ಮಧ್ಯಪ್ರದೇಶದ ಭೂಪಾಲ್‌ನಿಂದ ಸಂಜೆ 4ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಮೋದಿ ಅವರು 4.30ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 

ಬೆಂಗಳೂರು(ಏ.13): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದ ಮೈಸೂರು ಮತ್ತು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮಧ್ಯಪ್ರದೇಶದ ಭೂಪಾಲ್‌ನಿಂದ ಸಂಜೆ 4ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಮೋದಿ ಅವರು 4.30ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಕನ್ನಡಿಗರಿಗೇನು ಕೊಟ್ಟಿದ್ದಾರೆಂದು ಹೇಳಲಿ: ಸಚಿವ ಪ್ರಿಯಾಂಕ್ ಖರ್ಗೆ

ಬಳಿಕ ಅಲ್ಲಿಂದ ಮಂಗಳೂರಿಗೆ ತೆರಳುವ ಮೋದಿ ಅವರು ಸಂಜೆ 6.40ಕ್ಕೆ ತಲುಪಲಿದ್ದಾರೆ. ಅಲ್ಲಿ 7ರಿಂದ 8ಗಂಟೆವರೆಗೆ ಒಂದು ಗಂಟೆ ಕಾಲ ನಾರಾಯಣ ವೃತ್ತದಿಂದ ನವಭಾರತ್‌ ವೃತ್ತದವರೆಗೆ ರೋಡ್‌ ಶೋ ನಡೆಸಲಿದ್ದಾರೆ. ನಂತರ ರಾತ್ರಿ ಮಂಳೂರಿನಿಂದ ಕೇರಳದ ಕೊಚ್ಚಿಗೆ ಪ್ರಯಾಣಿಸಲಿದ್ದಾರೆ.