡಚಿಯಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಖರ್ಗೆ, ಸಿದ್ದು ಹೇಳಿಕೆಯಿಂದ ಕಾಂಗ್ರೆಸ್‌ನೊಳಗೆ ತಳಮಳ..!
ಅಂದು ಸಂಜೆ ಬೆಂಗಳೂರಿನಲ್ಲಿ ಮಾಗಡಿ ರಸ್ತೆಯ ನೈಸ್ ರೋಡ್‌ನಿಂದ ಸುಮನಹಳ್ಳಿವರೆಗೆ ಸುಮಾರು 4.5 ಕಿ.ಮೀ. ದೂರ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋಗೆ ಸುಮಾರು 450 ಬ್ಲಾಕ್‌ಗಳನ್ನು ಸಂಯೋಜಿಸಲಾಗಿದೆ ಎಂದು ತಿಳಿಸಿದರು.